ಮಂತ್ರಿ ಮಂಡಲದಲ್ಲಿ ಜಿಲ್ಲೆಗೆ ಸೂಕ್ತ ಸ್ಥಾನಮಾನ: ಮಟ್ಟಾರು ಆಗ್ರಹ
ಉಡುಪಿ, ಜು.31: ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಐದು ಮಂದಿ ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರಿದ್ದು, ಜಿಲ್ಲೆಗೆ ಮಂತ್ರಿ ಮಂಡಲದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು. ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನವನ್ನು ಜಿಲ್ಲೆಯವರಿಗೆ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಒತ್ತಾಯಿಸಿದ್ದಾರೆ.
ಉಡುಪಿಯ ಪಕ್ಷದ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲೆಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಮರಳಿನ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳ ಬಹುದಾಗಿದೆ ಎಂದರು.
ಮೂರು ಜಿಲ್ಲೆಗಳ ಸುಮಾರು 23507 ಮೀನುಗಾರರ 60ಕೋಟಿ ರೂ. ಸಾಲವನ್ನು ರಾಜ್ಯ ಸರಕಾರ ಮನ್ನಾ ಮಾಡಿದ್ದು, ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ, ಮೀನುಗಾರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿ ದ್ದಾರೆ. ಅದೇ ರೀತಿ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿರುವ ಸರಕಾರದ ಕ್ರಮ ಅತ್ಯಂತ ಸಕಾಲಿಕ ನಿರ್ಧಾರವಾಗಿದೆ ಎಂದರು.
ಜಿಲ್ಲೆಯಲ್ಲಿ ಸಂಘಟನಾ ಪರ್ವದ ಅಂಗವಾಗಿ ಸದಸ್ಯತ್ವ ಅಭಿಯಾನ ಆರಂಭ ವಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ 75ಸಾವಿರ ಸದಸ್ಯರ ನೋಂದಾಣಿಯಾಗಿದೆ. ಒಟ್ಟು 2ಲಕ್ಷ ಸದಸ್ಯರ ನೋಂದಾಣಿ ಮಾಡುವ ಗುರಿಯನ್ನು ಹೊಂದಲಾಗಿದೆ. ತ್ರಿವಳಿ ತಲಾಕ್‌ಗೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಂಜೂರಾತಿ ದೊರ ಕಿರುವುದು ಐತಿಹಾಸಿಕ ನಿಣಯರ್ವಾಗಿದೆ ಎಂದು ಅವರು ತಿಳಿಸಿದರು.







