Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ...

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ನಿಧನ

ವಾರ್ತಾಭಾರತಿವಾರ್ತಾಭಾರತಿ27 July 2019 10:47 PM IST
share
ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ನಿಧನ

ಬಂಟ್ವಾಳ, ಜು. 27: ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಘಟಕ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಶನಿವಾರ ರಾತ್ರಿ 9.20ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತ್ನಿ ಆನಂದಿ ರೈ, ಪುತ್ರಿ ಸುಖದಾ ಅಳಿಯ ಬಾಲಕೃಷ್ಣ ಹೆಗ್ಡೆ ಮತ್ತು ಅಪಾರ ಬಂಧು, ಮಿತ್ರರು, ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಶತಮಾನ ಕಂಡ ಸಾಹಿತ್ಯ, ಸಂಘಟಕರಷ್ಟೇ ಅಲ್ಲ, ಸಹಕಾರ ಕ್ಷೇತ್ರ ಮತ್ತು ಸಮಾಜ ಸುಧಾರಣೆಯಲ್ಲಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಗಮನ ಸೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೊಡಂ ಕಾಪು ಬಳಿಯ ಏರ್ಯ ಬೀಡು ಮನೆಯಲ್ಲಿ ಜನಿಸಿದ ಅವರ ತಂದೆ ಮಾವಂತೂರ ಸುಬ್ಬಯ್ಯ ಆಳ್ವ, ತಾಯಿ ಸೋಮಕ್ಕೆ ಆಳ್ವ. ಬಂಟ್ವಾಳ ತಾಲೂಕಿನ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ, ಕಾಸರಗೋಡು ಸಾಹಿತ್ಯ ಸಮ್ಮೇಳನಾಧ್ಯಕ್ಷತೆ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿರುವ ಅವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್, ಬಂಟರ ಸಂಘದ ಅಮೃತ ಮಹೋತ್ಸವ, ತುಳು ಸಾಹಿತ್ಯ ಅಕಾಡಮಿ ಗೌರವ ದೊರಕಿವೆ.

ಡಾ.ಏರ್ಯ ಅವರ ಬಗ್ಗೆ ಒಂದಿಷ್ಟು

ಸಾಹಿತಿ, ಸಂಘಟಕ, ಸಾಮಾಜಿಕ ಕಾರ್ಯಕರ್ತರಾದ ಏರ್ಯ ಲಕ್ಷ್ಮೀನಾರಾಯಣ ಆಳ್ವರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೊಡಂ ಕಾಪು ಬಳಿಯ ಏರ್ಯ ಬೀಡು ಮನೆಯಲ್ಲಿ. ತಂದೆ ಮಾವಂತೂರ ಸುಬ್ಬಯ್ಯ ಆಳ್ವ, ತಾಯಿ ಸೋಮಕ್ಕೆ ಆಳ್ವ. ಪ್ರಾಥಮಿಕ ವಿದ್ಯಾಭ್ಯಾಸ ನಡೆದುದು ಬಂಟ್ವಾಳದಲ್ಲಿ. ಹೈಸ್ಕೂಲು ಓದಿದ್ದು ಕೆನರಾ ಹೈಸ್ಕೂಲು ಮಂಗಳೂರು.

ಇವರು ಬರೆದ ರಾಮಾಶ್ವಮೇದ ತರಂಗಗಳು 1959ರಲ್ಲಿ ಪ್ರಕಟವಾಯಿತು. ಈ ಕೃತಿಯ ಅಂದಿನ ಮೈಸೂರು ಮತ್ತು ಮದರಾಸು ವಿಶ್ವವಿದ್ಯಾಲಯಗಳಲ್ಲಿ ಪಠ್ಯಪುಸ್ತಕವಾಗಿ ಪರಿಗಣಿತವಾಗಿತ್ತು. ಇದಲ್ಲದೆ ಇವರು ರಚಿಸಿದ್ದು ಹಲವಾರು ಕೃತಿಗಳು. ಸ್ನೇಹಸೇತು-ಪತ್ರರೂಪದ ಕಾದಂಬರಿ ; ಜೀವನ ಚಿತ್ರ-ಮುಳಿಯ ತಿಮ್ಮಪ್ಪಯ್ಯನವರ ಕುರಿತದ್ದು ; ಕೃತಿವಿಮರ್ಶೆ-ನಾಗೇಗೌಡರ ಸ್ವಾಗತ ಗೀತೆ. ಇತರ-ಮೊದಲ ಮಳೆ, ಸಂಚಯ, ಓರಗೆಗೆ ಒಲವಿನ ಒಸಗೆ ಮುಂತಾದುವು. ತುಳುನಾಡಿನ ಭೂತಾರಾಧನೆಯ ಕುರಿತಾದ ಸಮಗ್ರ ಅಧ್ಯಯನ ಗ್ರಂಥ `ಮಂಗಳ ತಿಮರು'. ಕೌಟುಂಬಿಕ ಪರಿಚಯದ 'ನೂರರ ನೆನಪು.' ಸಂಪಾದಿತ ಗ್ರಂಥ-`ಗಾನ ಕೋಗಿಲೆ' ಯಕ್ಷಗಾನ ಭಾಗವತ ದಾಮೋದರ ಮಂಡಚ್ಛರ ಸಂಸ್ಮರಣ ಗ್ರಂಥ.

ತಮಗೆ ದೊರೆತ ಸನ್ಮಾನದಿಂದ ಶಾಶ್ವತ ನಿ ಸ್ಥಾಪಿಸಿ, ವಿದ್ವಾಂಸರನ್ನು ಗೌರವಿಸಿ ಸನ್ಮಾನಿಸಿದ್ದಾರೆ. ಸಾಹಿತ್ಯ ಚಟುವಟಿಕೆಗಳಿಂದ ತೊಡಗಿದ ಇವರು ಬಂಟ್ವಾಳ ತಾಲ್ಲೂಕಿನ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ, ಕಾಸರಗೋಡು ಸಾಹಿತ್ಯ ಸಮ್ಮೇಳನಾಧ್ಯಕ್ಷತೆ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿದ್ದಾರೆ. ಪ್ರವಾಸಿಯಾಗಿ ಇಂಡೋನೇಷ್ಯಾ, ಮಲೇಷಿಯಾ, ಸಿಂಗಪೂರ, ನೇಪಾಳ, ಇಂಗ್ಲೆಂಡ್, ಬೆಲ್ಜಿಯಂ, ಜರ್ಮನಿ, ಫ್ರಾನ್ಸ್, ಸ್ವಿಟ್ಸರ್‍ಲೆಂಡ್, ಇಟಲಿ ಸುತ್ತಿ ಬಂದಿದ್ದಾರೆ.

ಸಂದ ಗೌರವ ಪ್ರಶಸ್ತಿಗಳು ಹಲವಾರು-ಸಾಹಿತ್ಯ ಸಮ್ಮೇಳನ, ಕೆನರಾ ಜ್ಯೂನಿಯರ್ ಕಾಲೇಜ್ ಬೆಳ್ಳಿಹಬ್ಬ, ಬಂಟರ ಸಂಘದ ಅಮೃತ ಮಹೋತ್ಸವ, ತುಳು ಸಾಹಿತ್ಯ ಅಕಾಡಮಿ ಗೌರವಗಳಿಗೆ ಪಾತ್ರರಾಗಿದ್ದಾರೆ. ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ, ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ ಸಮಿತಿ, ಪರಮೇಶ್ವರಭಟ್ಟ ಪ್ರಶಸ್ತಿ ಸಮಿತಿ, ಪೊಳಲಿ ಶೀನಪ್ಪ ಹೆಗಡೆ ಪ್ರಶಸ್ತಿ ಸಮಿತಿಗಳ ಅಧ್ಯಕ್ಷರಾಗಿಯೂ ದುಡಿದಿದ್ದಾರೆ.

ಗಣ್ಯರ ಸಂತಾಪ

ಸಾಮಾಜಿಕ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದ ಹಿರಿಯ ಸಾಹಿತಿ ಏರ್ಯರ ಕೃತಿ ಜೀವನ ಎರಡು ಒಂದೇ ಆಗಿತ್ತು. ಇವರ ಅಗಲುವಿಕೆ ಜಿಲ್ಲೆಗೆ ದೊಡ್ಡ ನಷ್ಟ ಉಂಟಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ರಮಾನಾಥ ರೈ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್, ಕಲಾವಿದ ಮಂಜುವಿಟ್ಲ, ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X