ಜೈಪಾಲ್ ರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ಜು.28: ಕೇಂದ್ರದ ಮಾಜಿ ಸಚಿವ ಜೈಪಾಲ್ ರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದೀರ್ಘ ಅವಧಿಗೆ ಶಾಸಕರಾಗಿ, ಸಂಸದರಾಗಿ, ಕೇಂದ್ರದಲ್ಲಿ ಹಲವು ಪ್ರಮುಖ ಖಾತೆಗಳ ಹೊಣೆಗಾರಿಕೆ ವಹಿಸಿಕೊಂಡಿದ್ದ ಅವರು ಅತ್ಯಂತ ಪ್ರಬುದ್ಧ ಸಂಸದೀಯ ಪಟುವಾಗಿದ್ದರು ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Next Story





