Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರ್ಮಿಕ ವಿಧಿವಿಧಾನಗಳೊಂದಿಗೆ ಕೆಫೆ ಕಾಫಿ...

ಧಾರ್ಮಿಕ ವಿಧಿವಿಧಾನಗಳೊಂದಿಗೆ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ31 July 2019 6:57 PM IST
share
ಧಾರ್ಮಿಕ ವಿಧಿವಿಧಾನಗಳೊಂದಿಗೆ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಅಂತ್ಯಕ್ರಿಯೆ

ಚಿಕ್ಕಮಗಳೂರು, ಜು.31: ಉದ್ಯಮಿ ವಿ.ಜಿ.ಸಿದ್ದಾರ್ಥ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮೂಡಿಗೆರೆ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಬುಧವಾರ ಒಕ್ಕಲಿಗ ಸಮುದಾಯದ ವಿಧಿವಿಧಾನಗಳೊಂದಿಗೆ ನೆರವೇರಿತು.

ಬುಧವಾರ ಮಧ್ಯಾಹ್ನ ಚಿಕ್ಕಮಗಳೂರು ನಗರಕ್ಕಾಗಮಿಸಿದ್ದ ಸಿದ್ದಾರ್ಥ ಅವರ ಪಾರ್ಥಿವ ಶರೀರವನ್ನು ಕಾಫಿ ಡೇ ಕಂಪೆನಿ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಸಂಜೆ 5.30ಕ್ಕೆ ಸ್ವಗ್ರಾಮ ಚಟ್ನಳ್ಳಿಯಲ್ಲಿರುವ ಚೇತನಹಳ್ಳಿ ಎಸ್ಟೇಟ್‍ಗೆ ಕೊಂಡೊಯ್ಯಲಾಯಿತು. ಸಂಜೆ 6ರ ಸಮಯದಲ್ಲಿ ಸಿದ್ದಾರ್ಥ ಅವರ ತಂದೆಯ ಮನೆಯ ಸಮೀಪದಲ್ಲೇ ಸಿದ್ದಾರ್ಥ ಮೃತ ದೇಹದ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ಹಾಗೂ ಪ್ರಮುಖ ರಾಜಕಾರಣಿಗಳ ಸಮ್ಮುಖದಲ್ಲಿ ನಡೆಸಲಾಯಿತು. 

ಸಿದ್ದಾರ್ಥ ಅವರ ಹಿರಿಯ ಮಗ ಅಮಥ್ರ್ಯ ಅವರು ಸಿದ್ದಾರ್ಥ ಅವರು ಒಕ್ಕಲಿಗ ಸಮುದಾಯದಂತೆ ಅಂತಿಮ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ವೇಳೆ ಸಿದ್ದಾರ್ಥ ಅವರ ಪತ್ನಿ ಮಾಳವಿಕ, ತಾಯಿ ವಾಸಂತಿ, ಇಬ್ಬರು ಪುತ್ರರು ಹಾಗೂ ಕಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 

ಅಂತ್ಯ ಸಂಸ್ಕಾರದ ವೇಳೆ ಚಟ್ನಳ್ಳಿ ಗ್ರಾಮ ಸೇರಿದಂತೆ ಮೂಡಿಗೆರೆ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಟಿ.ಬಿ.ಜಯಚಂದ್ರ, ಮೋಟಮ್ಮ, ಎಚ್.ಕೆ.ಪಾಟೀಲ್, ಕಿಕೆಟಿಗ ಅನಿಲ್‍ ಕುಂಬ್ಳೆ, ಎಸ್.ಎಂ.ಕೃಷ್ಣ, ರಮಾನಾಥ್ ರೈ, ಸಿ.ಟಿ.ರವಿ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸೇರಿದಂತೆ ಜಿಲ್ಲೆಯ ನೂರಾರು ಜನಪ್ರತಿನಿಧಿಗಳು, ಗಣ್ಯರು, ಶಾಸಕರು ಅಂತ್ಯಕ್ರಿಯೆಗೆ ಸಾಕ್ಷಿಯಾದರು.

ಸಿದ್ದಾರ್ಥ ಅವರ ತಂದೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗಂಗಯ್ಯ ಹೆಗ್ಡೆ ಅವರು ಸಿದ್ದಾರ್ಥ ಅವರ ಅಂತ್ಯಕ್ರಿಯೆ ವೇಳೆ ಉಪಸ್ಥಿತರಿರಲಿಲ್ಲ. ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಕುಟುಂಬಸ್ಥರು ಈ ಹಿಂದೆಯೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರಿನ್ನೂ ಚೇತಸಿಕೊಳ್ಳದ ಹಿನ್ನೆಲೆಯಲ್ಲಿ ಗಂಗಯ್ಯ ಹೆಗ್ಡೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X