Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕಬ್ಬಿನ ರಸ ಸ್ವಾದಿಷ್ಟ ಮಾತ್ರವಲ್ಲ,...

ಕಬ್ಬಿನ ರಸ ಸ್ವಾದಿಷ್ಟ ಮಾತ್ರವಲ್ಲ, ಹಲವಾರು ಆರೋಗ್ಯಲಾಭಗಳನ್ನೂ ನೀಡುತ್ತದೆ

ವಾರ್ತಾಭಾರತಿವಾರ್ತಾಭಾರತಿ27 July 2019 6:46 PM IST
share
ಕಬ್ಬಿನ ರಸ ಸ್ವಾದಿಷ್ಟ ಮಾತ್ರವಲ್ಲ, ಹಲವಾರು ಆರೋಗ್ಯಲಾಭಗಳನ್ನೂ ನೀಡುತ್ತದೆ

ಕಬ್ಬಿನ ರಸ ಯಾರಿಗೆ ಇಷ್ಟವಿಲ್ಲ? ಬೇಸಿಗೆಯ ದಿನಗಳಲ್ಲಂತೂ ಧಗೆಯಿಂದ ಪಾರಾಗಲು ಇದಕ್ಕಿಂತ ಮಿಗಿಲಾದ ಪಾನೀಯ ಇನ್ನೊಂದಿಲ್ಲ. ಪೋಷಕಾಂಶಗಳು ಮತ್ತು ಖನಿಜಗಳಿಂದ ಕೂಡಿರುವ ಕಬ್ಬಿನ ರಸ ಎಲ್ಲ ಶಕ್ತಿ ಪೇಯಗಳಿಗೆ ಪರ್ಯಾಯ ಪಾನೀಯವಾಗಿದೆ. ಕಬ್ಬಿನ ರಸದ ಸೇವನೆಯಿಂದ ದೇಹದ ತೂಕ ಹೆಚ್ಚುತ್ತದೆ ಎಂಬ ತಪ್ಪುಗ್ರಹಿಕೆ ಹೆಚ್ಚಿನವರಲ್ಲಿದೆ. ವಾಸ್ತವದಲ್ಲಿ ಅದು ನಮ್ಮ ಶರೀರದ ಹೆಚ್ಚುವರಿ ತೂಕವನ್ನು ತಗ್ಗಿಸಲು ನೆರವಾಗುತ್ತದೆ. ಅದು ನಮ್ಮ ಶರೀರಕ್ಕೆ ಅಗತ್ಯವಾಗಿರುವ ಎಲ್ಲ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಈ ಅದ್ಭುತ ಪೇಯ ನೀಡುವ ಆರೋಗ್ಯಲಾಭಗಳ ಕುರಿತು ಮಾಹಿತಿಯಿಲ್ಲಿದೆ.....

► ಜೀರ್ಣಕ್ರಿಯೆಗೆ ನೆರವಾಗುತ್ತದೆ

ಕಬ್ಬಿನ ರಸದಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರು ಕರುಳಿನ ಸುಗಮ ಚಲನವಲನಕ್ಕೆ ನೆರವಾಗುತ್ತದೆ. ಮಲಬದ್ಧತೆ, ಹೊಟ್ಟೆಯುಬ್ಬರ ಮತ್ತು ಸೆಳೆತಗಳಿಂದ ಮುಕ್ತಿಯನ್ನು ನೀಡುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಅದು ಮೂತ್ರಪಿಂಡಗಳು ಸಮರ್ಪಕವಾಗಿ ಕೆಲಸ ಮಾಡಲು ಮತ್ತು ಮೂತ್ರವನ್ನು ಸುಲಭವಾಗಿ ಹೊರಹಾಕಲು ನೆರವಾಗುತ್ತದೆ.

► ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಉತ್ಕರ್ಷಣ ನಿರೋಧಕಗಳು ಮತ್ತು ವಿಟಾಮಿನ್ ಸಿ ಅಧಿಕ ಪ್ರಮಾಣದಲ್ಲಿರುವ ಕಬ್ಬಿನ ರಸವು ಶರೀರದ ರೋಗ ನಿರೋಧಕ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ ಮತ್ತು ಅದನ್ನು ಬಲಗೊಳಿಸುತ್ತದೆ,ತನ್ಮೂಲಕ ಜಠರ,ಯಕೃತ್ತು,ಮೂತ್ರಪಿಂಡ ಮತ್ತು ಉಸಿರಾಟ ವ್ಯವಸ್ಥೆಗಳ ಸೋಂಕುಗಳನ್ನು ತಗ್ಗಿಸುತ್ತದೆ.

► ತೂಕವನ್ನು ಇಳಿಸಲು ನೆರವಾಗುತ್ತದೆ

ಕಬ್ಬಿನ ರಸದ ಸೇವನೆಯು ತೂಕವನ್ನು ಹೆಚ್ಚಿಸುತ್ತದೆ ಎಂಬ ಮಿಥ್ಯೆಯೊಂದಿದೆ. ಇದಕ್ಕೆ ವಿರುದ್ಧವಾಗಿ ಅದು ತೂಕವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲಿ ಅಧಿಕ ಪ್ರಮಾಣದಲ್ಲಿರುವ ನಾರು ಕೊಬ್ಬಿನೊಂದಿಗೆ ಸಂಯೋಜಿತಗೊಂಡು ಅದು ಶರೀರದಲ್ಲಿ ಸಂಗ್ರಹವಾಗುವುದನ್ನು ತಡೆಯುತ್ತದೆ. ಇದರೊಂದಿಗೆ ನಾವು ಅತಿಯಾಗಿ ತಿನ್ನುವುದನ್ನು ನಿಯಂತ್ರಿಸುತ್ತದೆ. ಪೋಷಕಾಂಶಗಳನ್ನು ಹೀರಿಕೊಳ್ಳುವ ಕರುಳಿನ ಸಾಮರ್ಥ್ಯವನ್ನು ಹೆಚ್ಚಿಸುವ ಜೊತೆಗೆ ಕೊಬ್ಬು ಕರಗಲು ಪೂರಕ ಸ್ಥಿತಿಯನ್ನು ನಿಯಂತ್ರಿಸುವ ಮೂಲಕ ನಮ್ಮ ಶಕ್ತಿ ಅಗತ್ಯವನ್ನು ಪೂರೈಸುತ್ತದೆ. ಕಬ್ಬಿನ ರಸವು ಕೊಬ್ಬು ಮುಕ್ತವಾಗಿದ್ದು,ನೈಸರ್ಗಿಕ ಸಕ್ಕರೆಯನ್ನು ಒಳಗೊಂಡಿದೆ ಮತ್ತು ನಮ್ಮ ಹೆಚ್ಚುವರಿ ದೇಹತೂಕವನ್ನು ಕಳೆದುಕೊಳ್ಳಲು ನೆರವಾಗುತ್ತದೆ.

► ಚಯಾಪಚಯವನ್ನು ಹೆಚ್ಚಿಸುತ್ತದೆ

ಕಬ್ಬಿನ ರಸವು ತಕ್ಷಣ ಶಕ್ತಿಗೆ ಅತ್ಯುತ್ತಮ ಮೂಲವಾಗಿದೆ ಮತ್ತು ಶರೀರದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇದು ದೇಹತೂಕವನ್ನು ತಗ್ಗಿಸಲು ನೆರವಾಗುತ್ತದೆ.

► ಚರ್ಮಕ್ಕೂ ಲಾಭಕಾರಿ

ಚರ್ಮವನ್ನು ಹೊಳೆಯುವಂತೆ ಮಾಡುವಲ್ಲಿ ನೆರವಾಗುವ ಗ್ಲೈಕಾಲಿಕ್ ಆ್ಯಸಿಡ್‌ನಂತಹ ಆಲ್ಫಾ-ಹೈಡ್ರಾಕ್ಸಿ ಆಮ್ಲಗಳನ್ನು ಕಬ್ಬಿನ ರಸವು ಒಳಗೊಂಡಿದೆ. ಅದು ಮೊಡವೆಗಳ ವಿರುದ್ಧ ಹೋರಾಡುತ್ತದೆ,ಕಲೆಗಳನ್ನು ಕಡಿಮೆ ಮಾಡುತ್ತದೆ, ವಯಸ್ಸಾಗುವುದನ್ನು ವಿಳಂಬಿಸುತ್ತದೆ ಮತ್ತು ಚರ್ಮವನ್ನು ಮೃದುವಾಗಿರಿಸುತ್ತದೆ.

► ಬಾಯಿಯ ದುರ್ವಾಸನೆ ಮತ್ತು ದಂತಕುಳಿಗಳ ವಿರುದ್ಧ ಹೋರಾಡುತ್ತದೆ

ಕಬ್ಬಿನ ರಸದಲ್ಲಿ ಕ್ಯಾಲ್ಸಿಯಂ ಮತ್ತು ರಂಜಕ ಹೇರಳವಾಗಿವೆ. ಇವು ಹಲ್ಲುಗಳನ್ನು ಸದೃಢವಾಗಿಸುವ ಮೂಲಕ ಬಾಯಿಯ ಒಟ್ಟಾರೆ ಆರೋಗ್ಯವನ್ನು ಕಾಯ್ದುಕೊಳ್ಳಲು ನೆರವಾಗುತ್ತವೆ,ದಂತಕುಳಿಗಳನ್ನು ತಡೆಯುತ್ತವೆ ಮತ್ತು ಬಾಯಿಯ ದುರ್ವಾಸನೆಯನ್ನು ನಿವಾರಿಸುವಲ್ಲಿಯೂ ಪ್ರಮುಖ ಪಾತ್ರವನ್ನು ಹೊಂದಿವೆ.

► ಕಾಮಾಲೆ ಚಿಕಿತ್ಸೆಗೆ ನೆರವಾಗುತ್ತದೆ

ಆಯುರ್ವೇದ ವೈದ್ಯಪದ್ಧತಿಯಲ್ಲಿ ಯಕೃತ್ತಿಗೆ ಚಿಕಿತ್ಸೆ ನೀಡಲು ಬಳಕೆಯಾಗುವ ಕಬ್ಬಿನ ರಸವು ಕಾಮಾಲೆ ರೋಗಕ್ಕೆ ಪರಿಹಾರವನ್ನು ನೀಡುತ್ತದೆ. ಅದರಲ್ಲಿರುವ ಉತ್ಕರ್ಷಣ ನಿರೋಧಕಗಳು ಯಕೃತ್ತಿನ ಸೋಂಕುಗಳ ವಿರುದ್ಧ ಹೋರಾಡುತ್ತವೆ ಮತ್ತು ರೋಗವನ್ನು ಶಮನಿಸುವಲ್ಲಿ ನೆರವಾಗುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X