Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಏಳದೆ ಮಂದಾರ ರಾಮಾಯಣ: ಸುಗಿಪು-ದುನಿಪು...

ಏಳದೆ ಮಂದಾರ ರಾಮಾಯಣ: ಸುಗಿಪು-ದುನಿಪು ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ26 July 2019 8:44 PM IST
share
ಏಳದೆ ಮಂದಾರ ರಾಮಾಯಣ: ಸುಗಿಪು-ದುನಿಪು ಉದ್ಘಾಟನೆ

ಮಂಗಳೂರು, ಜು.26: ಹಿರಿಯ ಸಾಹಿತಿ ಮಂದಾರ ಕೇಶವ ಭಟ್ಟರು ಮೂಲ ರಾಮಾಯಣದ ಕಥೆಯನ್ನು ಆಧರಿಸಿ ರಾಮಾಯಣ ಬರೆದಿದ್ದರೂ ಸನ್ನಿವೇಶಗಳೆಲ್ಲವೂ ಮನಸ್ಸಿಗೆ ಮುಟ್ಟುವಂತೆ ಹಾಗೂ ಸುಲಭವಾಗಿ ಅರ್ಥವಾಗುವಂತೆ ಮಂದಾರ ರಾಮಾಯಣ ಮೂಡಿಬಂದಿದೆ. ಮೂಲತ: ಕರಾಡ ಭಾಷಿಕರಾಗಿದ್ದರೂ ಅವರ ತುಳುವಿನ ಪ್ರೇಮ ಈ ಗ್ರಂಥದಲ್ಲಿ ಪ್ರಜ್ವಲಿಸುತ್ತಿದೆ. ತುಳುವಿನ ಭಾಷಾ ಪ್ರೌಢಿಮೆ ಶಬ್ದ ಭಂಡಾರಗಳು ಹಾಗೂ ತುಳುನಾಡಿನ ಆಚಾರ ವಿಚಾರ, ಪ್ರಕೃತಿ ಸೌಂದರ್ಯ ಈ ತುಳು ಮಹಾಕಾವ್ಯದಲ್ಲಿ ಎದ್ದು ತೋರುವುದರಿಂದ ಇದು ತುಳುನಾಡಿನ ಅಸ್ಮಿತೆಯನ್ನು ಸಾರುವ ಮೇರು ಕೃತಿಯಾಗಿದೆ ಎಂದು ಹಿರಿಯ ಯಕ್ಷಗಾನ ಅರ್ಥಧಾರಿ ಮತ್ತು ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ.

ತುಳುವರ್ಲ್ಡ್ ಕುಡ್ಲ ಹಾಗೂ ತುಳುವೆರೆ ಕೂಟ ಶಕ್ತಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಕ್ತಿನಗರದ ತುಳುವೆರೆ ಚಾವಡಿಯಲ್ಲಿ ನಡೆಯುತ್ತಿರುವ ‘ಏಳದೆ ರಾಮಾಯಣ: ಸುಗಿಪು-ದುನಿಪು’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿಯೊಂದು ಅಧ್ಯಾಯಕ್ಕೂ ತುಳುವಿನ ಸೂಕ್ತವಾದ ಶಿರೋನಾಮೆಯನ್ನು ನೀಡುವಲ್ಲಿ ಕೇಶವ ಭಟ್ಟರು ತನ್ನ ಸಾಹಿತ್ಯ ಪ್ರೌಢಿಮೆಯನ್ನು ತೋರಿಸಿದ್ದಾರೆ. ಇಂತಹ ಮಹಾನ್ ಗ್ರಂಥವು ಯಾವುದೇ ಭಾರತೀಯ ಮಹಾಕಾವ್ಯಗಳಿಗೆ ಕಡಿಮೆಯಲ್ಲ. ಮಂದಾರ ಕೇಶವ ಭಟ್ಟರ 101ನೇ ಜನ್ಮ ವರ್ಷದಲ್ಲಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಪ್ರಭಾಕರ ಜೋಶಿ ನುಡಿದರು.

ತುಳು ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರಿನ ತುಳುವೆರೆ ಆಯನ ಕೂಟದ ಗೌರವಾಧ್ಯಕ್ಷ ಡಾ. ಆರೂರು ಪ್ರಸಾದ್ ರಾವ್ ಅಧ್ಯಕ್ಷತೆ ವಹಿಸಿದ್ದರು. ನಮ್ಮ ತುಳುನಾಡು ಟ್ರಸ್ಟ್ನ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಜಯಚಂದ್ರ ವರ್ಮಾ ರಾಜಮಾಯಿಪ್ಪಾಡಿ, ತುಳು ಅಕಾಡಮಿಯ ಸದಸ್ಯರಾದ ಶಿವಾನಂದ ಕರ್ಕೇರ, ದುರ್ಗಾ ಮೆನನ್, ಸಂಘಟಕ ನವನೀತ ಶೆಟ್ಟಿ ಕದ್ರಿ, ಮಂದಾರ ಶಾರದಾಮಣಿ, ಅಖಿಲ ಭಾರತ ತುಳು ಒಕ್ಕೂಟದ ಕೋಶಾಧಿಕಾರಿ ಕರುಣಾಕರ ಶೆಟ್ಟಿ ಮುಲ್ಕಿ, ಬಿಕರ್ನಕಟ್ಟೆ ವೀರಾಂಜನೇಯ ವ್ಯಾಯಾಮ ಶಾಲೆಯ ಅಧ್ಯಕ್ಷ ಚಂದ್ರಶೇಖರ ಕರ್ಕೇರ, ತುಳುವೆರೆ ಕೂಟದ ಉಪಾಧ್ಯಕ್ಷ ಎನ್.ವಿಶ್ವನಾಥ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂದಾರ ಸನ್ಮಾನ್: ಈ ಸಂದರ್ಭ ಡಾ.ಆರೂರು ಪ್ರಸಾದ್ ರಾವ್, ಎ.ಸಿ. ಭಂಡಾರಿ, ಡಾ.ಎಂ.ಪ್ರಭಾಕರ ಜೋಶಿ, ಹರಿಕೃಷ್ಣ ಪುನರೂರು, ಡಾ. ಜಯಚಂದ್ರ ವರ್ಮ ರಾಜ ಮಾಯಿಪ್ಪಾಡಿ ದಂಪತಿ ಅವರನ್ನು ಮಂದಾರ ಸನ್ಮಾನ್ ನೀಡಿ ಗೌರವಿಸಲಾಯಿತು. ಮಂದಾರ ರಾಮಾಯಣ ಸಪ್ತಾಹ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಆಶಯ ಭಾಷಣ ಮಾಡಿದರು.

ತುಳು ವರ್ಲ್ಡ್ ಅಧ್ಯಕ್ಷ ಡಾ. ರಾಜೇಶ್ ಆಳ್ವ ಬದಿಯಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಳುವೆರೆ ಕೂಟ ಶಕ್ತಿನಗರದ ಅಧ್ಯಕ್ಷೆ ಭಾರತಿ ಜಿ. ಅಮೀನ್ ಸ್ವಾಗತಿಸಿದರು. ತುಳುವೆರೆ ಕೂಟದ ಕಾರ್ಯದರ್ಶಿ ಸುಧಾಕರ ಜೋಗಿ ವಂದಿಸಿದರು. ದಯಾನಂದ ಕತ್ತಲ್ಸಾರ್ ಕಾರ್ಯಕ್ರಮ ನಿರೂಪಿಸಿದರು.

ನಾಂದಿ ವಾಚನ: ಪುಂಚದ ಬಾಲೆ: ಈ ಸಂದರ್ಭ ನಾಂದಿ ವಾಚನಕ್ಕಾಗಿ ಮಂದಾರ ರಾಮಾಯಣ ಗ್ರಂಥದ ಪ್ರತಿಯನ್ನು ತುಳು ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಪ್ರವಚನಕಾರರಿಗೆ ಹಸ್ತಾಂತರಿಸಿದರು. ನಂತರ ‘ಏಳದೆ ಮಂದಾರ ರಾಮಾಯಣ’ದ ಪ್ರಥಮ ಅಧ್ಯಾಯ ‘ಪುಂಚದ ಬಾಲೆ’ ಸುಗಿಪು - ದುನಿಪು ನಡೆಯಿತು. ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಪ್ರವಚನ ನಡೆಸಿಕೊಟ್ಟರು. ತೋನ್ಸೆ ಪುಷ್ಕಳ ಕುಮಾರ್ ಹಾಗೂ ಮಂಜುಳಾ ಜಿ. ರಾವ್ ಇರಾ ಕಾವ್ಯ ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X