Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿಯ ವಿಳಂಬ ಧೋರಣೆ: ಸ್ಮಾರ್ಟ್...

ಬಿಬಿಎಂಪಿಯ ವಿಳಂಬ ಧೋರಣೆ: ಸ್ಮಾರ್ಟ್ ಕ್ಲಾಸ್ ಯೋಜನೆ ನನೆಗುದಿಗೆ

ರವಿಕಿರಣ್ ಅಣೆದೊಡ್ಡಿರವಿಕಿರಣ್ ಅಣೆದೊಡ್ಡಿ27 July 2019 11:32 PM IST
share
ಬಿಬಿಎಂಪಿಯ ವಿಳಂಬ ಧೋರಣೆ: ಸ್ಮಾರ್ಟ್ ಕ್ಲಾಸ್ ಯೋಜನೆ ನನೆಗುದಿಗೆ

ಬೆಂಗಳೂರು, ಜು.27: ಸಿಲಿಕಾನ್ ಸಿಟಿಯ ಸರಕಾರಿ ಶಾಲೆಗಳನ್ನು 21ನೇ ಶತಮಾನದ ಶಾಲೆಗಳನ್ನಾಗಿ ಮಾಡುವ ಬಿಬಿಎಂಪಿಯ ಮಹಾತ್ವಾಕಾಂಕ್ಷಿ ರೋಶಿನಿ ಯೋಜನೆಯು ನನೆಗುದಿಗೆ ಬಿದ್ದಿದ್ದು, ಇದಕ್ಕೆ ಪಾಲಿಕೆ ವಿಳಂಬ ಧೋರಣೆಯೇ ಕಾರಣವಾಗಿದೆ.

ಪಾಲಿಕೆಯ ಶಾಲಾ- ಕಾಲೇಜುಗಳಿಗೆ ಸುಣ್ಣ-ಬಣ್ಣ ಹಾಗೂ ಕುಡಿಯುವ ನೀರು, ವಿದ್ಯುತ್ ಪೂರೈಕೆ ಸೇರಿದಂತೆ ಕಟ್ಟಡದ ದುರಸ್ಥಿ ಕಾರ್ಯಗಳನ್ನು ಪೂರ್ಣಗೊಳಿಸಿ, ಯೋಜನೆಗೆ ಅನುಕೂಲ ಮಾಡಿಕೊಡಬೇಕೆಂದು ಮೈಕ್ರೋಸಾಫ್ಟ್ ಹಾಗೂ ಟೆಕ್ ಅನಂತ್ ಗಾರ್ಡ್ ಸಂಸ್ಥೆಗಳು ಒತ್ತಾಯ ಮಾಡುತ್ತಾ ಬಂದಿವೆ. ಆದರೆ, ಸಂಸ್ಥೆಗ ಳೊಂದಿಗೆ ಬಿಬಿಎಂಪಿ ಮೇಯರ್ ಯೋಜನೆಗೆ ಸಂಬಂಧಿಸಿದಂತೆ ಮೇ 10 ರಂದು ಸಭೆಯನ್ನು ನಡೆಸಿ, ಜು. 31ರೊಳಗೆ ಕಟ್ಟಡಗಳನ್ನು ನೀಡುವ ಭರವಸೆ ನೀಡಿದ್ದರು. ಆದರೆ, ಜು.27 ಮುಗಿದರೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೆ ತೆವಳುತ್ತಾ ಸಾಗಿದೆ.

ಇನ್ನು, ದುರಸ್ಥಿ ಕಾರ್ಯಗಳನ್ನು ನಿರ್ವಹಿಸಲು ಪಾಲಿಕೆ ಶಿಕ್ಷಣ ವಿಭಾಗಕ್ಕೆಂದೇ ಎಂಜಿನಿಯರಿಂಗ್ ವಿಭಾಗವನ್ನು ನೇಮಕ ಮಾಡಿದ್ದು, ಕಾಮಗಾರಿಯನ್ನು ಕೈಗೊಂಡಿಲ್ಲ. ಅಲ್ಲದೆ, ಬಿಬಿಎಂಪಿಯಲ್ಲಿ 1ಲಕ್ಷಕ್ಕಿಂತಲೂ ಅಧಿಕ ದುಡ್ಡು ಖರ್ಚು ಆಗುವಂತ ಕಾರ್ಯ ಯೋಜನೆಗಳಿಗೆ ಟೆಂಡರ್ ಕರೆಯಲೇಬೇಕು. ಇಂತಹ ನಿಯಮ ಇರುವುದರಿಂದ ಟೆಂಡರ್ ಕರೆಯದೇ ದುರಸ್ಥಿ ಕಾರ್ಯವೂ ನಿಧಾನವಾಗಿದೆ.

ರೋಶಿನಿ ಯೋಜನೆಯ ಸ್ವರೂಪ

ಬಿಬಿಎಂಪಿ ವ್ಯಾಪ್ತಿಯ 156 ಶಾಲೆ, ಕಾಲೇಜುಗಳ ಸಮಗ್ರ ಅಭಿವೃದ್ಧಿ, ಗುಣಾತ್ಮಕ ಶಿಕ್ಷಣ ಹಾಗೂ 21ನೇ ಶತಮಾನದ ಕಲಿಕಾ ಸೌಲಭ್ಯಗಳನ್ನು ಒದಗಿಸಲು ಮೈಕ್ರೋಸಾಫ್ಟ್ ಕಂಪನಿ ಹಾಗೂ ಟೆಕ್ ಅನಂತ್ ಗಾರ್ಡ್ ಸಂಸ್ಥೆಗಳು ಯೋಜನೆ ರೂಪಿಸಿದ್ದು, ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಪಾಲಿಕೆಯ ಶಾಲಾ-ಕಾಲೇಜುಗಳಿಗೆ ಹೊಸ ರೂಪ ನೀಡುವ ಯೋಜನೆಯಾಗಿದೆ.

ಖಾಸಗಿ ಶಾಲೆ, ಕಾಲೇಜುಗಳಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ ಪಾಲಿಕೆಯ ಶಾಲೆಗಳ ಮಕ್ಕಳಿಗೂ ದೊರೆಯುವಂತೆ ಮಾಡುವ ಜತೆಗೆ, ಕ್ರೀಡೆ, ಸಾಂಸ್ಕೃತಿಕ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ, ಕಂಪ್ಯೂಟರ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತದೆ. ಜತೆಗೆ ಪಾಲಿಕೆ ಶಾಲೆ ಮಕ್ಕಳ ಬೌದ್ಧಿಕ ಹಾಗೂ ಶೈಕ್ಷಣಿಕ ಸಾಮರ್ಥ್ಯ ಹೆಚ್ಚಿಸಲು ಅಗತ್ಯ ಕಾರ್ಯಕ್ರಮಗಳನ್ನು ಸಂಸ್ಥೆ ರೂಪಿಸಲಿದೆ.

ಶಿಕ್ಷಕರಿಗೆ ತರಬೇತಿ

ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಬಿಬಿಎಂಪಿ ರೋಶಿನಿ ಯೋಜನೆಗೆ ಚಾಲನೆ ನೀಡಿದ್ದು, 10 ತಿಂಗಳಿಂದ ಪಾಲಿಕೆಯ ಸರಕಾರಿ ಶಾಲಾ- ಕಾಲೇಜು ಶಿಕ್ಷಕರಿಗೆ ಐದಾರು ಬಾರಿ ತರಬೇತಿಯನ್ನು ನೀಡಲಾಗಿದೆ. ಅಲ್ಲದೆ, ಪಾಲಿಕೆ ವ್ಯಾಪ್ತಿಯಲ್ಲಿ 91 ಶಿಶುವಿಹಾರಗಳು, 15 ಪ್ರಾಥಮಿಕ ಶಾಲೆ, 34 ಪ್ರೌಢಶಾಲೆ, 14 ಪದವಿ ಪೂರ್ವ ಕಾಲೇಜು, 4 ಪದವಿ ಕಾಲೇಜುಗಳಿದ್ದು, ಒಟ್ಟಾರೆ 19 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.

ಯೋಜನೆಯ ಅನುಕೂಲ

* ಶಿಕ್ಷಕರಲ್ಲಿ 21ನೇ ಶತಮಾನ ಶಿಕ್ಷಣ ಶೈಲಿಯನ್ನು ರೂಪಿಸಬಹುದು.

* ವಿದ್ಯಾರ್ಥಿಗಳಿಗೆ ಡಿಜಿಟಲ್ ವಿಷಯಗಳ ಕುರಿತು ತಿಳಿಯುತ್ತದೆ.

* ಸ್ಯಾಟಲೈಟ್ ಹಾಗೂ ಆನ್‌ಲೈನ್ ಶಿಕ್ಷಣ.

* ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೌಲ್ಯಮಾಪನ.

* ಶಿಕ್ಷಣ ಗುಣಮಟ್ಟ ಹೆಚ್ಚಾಗಲು ರ‍್ಯಾಂಕಿಂಗ್ ವ್ಯವಸ್ಥೆ.

ಮೇ 10ರಂದು ಮೈಕ್ರೋಸಾಫ್ಟ್ ಹಾಗೂ ಟೆಕ್ ಸಂಸ್ಥೆಗಳೊಂದಿಗೆ ಸಭೆಯನ್ನು ನಡೆಸಿ, ಜು. 31ರೊಳಗೆ ಕಟ್ಟಡ ನೀಡುವುದಾಗಿ ಭರವಸೆ ನೀಡಿದ್ದೇವೆ. ಈ ಬಗ್ಗೆ ಶಿಕ್ಷಣದ ಎಂಜಿಯರಿಂಗ್ ವಿಭಾಗ ಯಾವ ಕ್ರಮ ತೆಗೆದುಕೊಂಡಿದೆ ಎಂದು ಪರಿಶೀಲನೆ ಮಾಡುತ್ತೇನೆ. ನಂತರ ಆ ಕ್ರಮ ತೆಗೆದುಕೊಳ್ಳುತ್ತೇನೆ.

-ಗಂಗಾಂಬಿಕೆ, ಬಿಬಿಎಂಪಿ ಮೇಯರ್

ನಾವು ಅಭಿವೃದ್ಧಿ ಮಾಡಲು ಕ್ರಿಯಾಯೋಜನೆಯನ್ನು ತಯಾರಿ ಮಾಡಿಕೊಂಡಿದ್ದೇವೆ. ಬಿಬಿಎಂಪಿ ಕಟ್ಟಡ ನೀಡಿದ ನಂತರ ಒಂದೊಂದೆ ಪ್ರಕ್ರಿಯೆಯನ್ನು ಪೂರೈಸುತ್ತಾ, 21ನೇ ಶತಮಾನದ ಶಿಕ್ಷಣದ ಅಭಿವೃದ್ಧಿಯನ್ನು ಮಾಡುತ್ತೇವೆ.

-ಅಲಿ ಸೇಠ್, ಟೆಕ್ ಅನಂತ್ ಗಾರ್ಡ್ ಸಂಸ್ಥೆ ಮುಖ್ಯಸ್ಥ

share
ರವಿಕಿರಣ್ ಅಣೆದೊಡ್ಡಿ
ರವಿಕಿರಣ್ ಅಣೆದೊಡ್ಡಿ
Next Story
X