ಕಕ್ಯಪದವು: ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಓರ್ವ ಸೆರೆ

ಬಂಟ್ವಾಳ, ಆ. 1: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಗುರುವಾರ ಬಂಟ್ವಾಳ ತಾಲೂಕಿನ ಕಕ್ಯಪದವಿನಲ್ಲಿ ನಡೆದಿದೆ.
ಕಕ್ಯಪದವು ಜ್ಯುವೆಲ್ಲರಿ ಮಾಲಕ ಯೋಗೀಶ ಆಚಾರ್ಯ (35) ಎಂಬಾತನನ್ನು ಪೊಲೀಸರು ಬಂಧಿಸಿರುವ ಬಗ್ಗೆ ಎಂದು ತಿಳಿದುಬಂದಿದೆ.
ಜು. 31ರಂದು ಸಂಜೆ ಬಾಲಕಿ ಆರೋಪಿಯ ಅಂಗಡಿಗೆ ಬಂದಿದ್ದ ಸಂದರ್ಭ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಬಳಿಕ ಬಾಲಕಿ ಮನೆಗೆ ಅಳುತ್ತಾ ತೆರಳಿದ್ದು, ಮನೆ ಮಂದಿ ವಿಚಾರಿಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿತ್ತು ಎಂದು ದೂರಲಾಗಿದೆ.
ಗುರುವಾರ ಬಾಲಕಿಯ ತಾಯಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





