ಸಂಜೀವ ಬಳೆಗಾರರಿಗೆ ‘ಸರ್ಪಂಗಳ ಪ್ರಶಸ್ತಿ’ ಪ್ರದಾನ

ಉಡುಪಿ, ಜು.27: ಕಟೀಲು ಯಕ್ಷಗಾನ ಮೇಳದ ಪ್ರಸಿದ್ಧ ಸ್ತ್ರೀವೇಷಧಾರಿ ಶಂಕರನಾರಾಯಣ ಸಂಜೀವ ಬಳೆಗಾರ ಅವರಿಗೆ ಈ ವರ್ಷದ ಕಲಾಪೋಷಕ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸ್ಮಾರಕ ಯಕ್ಷಗಾನ ಕಲಾ ಸಾಧಕ ಪ್ರಶಸ್ತಿಯನ್ನು ಶನಿವಾರ ಸಂಜೆ ಇಲ್ಲಿ ಪ್ರದಾನ ಮಾಡಲಾಯಿತು.
ಅಜ್ಜರಕಾಡಿನ ಪುರಭವನದಲ್ಲಿ ನಡೆದ ಎಂಟನೇ ವರ್ಷದ ಸರ್ಪಂಗಳ ಯಕ್ಷೋತ್ಸವದಲ್ಲಿ ಸಿಂಡಿಕೇಟ್ ಬ್ಯಾಂಕಿನ ವಲಯ ಮಹಾಪ್ರಬಂಧಕ ಭಾಸ್ಕರ ಹಂದೆ ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.ಯಕ್ಷಗಾನ ಇಂದು ವಿಶ್ವ ಮಟ್ಟದಲ್ಲಿ ಬೆಳೆದು ನಿಂತಿದೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನೇಪಥ್ಯ ಕಲಾವಿದರಾದ ವಿಷ್ಣು ಪುರುಷ ಇವರಿಗೆ ಕಲಾಪೋಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಲಾರಂಗದ ಉಪಾಧ್ಯಕ್ಷ ಎಂ.ಗಂಗಾಧರ ರಾವ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಳೀ ಕಡೇಕಾರ್ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ಭೀಮಭಾರತ’ ಯಕ್ಷಗಾನ ಪ್ರದರ್ಶನವೂ ನಡೆಯಿತು.

Next Story







