ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಲ್ಲ: ಎಚ್.ಡಿ.ದೇವೇಗೌಡ
![ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಲ್ಲ: ಎಚ್.ಡಿ.ದೇವೇಗೌಡ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಲ್ಲ: ಎಚ್.ಡಿ.ದೇವೇಗೌಡ](/images/placeholder.jpg)
ಬೆಂಗಳೂರು, ಜು.26: ರಾಜ್ಯದಲ್ಲಿ ಉಂಟಾಗಿರುವ ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.
ಶುಕ್ರವಾರ ನಗರದ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಆನಂತರ ಅವರು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತು ಪಡಿಸುತ್ತಾರೆ ಎಂದರು.
ಸೋಮವಾರ ಅಥವಾ ಮಂಗಳವಾರ ಬಹುಶಃ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬಹುದು. ಜು.31ರೊಳಗಾಗಿ ಧನ ವಿನಿಯೋಗ ಮಸೂದೆಯು ವಿಧಾನಮಂಡಲದಲ್ಲಿ ಮಂಡನೆಯಾಗಿ ಅನುಮೋದನೆ ಪಡೆದುಕೊಳ್ಳಬೇಕಿದೆ ಎಂದು ಅವರು ಹೇಳಿದರು.
Next Story