Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೆವಳುತ್ತಾ ಸಾಗುತ್ತಿರುವ ಬಿಬಿಎಂಪಿ ಕಸ...

ತೆವಳುತ್ತಾ ಸಾಗುತ್ತಿರುವ ಬಿಬಿಎಂಪಿ ಕಸ ನಿರ್ವಹಣೆಯ ಟೆಂಡರ್

ವಾರ್ತಾಭಾರತಿವಾರ್ತಾಭಾರತಿ26 July 2019 10:48 PM IST
share
ತೆವಳುತ್ತಾ ಸಾಗುತ್ತಿರುವ ಬಿಬಿಎಂಪಿ ಕಸ ನಿರ್ವಹಣೆಯ ಟೆಂಡರ್

ಬೆಂಗಳೂರು, ಜು.26: ರಾಜಧಾನಿಯಲ್ಲಿ ಕಸದ ಸಮಸ್ಯೆಯನ್ನು ನಿವಾರಿಸಲು ಸೆ.1ರಿಂದ ಹಸಿ ಕಸ ಸಂಗ್ರಹ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಹೇಳುತ್ತಾ ಬಂದಿದ್ದಾರೆ. ಆದರೆ, ಗುತ್ತಿಗೆ ಪದ್ಧತಿ ಜಾರಿಗೆ ಬರುವ ಲಕ್ಷಣಗಳೇ ಕಂಡು ಬರುತ್ತಿಲ್ಲ.

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಯು ಜುಲೈ ಅಂತ್ಯದೊಳಗೆ ಮುಗಿಯಲಿದ್ದು, ಆಗಸ್ಟ್‌ನಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗುವುದು. ಸೆ.1ರಿಂದ ಮನೆ ಮನೆಗಳಿಂದ ಹಸಿ ಕಸವನ್ನಷ್ಟೆ ಸಂಗ್ರಹಿಸುವ ವ್ಯವಸ್ಥೆ ಅನುಷ್ಠಾನಕ್ಕೆ ಬರಲಿದೆ. ಕಸ ವಿಂಗಡಿಸಿ ಕೊಡದವರಿಗೆ ದಂಡ ಹಾಕಲಾಗುವುದು ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದರು. ಆದರೆ, ಟೆಂಡರ್ ಅಂತಿಮಗೊಳಿಸುವ ಪ್ರಕ್ರಿಯೆಯು ತೆವಳುತ್ತಾ ಸಾಗಿದೆ.

ಬಿಬಿಎಂಪಿಯು 2016ರಲ್ಲಿ ತ್ಯಾಜ್ಯ ವಿಲೇವಾರಿಯ ಗುತ್ತಿಗೆ ಪದ್ಧತಿಯನ್ನು ರದ್ದು ಮಾಡಿ, ಇಲಾಖೆಯಿಂದಲೇ ನಿರ್ವಹಣೆ ಮಾಡಲಾಗುತ್ತಿತ್ತು. ಆದರೂ, ಕಸದ ಸಮಸ್ಯೆ ನಿವಾರಣೆಯಾಗದ ಹಿನ್ನೆಲೆಯಲ್ಲಿ 168 ವಾರ್ಡ್‌ಗಳಲ್ಲಿ ಹಸಿ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲು ಟೆಂಡರ್ ಆಹ್ವಾನಿಸಲಾಗಿತ್ತು. 30 ವಾರ್ಡ್‌ಗಳಿಗೆ ಸಂಬಂಧಿಸಿದ ಕಸ ವಿಲೇವಾರಿ ವಿವಾದವು ನ್ಯಾಯಾಲಯದಲ್ಲಿದೆ.

ಬಿಬಿಎಂಪಿಯ 198 ವಾರ್ಡ್‌ಗಳ ಪೈಕಿ 168 ವಾರ್ಡ್‌ಗಳಲ್ಲಿ ಹಸಿ ಕಸ ಸಂಗ್ರಹಿಸಿ, ವಿಲೇವಾರಿ ಮಾಡಲು ಟೆಂಡರ್ ಕರೆಯಲಾಗಿತ್ತು. ಈ ಪೈಕಿ ದೇವರಜೀವನಹಳ್ಳಿ ವಾರ್ಡ್ ಹೊರತುಪಡಿಸಿ, ಉಳಿದ 167 ವಾರ್ಡ್‌ಗಳಿಗೆ ಬಿಡ್ ಸಲ್ಲಿಕೆಯಾಗಿತ್ತು. ಒಟ್ಟು 569 ಮಂದಿ ಗುತ್ತಿಗೆದಾರರು ಬಿಡ್ ಸಲ್ಲಿಸಿದ್ದರು. ಇದರಲ್ಲಿ 440 ಬಿಡ್‌ದಾರರು ತಾಂತ್ರಿಕವಾಗಿ ಅರ್ಹರಾಗಿದ್ದಾರೆ. ಒಬ್ಬ ಗುತ್ತಿಗೆದಾರರಿಗೆ ಗರಿಷ್ಠ 5 ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಟೆಂಡರ್ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ಇಬ್ಬರು ಗುತ್ತಿಗೆದಾರರಷ್ಟೆ ತಲಾ ಐದು ವಾರ್ಡ್‌ಗಳ ಕಸ ವಿಲೇವಾರಿ ಗುತ್ತಿಗೆ ಪಡೆದುಕೊಂಡಿದ್ದಾರೆ.

ನಿಯಮಗಳ ಪ್ರಕಾರ 3 ಕೋಟಿ ರೂ. ಒಳಗಿನ ಟೆಂಡರ್‌ಗೆ ಸ್ಥಾಯಿ ಸಮಿತಿ, 3 ಕೋಟಿ ರೂ. ಮೇಲ್ಪಟ್ಟ ಟೆಂಡರ್‌ಗಳಿಗೆ ಕೌನ್ಸಿಲ್ ಸಭೆಯ ಅನುಮೋದನೆ ಪಡೆಯಬೇಕಿದೆ. ಅದರಂತೆ, ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧಿಕಾರಿಗಳು 101 ವಾರ್ಡ್‌ಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಿ ಅನುಮೋದನೆಗಾಗಿ ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿಗೆ ಕಳುಹಿಸಿಕೊಟ್ಟಿದ್ದಾರೆ.

ವಾರದ ಹಿಂದೆಯೇ ಕಡತಗಳು ಸಮಿತಿ ಕಚೇರಿಗೆ ರವಾನಿಸಲಾಗಿದೆ. ಆದರೆ, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿಯು ಸಭೆ ಸೇರಿ ಟೆಂಡರ್ ಕಡತಗಳನ್ನು ಪರಿಶೀಲಿಸಿ, ಅನುಮೋದನೆ ನೀಡಲು ಮೀನಾಮೇಷ ಎಣಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಗುತ್ತಿಗೆದಾರರಿಗೆ ಕಾರ್ಯಾದೇಶ ಪತ್ರ ನೀಡುವುದು ವಿಳಂಬವಾಗಲಿದೆ.

ಘನತ್ಯಾಜ್ಯ ನಿರ್ವಹಣೆ ವಿಭಾಗದಿಂದ ಕೇವಲ 70 ವಾರ್ಡ್‌ಗಳಿಗೆ ಸಂಬಂಧಿಸಿದ ಕಡತಗಳಷ್ಟೆ ಬಂದಿದ್ದು, ಪರಿಶೀಲಿಸಿ ಅನುಮೋದನೆ ನೀಡಲಾಗುವುದು ಎಂಬುದು ಸ್ಥಾಯಿ ಸಮಿತಿ ಪದಾಧಿಕಾರಿಗಳ ವಾದ. ಆದರೆ, ಅಧಿಕಾರಿಗಳು ಹೇಳುತ್ತಿರುವುದೇ ಬೇರೆ. ವಾರದ ಹಿಂದೆಯೇ 101 ವಾರ್ಡ್‌ಗಳಿಗೆ ಸಂಬಂಧಿಸಿದ ಕಡತಗಳನ್ನು ಕಳುಹಿಸಲಾಗಿದ್ದು, ಈವರೆಗೆ ಒಪ್ಪಿಗೆ ಸಿಕ್ಕಿಲ್ಲ. ಸಮಿತಿಯ ಅನುಮೋದನೆ ನೀಡಿದ ಬಳಿಕ ಗುತ್ತಿಗೆದಾರರೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು ಸೇರಿದಂತೆ ಇನ್ನಿತರೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕಾರ್ಯಾದೇಶ ನೀಡಲು ತಡವಾಗಲಿದೆ ಎನ್ನುತ್ತಾರೆ ಅಧಿಕಾರಿಗಳು.

ಗುತ್ತಿಗೆದಾರರು ಕೆಲ ವಾರ್ಡ್‌ಗಳ ತ್ಯಾಜ್ಯ ವಿಲೇವಾರಿಗೆ ನಿಗದಿಗಿಂತ ಕಡಿಮೆ ಬಿಡ್ ಮೊತ್ತ ನಮೂದಿಸಿದ್ದಾರೆ. ಹೀಗಾಗಿ, ಆ ವಾರ್ಡ್‌ಗಳ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಿಲ್ಲ. ಅಲ್ಲದೇ ಕೆಲವರು ತಾಂತ್ರಿಕ ಬಿಡ್‌ನಲ್ಲಿ ಅರ್ಹರಾಗಿಲ್ಲ. ಆದ ಕಾರಣ, ಕೆಲವೊಂದು ವಾರ್ಡ್‌ಗಳ ಕಸ ವಿಲೇವಾರಿಗೆ ಮರು ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊ ಬ್ಬರು ಮಾಹಿತಿ ನೀಡಿದರು.

ಸೆ.1ರಿಂದ ಹಸಿ ಕಸ ಸಂಗ್ರಹ ಅಸಾಧ್ಯ:

ಸಮಿತಿಯು ಅನುಮೋದನೆ ನೀಡಿದ ಬಳಿಕ ಗುತ್ತಿಗೆದಾರರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಬೇಕಿದೆ. ಆನಂತರ ಅವರು ಹಾಜರುಪಡಿಸುವ ಕಾಂಪ್ಯಾಕ್ಟರ್, ಆಟೊ ಟಿಪ್ಪರ್‌ಗಳನ್ನು ಪರಿಶೀಲಿಸಬೇಕು. ಜಿಪಿಎಸ್ ಅಳವಡಿಸಲಾಗಿದೆಯೇ, ಚಾಲಕರ ಬಳಿ ಚಾಲನಾ ಪರವಾನಿಗೆ ಇದೆಯೇ ಎಂಬುದನ್ನು ಪರಿಶೀಲಿಸಿ ಅಂತಿಮವಾಗಿ ಕಾರ್ಯಾದೇಶ ನೀಡಲಾಗುತ್ತದೆ. ಇದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಸಮಿತಿಯು ಟೆಂಡರ್ ಕಡತಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡಿದರೆ, ಸೆ.1ರಿಂದ ಹಸಿ ಕಸ ಸಂಗ್ರಹ ವ್ಯವಸ್ಥೆ ಜಾರಿಯಾಗುವುದು ಅಸಾಧ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X