ಜೆಡಿಎಸ್ ನ ಮೂವರು ಅನರ್ಹ ಶಾಸಕರು ಪಕ್ಷದಿಂದ ಉಚ್ಚಾಟನೆ

ಬೆಂಗಳೂರು, ಜು.31: ಶಾಸಕ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ನ ಅಡಗೂರು ಎಚ್.ವಿಶ್ವನಾಥ್, ಕೆ.ಸಿ.ನಾರಾಯಣಗೌಡ, ಹಾಗೂ ಗೋಪಾಲಯ್ಯ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಮೂವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ. ನಿನ್ನೆಯಷ್ಟೇ ಕಾಂಗ್ರೆಸ್ ನ 14 ಅನರ್ಹ ಶಾಸಕರನ್ನು ಉಚ್ಚಾಟಿಸಿ ಎಐಸಿಸಿ ಆದೇಶಿಸಿತ್ತು.
Next Story