ರೌಡಿ ಜೆಸಿಬಿ ನಾರಾಯಣ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.29: ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪದಡಿ ರೌಡಿ ಜೆಸಿಬಿ ನಾರಾಯಣನನ್ನು ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
5 ಕೊಲೆ, 2 ಕೊಲೆಯತ್ನ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ ಸೇರಿದಂತೆ, 25ಕ್ಕೂ ಹೆಚ್ಚು ಪ್ರಕರಣಗಳು ಜೆಸಿಬಿ ನಾರಾಯಣ ವಿರುದ್ಧ ದಾಖಲಾಗಿವೆ. ಈ ಹಿಂದೆ ಸಿಸಿಬಿ ಪೊಲೀಸರು, ಆರೋಪಿಯನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ ಆತ, ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಜೆಸಿಬಿ ನಾರಾಯಣ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದು, ಈತನ ವಿರುದ್ಧ ಮಡಿವಾಳ, ಮೈಕೋ ಲೇಔಟ್, ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ರೌಡಿ ಪಟ್ಟಿಗೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.
Next Story