Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕಾರು...

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ29 July 2019 8:49 PM IST
share
ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ಹೊಸದಿಲ್ಲಿ, ಜು.29: ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರದ ಸಂತ್ರಸ್ತೆ ಮತ್ತಾಕೆಯ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಮಹಿಳೆಯರು ಮೃತಪಟ್ಟು ಸಂತ್ರಸ್ತೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಕುಲದೀಪ್ ಸೆಂಗರ್ ಎರಡು ವರ್ಷಗಳ ಹಿಂದೆ ಯುವತಿಯನ್ನು ಅತ್ಯಾಚಾರಗೈದ ಆರೋಪ ಎದುರಿಸುತ್ತಿದ್ದು ಸದ್ಯ ಜೈಲಿನಲ್ಲಿದ್ದಾನೆ. ಸಂತ್ರಸ್ತೆಯ ತಾಯಿ ನೀಡಿರುವ ಹೇಳಿಕೆಯಲ್ಲಿ, ಆರೋಪಿ ಶಾಸಕ ಅತ್ಯಾಚಾರ ಸಂತ್ರಸ್ತೆಯನ್ನು ಹತ್ಯೆಗೈಯ್ಯಲು ಜೈಲಿನಿಂದಲೇ ಷಡ್ಯಂತ್ರ ರೂಪಿಸುತ್ತಿದ್ದ ಎಂದು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆಯರಲ್ಲಿ ಒಬ್ಬಾಕೆ ಸಂತ್ರಸ್ತೆಯ ಚಿಕ್ಕಮ್ಮನಾಗಿದ್ದು, ಅತ್ಯಾಚಾರ ಪ್ರಕರಣದ ಸಾಕ್ಷಿಯಾಗಿದ್ದರು.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಇದೊಂದು ಅಪಘಾತದಂತೆ ಕಾಣುತ್ತದೆ. ಸಂತ್ರಸ್ತೆಯ ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಬ್ಬಂದಿ ಘಟನೆ ನಡೆದ ದಿನದಂದು ಆಕೆಯ ಜೊತೆಗಿರಲಿಲ್ಲ ಮತ್ತು ಕಾರಿಗೆ ಗುದ್ದಿದ ಟ್ರಕ್‌ನ ನಂಬರ್ ಪ್ಲೇಟ್‌ಗೆ ಕಪ್ಪು ಬಣ್ಣ ಬಳಿಯಲಾಗಿತ್ತು. ಗಾಯಾಳು ಸಂತ್ರಸ್ತೆಯ ದೇಹದಲ್ಲಿ ಹಲವು ಮೂಳೆಗಳು ಮುರಿತಕ್ಕೊಳಗಾಗಿದ್ದು ಆಕೆಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಲಕ್ನೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಟಿ ನಡೆಸಿದ ಪೊಲೀಸರು, ಅಪಘಾತ ನಡೆಸಿದ ಟ್ರಕ್‌ನ ಚಾಲಕ ಮತ್ತು ಮಾಲಕನನ್ನು ಬಂಧಿಸಲಾಗಿದೆ. ವಾಹನ ಸಾಲದ ಕಂತನ್ನು ಬಾಕಿಯುಳಿಸಿದ್ದ ಕಾರಣಕ್ಕೆ ಗುರುತು ಪತ್ತೆಯಾಗದಿರಲಿ ಎನ್ನುವ ಕಾರಣಕ್ಕೆ ನಂಬರ್ ಪ್ಲೇಟ್‌ಗೆ ಕಪ್ಪು ಬಣ್ಣ ಬಳಿದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಸಂತ್ರಸ್ತೆಯ ಭದ್ರತೆಗೆ ಓರ್ವ ಬಂದೂಕುಧಾರಿ ಸಹಿತ ಒಟ್ಟು ಒಂಬತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಘಟನೆ ನಡೆದ ದಿನ ಕಾರಿನಲ್ಲಿ ಸ್ಥಳಾವಕಾಶ ಕಡಿಮೆಯಿದ್ದ ಕಾರಣ ಅವರನ್ನು ಜೊತೆಗೆ ಬರದಂತೆ ಸೂಚಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಐದು ಮಂದಿಯಿದ್ದ ಕಾರಿನಲ್ಲಿ ರಾಯ್‌ಬರೇಲಿಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಪ್ರತ್ಯೇಕ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸಂತ್ರಸ್ತೆಯ ಚಿಕ್ಕಪ್ಪನನ್ನು ನೋಡಲು ತೆರಳುತ್ತಿದ್ದರು. ಈ ವೇಳೆ ಮಳೆ ಜೋರಾಗಿ ಸುರಿಯುತ್ತಿದ್ದ ಅವರ ಕಾರಿಗೆ ಟ್ರಕ್‌ವೊಂದು ಮುಖಾಮುಖಿ ಗುದ್ದಿತ್ತು.

2017ರಲ್ಲಿ ಶಾಸಕನ ಮನೆಗೆ ಉದ್ಯೋಗ ಕೇಳಲು ತೆರಳಿದ್ದ ಸಂದರ್ಭ ಶಾಸಕ ಸೆಂಗರ್ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಈ ಆರೋಪದಲ್ಲಿ ಸೆಂಗರ್ ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದಾರನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X