Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ರೈಲ್ವೆ ವಿಶ್ವದ ಪ್ರಥಮ ಹಸಿರು...

ಭಾರತೀಯ ರೈಲ್ವೆ ವಿಶ್ವದ ಪ್ರಥಮ ಹಸಿರು ರೈಲ್ವೆ ಆಗಿ ಪರಿವರ್ತನೆ: ಪಿಯೂಶ್ ಗೋಯಲ್

ವಾರ್ತಾಭಾರತಿವಾರ್ತಾಭಾರತಿ27 July 2019 9:14 AM IST
share
ಭಾರತೀಯ ರೈಲ್ವೆ ವಿಶ್ವದ ಪ್ರಥಮ ಹಸಿರು ರೈಲ್ವೆ ಆಗಿ ಪರಿವರ್ತನೆ: ಪಿಯೂಶ್ ಗೋಯಲ್

ಹೊಸದಿಲ್ಲಿ: ಭಾರತೀಯ ರೈಲ್ವೆಯನ್ನು ಮುಂದಿನ ಹತ್ತು ವರ್ಷಗಳಲ್ಲಿ ವಿಶ್ವದ ಪ್ರಪ್ರಥಮ ಹಸಿರು ರೈಲ್ವೆ ಆಗಿ ಪರಿವರ್ತಿಸುವ ಕನಸನ್ನು ರೈಲ್ವೆ ಸಚಿವ ಪಿಯೂಶ್ ಗೋಯಲ್ ಹೊಂದಿದ್ದಾರೆ.

ಈ ನಿಟ್ಟಿನಲ್ಲಿ ಸ್ವಚ್ಛ ಇಂಧನ ಮೂಲಕ್ಕೆ ಪರಿವರ್ತನೆಯಾಗುವ ಮಾರ್ಗಸೂಚಿಯ ವಿವರಗಳನ್ನು ಸಚಿವರು ಶುಕ್ರವಾರ ರಾಜ್ಯಸಭೆಯಲ್ಲಿ ನೀಡಿದರು. ರೈಲು ಹಳಿಗಳ ವಿದ್ಯುದ್ದೀಕರಣದ ಜತೆಗೆ, ಜೈವಿಕ ಡೀಸೆಲ್ ಬಳಕೆಗೂ ಚಿಂತನೆ ನಡೆದಿದೆ. ಬಳಕೆಯಾಗದೇ ಉಳಿದಿರುವ ರೈಲ್ವೆ ಭೂಮಿ ಮತ್ತು ಕಟ್ಟಡಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಲು ಕೂಡಾ ಉದ್ದೇಶಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕೇಂದ್ರ ಬಜೆಟ್‌ನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬ್ಕಾರಿ ಸುಂಕವನ್ನು ಹೆಚ್ಚಿಸಿದ್ದರಿಂದ ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ, ಸದ್ಯಕ್ಕೆ ರೈಲ್ವೆ ಪ್ರಯಾಣ ದರದ ಏರಿಕೆ ಪ್ರಸ್ತಾವ ಸಚಿವಾಲಯದ ಮುಂದಿಲ್ಲ ಎಂದು ಗೋಯಲ್ ಸ್ಪಷ್ಟಪಡಿಸಿದರು.

ರೈಲುಹಳಿಗಳ ವಿದ್ಯುದ್ದೀಕರಣವನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳುವ ಮೂಲಕ ಡೀಸೆಲ್ ವೆಚ್ಚವನ್ನು ಕಡಿಮೆ ಮಾಡಲು ಕಾರ್ಯಯೋಜನೆ ಸಿದ್ಧಪಡಿಸಲಾಗಿದೆ. ಜತೆಗೆ ರೈಲ್ವೆಗೆ ಸೇರಿದ ಖಾಲಿ ಜಾಗದಲ್ಲಿ ಸೌರ ವಿದ್ಯುತ್ ಉತ್ಪಾದಿಸಲಾಗುತ್ತದೆ. 2022ರ ಒಳಗಾಗಿ ರೈಲ್ವೆಯನ್ನು ಸಂಪೂರ್ಣ ವಿದ್ಯುದ್ದೀಕರಣ ಮಾಡಲಾಗುತ್ತದೆ ಎಂದು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X