ಡಿಸಿಪಿ ಹನುಮಂತರಾಯ ದಾವಣಗೆರೆ ಎಸ್ಪಿಯಾಗಿ ವರ್ಗಾವಣೆ

ಮಂಗಳೂರು, ಆ.1: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಕಾನೂನು ಸುವ್ಯವಸ್ಥಾ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿರುವ ಹನುಮಂತರಾಯ ಅವರನ್ನು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಅವರಿಂದ ತೆರವಾದ ಸ್ಥಾನಕ್ಕೆ ಯಾರನ್ನೂ ನಿಯುಕ್ತಿಗೊಳಿಸಿಲ್ಲ.
2018ರ ಜೂ.8ರಂದು ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಆ ಬಳಿಕ ಕಾನೂನು ಮತ್ತು ಸುವ್ಯವಸ್ಥಾ ವಿಭಾಗದ ಡಿಸಿಪಿ ಶಾಂತರಾಜು ಅವರಿಂದ ತೆರವಾದ ಸ್ಥಾನಕ್ಕೆ ಹನುಮಂತರಾಯ ನಿಯುಕ್ತಿಗೊಂಡಿದ್ದರು.
Next Story





