Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ದಾರಿ...

ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ದಾರಿ ತಪ್ಪಿದ ಮಕ್ಕಳು: ಶಾಸಕ ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ27 July 2019 6:36 PM IST
share
ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ದಾರಿ ತಪ್ಪಿದ ಮಕ್ಕಳು: ಶಾಸಕ ಎಚ್.ವಿಶ್ವನಾಥ್

ಬೆಂಗಳೂರು, ಜು. 27: ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಅವರ ಜತೆ ಇರುವವರೆ ದಾರಿ ತಪ್ಪಿದ ಮಕ್ಕಳೇ ಹೊರತು ನಾವಲ್ಲ’ ಎಂದು ರಾಜೀನಾಮೆ ನೀಡಿರುವ ಅತೃಪ್ತ ಶಾಸಕ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಮುಂಬೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿರುವ ಯಾವ ಶಾಸಕರೂ ಯಾರನ್ನೂ ಸಂಪರ್ಕಿಸಿಲ್ಲ. ಮೈತ್ರಿ ನಾಯಕರೂ ನಮ್ಮನ್ನು ಸಂಪರ್ಕಿಸಿಲ್ಲ. ಎಂ.ಬಿ.ಪಾಟೀಲ್ ಸೇರಿ ಕಾಂಗ್ರೆಸ್ ನಾಯಕರ ಹೇಳಿಕೆಗಳು ಸುಳ್ಳು ಎಂದು ಹೇಳಿದರು.

‘ಅತೃಪ್ತ ಶಾಸಕರು ಸಿದ್ದರಾಮಯ್ಯನವರನ್ನು ಸಂಪರ್ಕಿಸಿದರು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ’ ಎಂಬುದು ಶುದ್ಧ ಸುಳ್ಳು. ಗೊಂದಲ ಸೃಷ್ಟಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಆದರೆ ಯಾರೂ ದಾರಿ ತಪ್ಪುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯ ರಾಜಕಾರಣದ ಮೂವತ್ತು ದಿನಗಳ ಬೆಳವಣಿಗೆಯಲ್ಲಿ ಅವರು ದಾರಿ ತಪ್ಪಿದ ಮಕ್ಕಳು ಎಂದು ಲೇವಡಿ ಮಾಡಿದ ವಿಶ್ವನಾಥ್, ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. ಅವರು ಪ್ರಯತ್ನಿಸಿದರೂ ಯಾರೂ ಅವರೊಂದಿಗೆ ಹೋಗಲು ಸಿದ್ಧರಿಲ್ಲ. ನಾವು ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ನಾವೆಲ್ಲಾ ಒಟ್ಟಾಗಿದ್ದರಿಂದಲೇ ಸರಕಾರ ಬಿದ್ದಿದ್ದು, ಇವರ ಬೆದರಿಕೆ ಮಾತನ್ನು ಯಾರೂ ಕೇಳುವುದಿಲ್ಲ. ಯಾರಿಗೆ ಯಾರ ಭಯವೂ ಇಲ್ಲ. ನಮ್ಮನ್ನು ಸಂಪರ್ಕಿಸುವ ಧೈರ್ಯ ಯಾರ ಬಳಿಯೂ ಇಲ್ಲ. ಎಲ್ಲರೂ ಬಹಳ ಗಟ್ಟಿಯಾಗಿದ್ದೇವೆ. ನಾಲ್ಕೈದು ದಿನಗಳಲ್ಲಿ ಮರಳಿ ರಾಜ್ಯಕ್ಕೆ ಬರುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X