ಹಿರಿಯಡಕ: ವಿಶ್ವವಿಜೇತ ಕಾರ್ಯಕ್ರಮ
ಉಡುಪಿ, ಆ.1: ಸ್ವಾಮಿ ವಿವೇಕಾನಂದರ ಆದರ್ಶಗಳು ಸಾರ್ವಕಾಲಿಕ ವೌಲ್ಯವನ್ನು ಹೊಂದಿದ್ದು, ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಮಂಗಳೂರು ರಾಮಕೃಷ್ಣ ಮಠದ ಸಂಪನ್ಮೂಲ ವ್ಯಕ್ತಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದ್ದಾರೆ.
ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಮಕೃಷ್ಣ ಮಠ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ‘ವಿಶ್ವವಿಜೇತ’ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ್ ಡಾ.ನಿಕೇತನ ವಿವೇಕಾನಂದರ ರಾಷ್ಟ್ರಪ್ರೇಮ, ಪಾಂಡಿತ್ಯ, ಆತ್ಮವಿಶ್ವಾಸ ಮುಂತಾದ ಗುಣಗಳನ್ನು ಯುವ ಜನತೆ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ. ಎಸ್., ಎನ್ನೆಸ್ಸೆಸ್ ಅಧಿಕಾರಿ ಪ್ರವೀಣ ಶೆಟ್ಟಿ, ಸುಭಾಷ್ ಎಚ್. ಕೆ. ಉಪಸ್ಥಿತರಿದ್ದರು. ಪ್ರವೀಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
Next Story





