ಜು.28 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
![ಜು.28 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಜು.28 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ](https://www.varthabharati.in/sites/default/files/images/articles/2019/07/27/202528-1564243870.jpg)
ಬೆಂಗಳೂರು, ಜು. 27: ಮುಖ್ಯಮಂತ್ರಿ ಯಡಿಯೂರಪ್ಪನವರ ವಿಶ್ವಾಸಮತ ಸಾಬೀತುಪಡಿಸುವ ಸವಾಲಿನ ಹಿನ್ನೆಲೆಯಲ್ಲಿ ನಾಳೆ(ಜು.28) ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರು ಹಾಗೂ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
Next Story