ಬಂಟ್ವಾಳ: ಕಸ ಸಂಗ್ರಹದ ಶುಲ್ಕ ಕೈ ಬಿಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಬಂಟ್ವಾಳ, ಜು. 31: ಬಂಟ್ವಾಳ: ತೆರಿಗೆಯ ಜೊತೆಗೆ ಕಸ ಸಂಗ್ರಹಣೆಗೆ ಮುಂಗಡ ಶುಲ್ಕ ಸಂಗ್ರಹಿಸುವುದನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ನಿಯೋಗ ಬುಧವಾರ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ರೇಖಾ ಶೆಟ್ಟಿಯವರ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿತು.
ಬಂಟ್ವಾಳ ಪುರಸಭೆಯಲ್ಲಿ ವಾಸದ ಮನೆ ಮತ್ತು ವಾಣಿಜ್ಯ ಕಟ್ಟಡಗಳ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಕಟ್ಟಡದ ವಿಸ್ತೀರ್ಣಕ್ಕೆ ಅನುಸಾರವಾಗಿ ಶೇ. 60ರಷ್ಟು ಕಸ ಸಂಗ್ರಹಣೆಯ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ವಸೂಲು ಮಾಡುವುದು ತೀರಾ ಜನ ವಿರೋಧಿ ಕ್ರಮವಾಗಿದೆ.
ಸಾರ್ವಜನಿಕವಾಗಿ ಕಸ ಸಂಗ್ರಹಣೆಯ ಸೇವೆಯನ್ನು ಬಳಸದಿರುವ ನಗರವಾಸಿಗಳು ಕೂಡ ಕಟ್ಟಡ ತೆರಿಗೆಯ ಜೊತೆ ಹೆಚ್ಚುವರಿ ಹಣವನ್ನು ಪಾವತಿಸಲು ಒತ್ತಡ ಹೇರುತ್ತಿರುವ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಪುರಸಭಾ ವ್ಯಾಪ್ತಿಯ ಮನೆ ತೆರಿಗೆ ಹಾಗೂ ಕಟ್ಟಡ ತೆರಿಗೆಯೊಂದಿಗೆ ಕಸ ಸಂಗ್ರಹ ಶುಲ್ಕ ವಸೂಲು ಮಾಡುವುದನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಮನವಿ ಮೂಲಕ ಒತ್ತಾಯಿಸಲಾಗಿದೆ.
ಕಸ ಸಂಗ್ರಹಣೆಯ ಸೇವೆಯನ್ನು ಬಳಸದಿರುವ ನಗರವಾಸಿಗಳಿಗೂ ತೆರಿಗೆಯ ಜೊತೆ ಕಸ ಸಂಗ್ರಹಣೆಯ ಶುಲ್ಕ ಪಾವತಿಸಲು ಒತ್ತಡ ಹೇರುವುದು ಸರಿಯಲ್ಲ ಹಾಗಾಗಿ ಈ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಈ ಸಂದರ್ಭ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪುರಸಭೆ ಸದಸ್ಯರಾದ ವಾಸು ಪೂಜಾರಿ ಲೊರೆಟ್ಟೊ, ಮುಹಮ್ಮದ್ ನಂದರಬೆಟ್ಟು, ಜನಾರ್ಧನ ಚಂಡ್ತಿಮಾರ್, ಮುಹಮ್ಮದ್ ಶರೀಫ್, ಗಂಗಾಧರ ಪೂಜಾರಿ, ಸಿದ್ದೀಕ್ ಗುಡ್ಡೆಅಂಗಡಿ, ಲೋಲಾಕ್ಷ ಶೆಟ್ಟಿ, ಗಾಯತ್ರಿ ಪ್ರಕಾಶ, ಜೆಸಿಂತಾ, ಪಿ.ರಾಮಕೃಷ್ಣ ಆಳ್ವ, ಮಾಜಿ ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಜಿಪಂ ಸದಸ್ಯ ಪದ್ಮಶೇಖರ್ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ, ಪಾಣೆಮಮಂಗಳೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜಯಂತಿ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಹಾಜರಿದ್ದರು.







