ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್
![ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್](https://www.varthabharati.in/sites/default/files/images/articles/2019/07/29/202886-1564421967.jpg)
ಬೆಂಗಳೂರು, ಜು.29: ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಸಮರ್ಪಣ(ಕಲ್ಚರಲ್ ಆ್ಯಂಡ್ ಸೋಷಿಯಲ್ ಸರ್ವೀಸ್ ಆರ್ಗನೈಝೇಶನ್) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠ, ನೋಟಿಸ್ ಜಾರಿಗೊಳಿಸಿದೆ. ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ನಾಗವಾರ ಗ್ರಾಮದಲ್ಲಿ ಎಲ್.ಟಿ.ಕಾರ್ಲೆ, ಮಹೇಂದ್ರ ಕಾರ್ಲೆ ರಾಜಕಾಲುವೆಯನ್ನು ಒತ್ತವರಿ ಮಾಡಿ ಗೋಡೆ ನಿರ್ಮಾಣ ಮಾಡಿದ್ದಾರೆ. ಹೀಗಾಗಿ, ಜಾಗವನ್ನು ವಾಪಸ್ ಪಡೆಯಬೇಕು. ಇವರಿಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೆರೆಗಳ ಸಂರಕ್ಷಣೆ ಅರ್ಜಿ ಜೊತೆ ರಾಜಕಾಲುವೆ ಒತ್ತುವರಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಇಂಗಿತ ವ್ಯಕ್ತಪಡಿಸಿ, ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿತು.
Next Story