ಏರ್ಯ ನಿಧನಕ್ಕೆ ಮಂಗಳೂರು ಬಿಷಪ್ ಸಂತಾಪ
ಮಂಗಳೂರು, ಜು.28: ಶಿಕ್ಷಣ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ವಿವಿಧ ಕ್ಷೇತ್ರಗಳಲ್ಲಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಅವರ ನಿಧನಕ್ಕೆ ಸಂತಾಪ ಸೂಚಿಸುವುದಾಗಿ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ. ಪೀಟರ್ ಪಾವ್ಲ್ ಸಲ್ದಾನ ತಿಳಿಸಿದ್ದಾರೆ.
Next Story





