ಡಿಎಲ್ ಇಡಿ, ಡಿಪಿ ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ
ಮಂಗಳೂರು, ಜು.25: 2019-20ನೇ ಸಾಲಿನಲ್ಲಿ ಡಿಎಲ್ ಇಡಿ ಮತ್ತು ಡಿಪಿ ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜು.31ರೊಳಗೆ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್ www.schooleducation.kar.nic.in ನಲ್ಲಿರುವ ದಾಖಲಾತಿ ಅರ್ಜಿಯನ್ನು ಪಡೆದು ಸಲ್ಲಿಸಬೇಕು.
ಡಿಎಲ್ ಇಡಿ ಕೋರ್ಸಿಗೆ ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಎಸ್ಸಿ/ಎಸ್ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ ಶೇ.45 ಮತ್ತು ಇತರೆ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ ಶೇ.50 ಅಂಕಗಳನ್ನು ಪಡೆದಿರಬೇಕು. ಡಿಪಿ ಇಡಿ. ಕೋರ್ಸಿಗೆ ಸೇರುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ./12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಟ ಶೇ.45 ಅಂಕಗಳನ್ನು ಹಾಗೂ ಶಿಕ್ಷಣ ಇಲಾಖೆ ಅಥವಾ ವಿಶ್ವ ವಿದ್ಯಾನಿಲಯ ಅಥವಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ರಾಜ್ಯ/ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಟ ಶೇ.40 ಅಂಕಗಳನ್ನು ಪಡೆದಿರಬೇಕು.
ಮಾಹಿತಿಗಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಜೈಲ್‌ರಸ್ತೆ, ಕೊಡಿಯಾಲ್‌ಬೈಲು (ದೂ.ಸಂ: 0824-2493052) ಸಂಪರ್ಕಿಸಬಹುದು.
ಸರಕಾರದ ಆದೇಶದಂತೆ ಬಲ್ಮಠದ ಸರಕಾರಿ ಮಹಿಳಾ ಶಿಕ್ಷಕಿಯರ ತರಬೇತಿ ಸಂಸ್ಥೆಯನ್ನು ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯೊಂದಿಗೆ ವಿಲೀನಗೊಳಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸುವ ವೇಳೆ ಅಭ್ಯರ್ಥಿಗಳು ಸರಕಾರಿ ಮಹಿಳಾ ಶಿಕ್ಷಕಿಯರ ತರಬೇತಿ ಸಂಸ್ಥೆಯ ಬದಲು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಕೊಡಿಯಾಲ್‌ಬೈಲು, ಮಂಗಳೂರು, ದ.ಕ ಈ ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಪ್ರಕಟನೆ ತಿಳಿಸಿದೆ.







