ಯಕ್ಷಗಾನ ಸ್ತ್ರೀವೇಷಧಾರಿಳಿಗೆ ರಂಗಸ್ಥಳ ಪ್ರಶಸ್ತಿ ಪ್ರದಾನ

ಉಡುಪಿ, ಜು.28: ಉಡುಪಿ ರಂಗಸ್ಥಳ ಸಂಸ್ಥೆಯ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ರವಿವಾರ ಆಯೋಜಿಸಲಾದ ಸುಂದರ ಕೆ.ಶೆಟ್ಟಿ ಮತ್ತು ರಾಧಾ ಶೆಟ್ಟಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತೆಂಕುತಿಟ್ಟಿನ ಸ್ತ್ರೀ ವೇಷಧಾರಿ ಸಂಜಯ್ ಕುಮಾರ್ ಶೆಟ್ಟಿ ಗೋಣಿಬೀಡು ಹಾಗೂ ಬಡಗ ತಿಟ್ಟು ಬಣ್ಣದ ವೇಷಧಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರಿ ಅವರಿಗೆ ರಂಗಸ್ಥಳ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಖ್ಯ ಅತಿಥಿಯಾಗಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜು ಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಮಾತನಾಡಿ, ಸಂಘ-ಸಂಸ್ಥೆಗಳು ಯಕ್ಷಗಾನ, ನಾಟಕ ಮೊದಲಾದ ಕಲಾಪರಂಪರೆಯನ್ನು ಉಳಿಸಲು ವಿಶೇಷ ಮುತುವರ್ಜಿ ವಹಿಸಬೇಕು. ಇದರಿಂದ ಯುವಜನತೆಗೆ ಪೌರಾಣಿಕ ಮತುತಿ ಐತಿಹಾಸಿಕ ವಿಷಯಗಳ ಮಾಹಿತಿ ಲಭ್ಯವಾಗುತ್ತದೆ ಎಂದು ಹೇಳಿದರು.
ಯುವಕ-ಯುವತಿಯರಿಗೆ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತಿತಿದೆ. ಹೀಗಾಗಿ ದೃಶ್ಯ ಮಾಧ್ಯಮದ ಮೂಲಕ ವಿಷಯಗಳನ್ನು ತಿಳಿಸಲು ಸಾಧ್ಯವಾಗುತತಿದೆ ಎಂದರು.
ಅಧ್ಯಕ್ಷತೆಯನ್ನು ಮಣಿಪಾಲ ಮಾಹೆ ಸಹಕುಲಪತಿ ಡಾ.ಎಚ್.ಎಸ್. ಬಲ್ಲಾಳ್ ವಹಿಸಿದ್ದರು. ಮಾಜಿ ಶಾಸಕ ಯು.ಆರ್.ಸಭಾಪತಿ, ಉದ್ಯಮಿಗಳಾದ ಉದಯ್ ಶೆಟ್ಟಿ, ಮನೋಹರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ, ಸಾಲಿಗ್ರಾಮ ಮೇಳದ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಉಪಸ್ಥಿತರಿದ್ದರು.





