'ಬಿಜೆಪಿಗೆ ಜೆಡಿಎಸ್ ಬಾಹ್ಯ ಬೆಂಬಲ': ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ?
![ಬಿಜೆಪಿಗೆ ಜೆಡಿಎಸ್ ಬಾಹ್ಯ ಬೆಂಬಲ: ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ? ಬಿಜೆಪಿಗೆ ಜೆಡಿಎಸ್ ಬಾಹ್ಯ ಬೆಂಬಲ: ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ?](https://www.varthabharati.in/sites/default/files/images/articles/2019/07/27/202505-1564239034.jpg)
ಬೆಂಗಳೂರು, ಜು.27: ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬಾಹ್ಯ ಬೆಂಬಲ ನೀಡಲಿದೆ ಎಂಬ ಸುದ್ದಿಗೆ ಮಾಜಿ ಸಿಎಂ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
'ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Next Story