Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಪೀಳಿಗೆಯ ಆಸಕ್ತಿ ಸಾಹಿತ್ಯ ಲೋಕದ...

ಯುವಪೀಳಿಗೆಯ ಆಸಕ್ತಿ ಸಾಹಿತ್ಯ ಲೋಕದ ಭವಿಷ್ಯದ ಭರವಸೆಯಾಗಿದೆ - ಚಿ.ನಾ.ಸೋಮೇಶ್

ಚೇರಂಬಾಣೆಯಲ್ಲಿ ಮಡಿಕೇರಿ ತಾಲೂಕು 10 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ತೆರೆ

ವಾರ್ತಾಭಾರತಿವಾರ್ತಾಭಾರತಿ1 Aug 2019 5:44 PM IST
share
ಯುವಪೀಳಿಗೆಯ ಆಸಕ್ತಿ ಸಾಹಿತ್ಯ ಲೋಕದ ಭವಿಷ್ಯದ ಭರವಸೆಯಾಗಿದೆ -  ಚಿ.ನಾ.ಸೋಮೇಶ್

ಮಡಿಕೇರಿ ಆ.1 - ಕೊಡಗಿನ ಪವಿತ್ರ ಮಣ್ಣಿನಲ್ಲಿ  ಸಮ?ದ್ದ ಸಾಹಿತ್ಯ ಕ?ಷಿಯಲ್ಲಿ ಸಾಕಷ್ಟು ಮಂದಿ ತೊಡಗಿಸಿಕೊಂಡಿದ್ದು. ಮಹಿಳೆಯರಿಗೆ ಸಾಹಿತ್ಯ ರಂಗದಲ್ಲಿ ಆಸಕ್ತಿ ಹೆಚ್ಚಿರುವುದು ಗಮನಾಹ9ವಾಗಿದೆ. ಸಾಹಿತ್ಯ, ಸಾಂಸ್ಕ?ತಿಕ ಜೀವನದಲ್ಲಿ ಜಿಲ್ಲೆಯ ಯುವಪೀಳಿಗೆಯೂ ಹೆಚ್ಚು ಆಸಕ್ತಿ ವಹಿಸುತ್ತಿರುವ ಬೆಳವಣಿಗೆ ಕೊಡಗಿನ ಭವಿಷ್ಯ ಈ ವಿಚಾರದಲ್ಲಿ ಉಜ್ವಲವಾಗಿದೆ ಎಂದು ಶಕ್ತಿ ಪತ್ರಿಕೆಯ  ಸಹಾಯಕ ಸಂಪಾದಕ ಚಿ.ನಾ.ಸೋಮೇಶ್ ಶ್ಲಾಘಿಸಿದ್ದಾರೆ.

ಚೇರಂಬಾಣೆ ಕೊಡವ ಸಮಾಜದಲ್ಲಿ ಆಯೋಜಿತ ಮಡಿಕೇರಿ ತಾಲೂಕು 10 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ನೆರವೇರಿಸಿದ ಸೋಮೇಶ್, ನಡಿಕೇರಿಯಂಡ ಚಿಣ್ಣಪ್ಪ ಅವರ ಸಾಹಿತ್ಯ ಕ?ತಿಗಳು ಕೊಡಗಿನ ಸಾಹಿತ್ಯ ಲೋಕವನ್ನು ಶ್ರೀಮಂತವಾಗಿಸಿತ್ತು. ಈ ನೆಲದಲ್ಲಿ ಸಮೃದ್ಧವಾಗಿ ಸಾಹಿತ್ಯ ಕೃಷಿ ಸಾಧ್ಯ ಎಂದು ಸಾವಿರಾರು ಲೇಖಕರು, ಕವಿಗಳು ನಿರೂಪಿಸಿದ್ದಾರೆ ಎಂದರಲ್ಲದೇ, ಕೊಡಗಿನ ಸಾಹಿತ್ಯ ರಂಗ ಇಲ್ಲಿನ ದೈವತ್ವ, ಶೂರತ್ವದ ಗುಣಗಳಷ್ಟೇ ಪ್ರಬಲವಾಗಿದ್ದು, ದೇವನಿರ್ಮಿತ ಕೊಡಗಿನ ಪುಣ್ಯ ನೆಲ ಇಡೀ ಪ್ರಪಂಚದಲ್ಲಿಯೇ ಎಲ್ಲಿಯೂ ದೊರಕದಷ್ಟು ಸಮ?ದ್ದವಾಗಿದೆ, ಮನುಷ್ಯನ ಆಂತರಿಕ ಸುಖಕ್ಕೂ  ಈ ನೆಲ ಅತ್ಯುತ್ತಮವಾಗಿದೆ ಎಂದು ಹೆಮ್ಮೆಯಿಂದ  ಹೇಳಿದರು.

ಸಾಹಿತ್ಯ, ಸಾಂಸ್ಕೃತಿಕ ಜೀವನದಲ್ಲಿ ಯುವಪೀಳಿಗೆಯೂ ಹೆಚ್ಚು ಆಸಕ್ತಿ ವಹಿಸುತ್ತಿರುವ ಬೆಳವಣಿಗೆ ಕೊಡಗಿನ ಭವಿಷ್ಯ ಈ ವಿಚಾರದಲ್ಲಿ ಉಜ್ವಲವಾಗಿದೆ,  ಹೀಗಾಗಿಯೇ ಜಿಲ್ಲೆಯ ಮೂಲೆಮೂಲೆಗಳಲ್ಲಿಯೂ ಸಾಹಿತ್ಯ, ಕವನ ರಚನೆಯಲ್ಲಿ ತೊಡಗಿರುವವರು ಕಾಣಸಿಗುತ್ತಾರೆ  ಎಂಬ ತೃಪ್ತಿಗೆ ಕಾರಣವಾಗುತ್ತದೆ ಎಂದು ಹೇಳಿದ ಚಿ.ನಾ.ಸೋಮೇಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲೆಯ ಸಾಕಷ್ಟು ಸುಪ್ತ ಪ್ರತಿಭೆಗಳಿಗೆ ವೇದಿಕೆ ನೀಡಿದೆ ಎಂದೂ ಶ್ಲಾಘಿಸಿದರು. ದೇವಾಲಯ ನಿಮಾಣ, ಶಿಕ್ಷಣ ಸಂಸ್ಥೆಯ ಪ್ರಾರಂಭ, ವನ್ಯಜೀವಿಗಳ ಆರೈಕೆಯಷ್ಟೇ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ ಸಕ್ರಿಯರಾಗುವುದು ಮಾನವನಾಗಿ ಹುಟ್ಟಿದ ಮೇಲೆ ಅಗತ್ಯವಾದ ಕ್ರಿಯೆಯಾಗಿದೆ ಎಂದೂ ಅವರು ಅಭಿಪ್ರಾಯಪಟ್ಟರು.

ಸಮ್ಮೇಳನಾಧ್ಯಕ್ಷ ಕಿಗ್ಗಾಲು ಗಿರೀಶ್ ಮಾತನಾಡಿ, ಮಡಿಕೇರಿ ತಾಲೂಕು 10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಚೇರಂಬಾಣೆಯಂಥ ಗ್ರಾಮೀಣ ಪ್ರದೇಶದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಸಂತೋಷ ತಂದಿದೆ. ಗ್ರಾಮೀಣ ಪ್ರತಿಭೆಗಳಿಗೆ ಇಂಥ ಸಮ್ಮೇಳನ  ಸಾಹಿತ್ಯ ರಚನೆಗೆ ಮತ್ತಷ್ಟು ಪ್ರೋತ್ಸಾಹ ತರುವಂತಾಗಲಿ ಎಂದು ಹಾರೈಸಿದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ್ ಮಾತನಾಡಿ,  ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಿತ್ಯ ಸಂಬಂಧಿತ ಕಾರ್ಯ ಕ್ರಮಗಳು ಹೆಚ್ಚುತ್ತಲೇ ಇರಬೇಕು. ಮಗು ತನ್ನ ತಾಯಿಯನ್ನು ಪ್ರೀತಿಸುವಂತೆ ಕನ್ನಡ ಮಾತೆಯನ್ನು ಆಕೆಯ ಮಕ್ಕಳಾದ ನಾವೆಲ್ಲಾ ಆರೈಕೆ ಮಾಡಬೇಕು ಎಂದು ಕರೆ ನೀಡಿದರು. ಭಾಷೆ ಉಳಿದರೆ ಮಾತ್ರ ಸಂಸ್ಕೃತಿಯೂ ಉಳಿಯುತ್ತದೆ. ಅನ್ಯ ಭಾಷೆಗಳ ಪ್ರಭಾವ ಹೆಚ್ಚಾದರೆ ಕನ್ನಡಕ್ಕೆ ಅಪಾಯ ಖಂಡಿತಾ ಎಂಬುದನ್ನೂ ಮರೆಯಬಾರದು ಎಂದೂ ಜಯರಾಮ್ ಕಿವಿಮಾತು ಹೇಳಿದರು.

ತಲಕಾವೇರಿ - ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಮಾತನಾಡಿ, ಕೊಡಗಿನಲ್ಲಿ ತಾನು ಗಮನಿಸಿದಂತೆ ಮಹಿಳೆಯರಿಗೆ ಸಾಹಿತ್ಯ, ಸಂಸ್ಕೃತಿಕ ಕಾಯ9ಕ್ರಮಗಳಲ್ಲಿ ಹೆಚ್ಚಿನ ಆಸಕ್ತಿಯಿದೆ. ಹೀಗಾಗಿಯೇ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಕಾಣಿಸುತ್ತಾರೆ ಎಂದರಲ್ಲದೇ ಮಹಿಳೆಯರೇ ಮನೆಯಲ್ಲಿ ಮಕ್ಕಳಿಗೆ ಮೊದಲ ಗುರುವಾಗಿರುವುದರಿಂದ ಈ ಬೆಳವಣಿಗೆ ಮೆಚ್ಚುವಂಥದ್ದು ಎಂದರು. ಕೊಡಗಿನ ಜನರು ತಾವೇ ಮೊದಲಾಗಿ ಮಾತೆ ಕಾವೇರಿ ರಕ್ಷಣೆಗೆ ಮುಂದಾಗುವಂತೆ ಕರೆ ನೀಡಿದ ಬಿ.ಎಸ್.ತಮ್ಮಯ್ಯ, ಕಾವೇರಿ ನದಿ ಪರಿಸರವನ್ನು ಶುಚಿಯಾಗಿರಿಸುವಲ್ಲಿ ಆಯಾ ಗ್ರಾಮಪಂಚಾಯತ್ ಗಳು ಹೆಚ್ಚಿನ ಆಸಕ್ತಿ ತಳೆಯಬೇಕೆಂದೂ ಆಗ್ರಹಿಸಿದರು.

ಕನ್ನಡ ಸಾಹಿತ್ಯ ಪರಿಷತ್ ನ ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ, ಚೇರಂಬಾಣೆ ಗ್ರಾಮ ಪಂಚಾಯತ್, ಸ್ಥಳೀಯ ವಿದ್ಯಾಸಂಸ್ಥೆಗಳ ಬೆಂಬಲದಿಂದ ಈ ಗ್ರಾಮದಲ್ಲಿ ಕನ್ನಡಮ್ಮನ ಸಾಹಿತ್ಯ ಸೇವೆ ಅತ್ಯಂತ ಯಶಸ್ವಿಗೆ ಕಾರಣವಾಯಿತು. ಕನ್ನಡ ಭಾಷೆ ಅತ್ಯಂತ ಸುಲಲಿತವಾಗಿದ್ದು ಕನ್ನಡ ಭಾಷೆಗೆ ಖಂಡಿತಾ ಉಜ್ವಲ ಭವಿಷ್ಯಲಿದೆ. ಹೀಗಾಗಿ ಕನ್ನಡಕ್ಕೆ ಧಕ್ಕೆ  ಬಂದೀತು ಎಂಬ ಆತಂಕ ಅಪ್ರಸ್ತುತ ಎಂದು ಅಭಿಪ್ರಾಯಪಟ್ಟರು.ಕಸ್ತೂರಿಯಂತೆ ಕನ್ನಡ ಭಾಷೆಯೂ ಸದಾ ತನ್ನ ಘಮವನ್ನು ನಾಡಿನಾದ್ಯಂತ ಪಸರಿಸುತ್ತಲೇ ಇರುತ್ತದೆ ಎಂದೂ ಸಂತೋಷ್ ಹೇಳಿದರು.

ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಗೌರವ ಕಾಯ9ದಶಿ9 ಕೆ.ಎಸ್.ರಮೇಶ್, ಚೇರಂಬಾಣೆಯ  ಗ್ರಾ.ಪಂ. ಅಧ್ಯಕ್ಷ ಅಶೋಕ್, ಚೇರಂಬಾಣೆ  ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮುಕ್ಕಾಟಿ ಎನ್.ಮಾದಪ್ಪ ವೇದಿಕೆಯಲ್ಲಿದ್ದರು. ಕಸಾಪ ಜಿಲ್ಲಾ ನಿರ್ದೇಶಕ ಎಂ.ಬಿ.ಜೋಯಪ್ಪ ಸ್ವಾಗತಿಸಿ ಕೆ.ಎಲ್.ರೋಹಿಣಿ ನಿರೂಪಿಸಿದರು.


ಮಡಿಕೇರಿ ತಾಲೂಕು 10  ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ವೈವಿಧ್ಯಮಯ ಸಾಂಸ್ಕ?ತಿಕ ಕಾಯ9ಕ್ರಮಗಳು ಜನಮನ ಸೂರೆಗೊಂಡವು. ಚೇರಂಬಾಣೆ ವ್ಯಾಪ್ತಿಯ ಗ್ರಾಮಸ್ಥರು ಕೊಡವ ಸಮಾಜದಲ್ಲಿ ಕಿಕ್ಕಿರಿದು ಸೇರಿದ್ದು ಗಮನಾರ್ಹವಾಗಿತ್ತು. 

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ಮಡಿಕೇರಿ ತಾಲೂಕು ಕಸಾಪದಿಂದ ಚೇರಂಬಾಣೆಯ ಬೇಂಗ್ನಾಡ್ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ನಾಡು, ನುಡಿ, ಸಾಹಿತ್ಯ, ನೆಲ, ಜಲ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳನ್ನು ಸನ್ಮಾನಿಸಲಾಯಿತು.

ಕ್ರೀಡಾಕ್ಷೇತ್ರದಿಂದ ಚೇರಂಬಾಣೆಯ ಮೇಲಾಟಂಡ ಅರುಣ್ ಉತ್ತಪ್ಪ, ಸಮಾಜ ಸೇವೆಗಾಗಿ ಮಹದೇವಪೇಟೆಯ ಮಹಿಳಾ ಸಹಕಾರ ಸಂಘ, ಮಾಧ್ಯಮ ಕ್ಷೇತ್ರದಿಂದ ಹಿರಿಯ ಪತ್ರಕರ್ತ  ಅನಿಲ್ ಎಚ್.ಟಿ. ಶಿಕ್ಷಣ ಕ್ಷೇತ್ರದಿಂದ ಚೆಟ್ಟಿಮಾನಿಯ ಕೇಕಡ ಇಂದುಮತಿ, ಸಾಹಿತ್ಯ ಕ್ಷೇತ್ರದಿಂದ ಚೆಂಬು ಗ್ರಾಮದ ಹೊಸೂರು ಸಂಗೀತ ರವಿರಾಜ್,  ಉನ್ನತ ಹುದ್ದೆಗಾಗಿ ಮಡಿಕೇರಿಯ ಪಿ.ಎಂ. ಸಚಿನ್ ಅವರನ್ನು ಸನ್ಮಾನಿಸಲಾಯಿತು.

 ಕೃಷಿ ಕ್ಷೇತ್ರದಿಂದ ಚೇರಂಬಾಣೆಯ ಜಿ.ಈ. ಪಳಂಗಪ್ಪ, ನೃತ್ಯ ಕ್ಷೇತ್ರದಿಂದ  ಕಾವ್ಯಶ್ರೀ, ಸಿನಿಮಾ ಕ್ಷೇತ್ರದಿಂದ ಚೇರಂಬಾಣೆಯ ಕೊಟ್ಟುಕತ್ತಿರ ಪ್ರಕಾಶ್, ವೈದ್ಯಕೀಯ ಕ್ಷೇತ್ರದಿಂದ  ಡಾ. ಹೆಚ್.ಎಸ್. ಉರಾಳ, ಸಂಗೀತ ಕ್ಷೇತ್ರದಿಂದ ಮಡಿಕೇರಿಯ ಕೋದಂಡ ಗೌರು ಗಣಪತಿ, ರಂಗಭೂಮಿಯಿಂದ ಅರ್ವತ್ತೊಕ್ಲಿನ ತೆನ್ನೀರ ರಮೇಶ್ ಪೊನ್ನಪ್ಪ ಅವರನ್ನು ಕಸಾಪದಿಂದ ಅಭಿನಂದಿಸಲಾಯಿತು.

 ಹೈನುಗಾರಿಕೆ ಕ್ಷೇತ್ರದಿಂದ ಮಡಿಕೇರಿಯ ಮುರಾದ್, ಯುವ ಪ್ರತಿಭೆ ಮರಗೋಡಿನ ಪಿ.ಆರ್. ಆರ್ಯ, ಯಕ್ಷಗಾನದಲ್ಲಿ ಸಂಪಾಜೆಯ ಬಿ.ಜೆ. ಯಶೋಧರ, ವಿಶೇಷ ಪ್ರತಿಭೆ ಕೊಳಗದಾಳಿನ ಚೀರಮಂಡ ವಾಣಿ ಚಂಗುವಮ್ಮಯ್ಯ, ವೈಜ್ಞಾನಿಕ ಕ್ಷೇತ್ರದಿಂದ ಚೇರಂಬಾಣೆಯ ಸಿ.ಆರ್. ಲೋಕೇಶ್, ಕಲೆ ಕ್ಷೇತ್ರದಿಂದ ಹೆಚ್. ಗೋಪಾಲ ಅವರುಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ಕಿಗ್ಗಾಲು ಗಿರೀಶ್, ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಶಕ್ತಿ ಪತ್ರಿಕೆ ಸಹಾಯಕ ಸಂಪಾದಕ ಚಿ.ನಾ. ಸೋಮೇಶ್,  ಕನಾ9ಟಕ ಅರಭಾಷೆ ಸಂಸ್ಕೃತಿ ಅಕಾಡೆಮಿ ಸದಸ್ಯ ಪಿ.ಸಿ. ಜಯರಾಮ, ತಲಕಾವೇರಿ ಭಾಗಮಂಡಲ ದೇವಾಲಯ ಸಮಿತಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಮಾಜೀ ಸೈನಿಕರ ಸಂಘದ ಅಧ್ಯಕ್ಷ ಮುಕ್ಕಾಟಿ ಎನ್. ಮಾದಪ್ಪ, ಗ್ರಾ.ಪಂ. ಅಧ್ಯಕ್ಷ ಅಶೋಕ್   ಸಾಧಕರನ್ನು ಸನ್ಮಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X