ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಮಾಡುತ್ತೇವೆ: ಮುಖ್ಯಮಂತ್ರಿ ಬಿಎಸ್‌ವೈ
"ಬದಲಾವಣೆ ಇಲ್ಲದೆ ಧನ ವಿನಿಯೋಗ ಮಸೂದೆ ಅಂಗೀಕಾರ"

ಬೆಂಗಳೂರು, ಜು.28: ವಿಧಾನಸಭೆಯಲ್ಲಿ ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಮಾಡುತ್ತೇವೆ. ಧನ ವಿನಿಯೋಗ ಮಸೂದೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಅಂಗೀಕರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬಿಎಸ್‌ವೈ ಹಾದಿ ಸುಗಮ: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಶ್ರಮಿಸುತ್ತಿರುವ ಬಿ.ಎಸ್.ಯಡಿಯೂರಪ್ಪಗೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ನೀಡಿರುವ ತೀರ್ಪು ವರದಾನವಾಗಿ ಪರಿಣಮಿಸಿದ್ದು, ಸೋಮವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಹಾದಿ ಸುಗಮವಾಗಿದೆ.
225 ಸದಸ್ಯ ಬಲದ ವಿಧಾನಸಭೆಯ ಸಂಖ್ಯಾಬಲ ಇದೀಗ 208ಕ್ಕೆ ಕುಸಿದಿದ್ದು, ಬಹುಮತ ಸಾಬೀತುಪಡಿಸಲು ಮುಖ್ಯಮಂತ್ರಿಗೆ 105 ಶಾಸಕರ ಬೆಂಬಲ ಅಗತ್ಯವಿದೆ. ಈಗಾಗಲೇ, ಬಿಜೆಪಿ 105 ಸ್ಥಾನಗಳನ್ನು ಹೊಂದಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಈಗಾಗಲೇ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.
Next Story





