Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಇಬ್ರಾಹಿಂ ತಣ್ಣೀರುಬಾವಿಗೆ...

ಮಂಗಳೂರು: ಇಬ್ರಾಹಿಂ ತಣ್ಣೀರುಬಾವಿಗೆ ನುಡಿನಮನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 July 2019 4:47 PM IST
share
ಮಂಗಳೂರು: ಇಬ್ರಾಹಿಂ ತಣ್ಣೀರುಬಾವಿಗೆ ನುಡಿನಮನ ಕಾರ್ಯಕ್ರಮ

ಮಂಗಳೂರು: ಇತ್ತೀಚಿಗೆ ನಿಧನರಾದ ಹಿರಿಯ ಸಾಹಿತಿ, ಕಲಾವಿದ ಇಬ್ರಾಹಿಂ  ತಣ್ಣೀರುಬಾವಿ ಅವರಿಗೆ ಸಂತಾಪ ಸೂಚಕ ಸಭೆಯು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ವಿಶ್ವವಿದ್ಯಾಲಯ ಕಾಲೇಜಿನ  ರವೀಂದ್ರ ಕಲಾಭವನದಲ್ಲಿ ಶನಿವಾರ ನಡೆಯಿತು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮೊಹಮ್ಮದ್ ಅಧ್ಯಕ್ಷತೆ ವಹಿಸಿ, ಇಂದು ಬ್ಯಾರಿ ಭಾಷೆ, ಸಾಹಿತ್ಯದಲ್ಲಿ ಸಾಧನೆ, ಅಕಾಡೆಮಿ ಸ್ಥಾಪನೆಯಾಗಿದ್ದರೆ, ಅದರ ಹಿಂದೆ ಇಬ್ರಾಹಿಂ ತಣ್ಞೀರುಬಾವಿ ಅವರ ಶ್ರಮವಿದೆ. ಕವಿ, ನಾಟಕಕಾರನಾಗಿ ಅತ್ಯುತ್ತಮ ಕಲಾವಿದರಾ ಗಿದ್ದರು. ನಿಸ್ವಾರ್ಥವಾಗಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಕಾರಣಕರ್ತರಾಗಿದ್ದರು ಎಂದರು.

ಹಿರಿಯ ಗಾಯಕ ಖಾಲಿದ್ ತಣ್ಞೀರುಬಾವಿ ಮಾತನಾಡಿ, ದಿವಂಗತ  ಇಬ್ರಾಹಿಂ ನನ್ನ  ನೆರೆಮನೆಯವರಾಗಿದ್ದರು. ತಣ್ಞೀರುಬಾವಿ ತಂಡದ ನಾಟಕಗಳು ಅವರ ಹಾಡುಗಳಿಂದಲೇ  ಪ್ರಸಿದ್ಧವಾಗಿದ್ದವು. ಅವರ ನಾನೊರ್ ಮುಸ್ಲಿಂ... ಹಾಡು ಮರೆಯಲು ಸಾಧ್ಯವಿಲ್ಲ. ಎಲ್ಲಿ ಹೋದರೂ  ಕುಳಿತಲ್ಲೆಲ್ಲಾ ಹಾಡು ಬರೆಯುತ್ತಿದ್ದರು. ಅವರ ಹಾಡುಗಳನ್ನು ನಾನು ಕ್ಯಾಸೆಟ್‌ಗೆ ಹಾಡಿದ್ದೆ. ಮನೆಯಲ್ಲಿ ಕಷ್ಟವಿದ್ದರೂ ಲವಲವಿಕೆ ಮೈಗೂಡಿಸಿಕೊಂಡಿದ್ದರು ಎಂದರು.

ಸಂಘಟಕ ಅಹ್ಮದ್ ಬಜಾಲ್ ಮಾತನಾಡಿ, ಅವರು ವ್ಯಕ್ತಿಯಲ್ಲ, ಒಂದು ಆದರ್ಶ. ಅವರು ಇಲ್ಲದಿದ್ದರೂ ಅವರ ಬದುಕಿನಿಂದ ನಮಗೆ ಸಾಕಷ್ಟು ಕಲಿಯಲು ಇದೆ ಎಂದರು.

ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಬಿ.ಅಬ್ದುಲ್ ರಹ್ಮಾನ್, ಹಿರಿಯ ಕವಿ ಮುಹಮ್ಮದ್ ಬಡ್ಡೂರ್, ಹಂಪಿ ವಿವಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎ.ವಿ.ನಾವಡ, ಅಕಾಡೆಮಿ ಸದಸ್ಯ ಅತ್ತೂರು ಚಯ್ಯಬ್ಬ, ಆಲಿಯಬ್ಬ ಜೋಕಟ್ಟೆ, ಹೈದರ್ ಪರ್ತಿಪ್ಪಾಡಿ, ಹಸನಬ್ಬ ಮೂಡುಬಿದಿರೆ, ಮುಡಾ ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ನುಡಿನಮನ ಸಲ್ಲಿಸಿದರು.

ಅಕಾಡೆಮಿ ಸದಸ್ಯ ಹುಸೈನ್ ಕಾಟಿಪಳ್ಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X