ಕೆಎಂಎಫ್ ಚುನಾವಣೆ ಮುಂದೂಡಿಕೆ: ತಡೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಎಚ್.ಡಿ.ರೇವಣ್ಣ

ಬೆಂಗಳೂರು, ಜು.30: ಕರ್ನಾಟಕ ಹಾಲು ಮಹಾಮಂಡಲದ(ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ರಾಜ್ಯ ಸರಕಾರ ಮುಂದೂಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಚುನಾವಣೆಗೆ ಅವಕಾಶ ನೀಡಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಎಚ್.ಡಿ.ರೇವಣ್ಣ ಸೇರಿ ಎಂಟು ಜನರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಬುಧವಾರ ಅಥವಾ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಕೆಎಂಎಫ್ ಚುನಾವಣೆ ಮುಂದೂಡಿರುವ ಆದೇಶಕ್ಕೆ ತಡೆ ನೀಡಲು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹಾಗೂ ಕೆಎಂಎಫ್ನ ರಿಟರ್ನಿಂಗ್ ಆಫೀಸರ್ಗೆ ಚುನಾವಣೆ ನಡೆಸಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ. ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಹಕಾರ ಚುನಾವಣೆಯ ಆಯುಕ್ತ ಸೇರಿ ಒಟ್ಟು 6 ಜನರ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
Next Story