Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದ ಭವಿಷ್ಯ ದೃಷ್ಟಿಯಿಂದ ಕಾಂಗ್ರೆಸ್...

ದೇಶದ ಭವಿಷ್ಯ ದೃಷ್ಟಿಯಿಂದ ಕಾಂಗ್ರೆಸ್ ಮತ್ತೆ ಆಡಳಿತಕ್ಕೆ ಬರಬೇಕು: ಬಸವರಾಜ ರಾಯ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ1 Aug 2019 9:55 PM IST
share
ದೇಶದ ಭವಿಷ್ಯ ದೃಷ್ಟಿಯಿಂದ ಕಾಂಗ್ರೆಸ್ ಮತ್ತೆ ಆಡಳಿತಕ್ಕೆ ಬರಬೇಕು: ಬಸವರಾಜ ರಾಯ ರೆಡ್ಡಿ

ಉಡುಪಿ, ಆ.1: ಸಿದ್ಧರಾಮಯ್ಯ ನೇತೃತ್ವದ ಸರಕಾರ ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಜನಪರ ಯೋಜನೆಗಳೊಂದಿಗೆ ಜನರ ಮನಸ್ಸನ್ನು ಗೆದ್ದಿರು ವುದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಇದರಿಂದಾಗಿಯೇ ಕಳೆದ ಚುನಾವ ಣೆಯಲ್ಲಿ ಕಾಂಗ್ರೆಸ್ ಮತಗಳಿಕೆಯಲ್ಲಿ ಬಿಜೆಪಿಗಿಂತ ಮೇಲುಗೈ ಪಡೆದಿತ್ತು. ಆದರೆ ಸೀಟುಗಳ ಎಣಿಕೆಯಲ್ಲಿ ಕಡಿಮೆ ಬಂದು ಅಧಿಕಾರ ವಂಚನೆ ಆಗಿರ ಬಹುದು. ಆದರೂ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಭದ್ರ ಬುನಾದಿ ಇದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಸತ್ಯಶೋಧನ ಸಮಿತಿಯ ಸಂಚಾಲಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

 ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿಸಿದ ಫಲಿತಾಂಶ ಗಳಿಸದಿರಲು ಕಾರಣವನ್ನು ಕಂಡುಕೊಳ್ಳುವ ಸಲುವಾಗಿ ನಿಯುಕ್ತಿಗೊಂಡ ಸತ್ಯ ಶೋಧನಾ ಸಮಿತಿ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ ಬಸವರಾಜ ರಾಯ ರೆಡ್ಡಿ, ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಬ್ಲಾಕ್ ಸಮಿತಿಯ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಳ ಸಭೆಯಲ್ಲಿ ಮಾತನಾಡುತಿದ್ದರು.

ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಮಾತನಾಡಿ, ದೇಶ ಹಾಗೂ ರಾಜ್ಯಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಲವು ಮುಖಂಡರನ್ನು ನೀಡಿದೆ. ಪರಂಪರೆಯಿಂದ ಬಂದ ಕಾಂಗ್ರೆಸ್‌ಗೆ ರಾಷ್ಟ್ರೀಯತೆ ಹಾಗೂ ಸಮಾಜದ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಮಾನ ಮನಸ್ಸಿನ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಸ್ಪರ್ಧಿಸಬೇಕಾಯಿತು ಎಂದರು.

ಆಮಿಷ ಹಾಗೂ ಪೊಳ್ಳು ಭರವಸೆಯ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಬಿಜೆಪಿಯಿಂದ ನಡೆಯುತ್ತಿದೆ. ಬಿಜೆಪಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಯನ್ನು ಬುಡಮೇಲು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳೇ ಸಾಕ್ಷಿ. ಕರ್ನಾಟಕದಲ್ಲಿ ಸುಲಲಿತವಾಗಿ ಆಡಳಿತ ನಡೆಸುತ್ತಿದ್ದ ಸಮ್ಮಿಶ್ರ ಸರಕಾರವನ್ನು ವಾಮಮಾರ್ಗದ ಮೂಲಕ ಶಾಸಕರನ್ನು ಖರೀದಿಸಿ ಬಿಜೆಪಿ ಇಂದು ಅಧಿಕಾರ ಗಳಿಸಿದೆ. ಪಕ್ಷ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿರುವುದರಿಂದ ಪಕ್ಷವನ್ನು ಸದೃಢ ಗೊಳಿಸಲು ಎಲ್ಲರೂ ತೊಡಗಿಸಿಕೊಳ್ಳಬೇಕಾಗಿದೆ ಎಂದರು.

ಮಾಜಿ ಸಂಸದ ಧ್ರುವನಾರಾಯಣ್ ಮಾತನಾಡಿ, ಕೇಂದ್ರ ಸರಕಾರ ಕಳೆದ ಐದು ವರ್ಷಗಳಲ್ಲಿ ಯಾವುದೇ ಒಂದು ಜನಪರ ಯೋಜನೆಯನ್ನು ಹಮ್ಮಿ ಕೊಂಡಿಲ್ಲ್ಲ. ಕಳೆದ ಯುಪಿಎ ಸರಕಾರದ ಯೋಜನೆಗಳನ್ನೇ ಕಾರ್ಯಗತ ಗೊಳಿಸಿದ್ದು ಮೋದಿ ಸಾಧನೆಯಾಗಿದೆ. ಇಂದು ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಹಾಗೂ ರೈತರ ಸಮಸ್ಯೆ ತಾಂಡವವಾಡುತ್ತಿದೆ. ಜನರು ಇಷ್ಟೊಂದು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಭಾವನಾನ್ಮಕ ವಿಷಯದಲ್ಲಿರುವ ಜನರ ಬಲಹೀನತೆಯನ್ನು ಉಪಯೋಗಿಸಿ ಕೊಂಡು ಬಿಜೆಪಿ ಅಧಿಕಾರ ಗದ್ದುಗೆ ಏರುತ್ತಿರುವುದು ದೇಶದ ದುರಂತವೆನ್ನಬೇಕು ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು. ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವೀರ್‌ಕುಮಾರ್ ಪಾಟೀಲ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್. ಸಭಾಪತಿ, ಪಕ್ಷದ ಮುಖಂಡರಾದ ಪಿ.ವಿ.ಮೋಹನ್ ಮಂಗಳೂರು, ವೆರೋನಿಕಾ ಕರ್ನೇಲಿಯೋ, ಗೀತಾ ವಾಗ್ಳೆ, ಕಿಷನ್ ಹೆಗ್ಡೆ ಕೊಳ್ಕೆಬೈಲ್, ಭುಜಂಗ ಶೆಟ್ಟಿ, ಬಿ. ಹಿರಿಯಣ್ಣ, ಮಲ್ಯಾಡಿ ಶಿವರಾಮ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ನವೀನ್‌ಚಂದ್ರ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಶೇಖರ್ ಮಡಿವಾಳ, ಮದನ್‌ಕುಮಾರ್, ಮಂಜುನಾಥ ಪೂಜಾರಿ, ನವೀನ್‌ಚಂದ್ರ ಸುವರ್ಣ, ಸತೀಶ್ ಅಮೀನ್ ಪಡುಕೆರೆ, ಇಸ್ಮಾಯಿಲ್ ಆತ್ರಾಡಿ, ಶಬ್ಬೀರ್ ಅಹ್ಮದ್, ಶಶಿಧರ ಶೆಟ್ಟಿ ಎಲ್ಲೂರು, ವಿಶ್ವಾಸ್ ಅಮೀನ್, ಗಣೇಶ್ ಕೋಟ್ಯಾನ್, ಸುಧಾಕರ ಕೋಟ್ಯಾನ್, ಕೀರ್ತಿ ಶೆಟ್ಟಿ, ಕಿರಣ್ ಕುಮಾರ್ ಉದ್ಯಾವರ, ಯತೀಶ್ ಕರ್ಕೆರ, ಉದ್ಯಾವರ ನಾಗೇಶ್ ಕುಮಾರ್, ಜನಾರ್ದನ ಭಂಡಾರ್ಕಾರ್, ಹಬೀಬ್ ಅಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರೀಶ್ ಕಿಣಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X