ಉಡುಪಿ: ಖಾಸಗಿ ಪಿ.ಜಿ.ಗಳ ಮಾಹಿತಿ ನೀಡುವಂತೆ ಸೂಚನೆ
ಉಡುಪಿ, ಆ.1:ಉದ್ಯೋಗಸ್ಥ ಮಹಿಳೆಯರ ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರ ವಾಸ್ತವ್ಯ ಸೌಲ್ಯಗಳ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚಿಸಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿಯಾಗಿ ನಡೆಸುತ್ತಿರುವ ಎಲ್ಲಾ ಮಹಿಳೆಯರ ಮತ್ತು ಮಕ್ಕಳ ಹಾಸ್ಟೆಲ್/ಪೇಯಿಂಗ್ ಗೆಸ್ಟ್(ಪಿ.ಜಿ.)ಗಳ ಮಾಹಿತಿಯನ್ನು ಸಂಬಂಧಿತ ವ್ಯಕ್ತಿ/ಸಂಸ್ಥೆಗಳು ನಿಗದಿತ ನಮೂನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆ.31ರೊಳಗೆ ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ,ಮಣಿಪಾಲ (ದೂರವಾಣಿ ಸಂಖ್ಯೆ:0820-2574978) ಇವರನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





