Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಪೂರ್ಣ ವಿವಿಗೆ ಸಾಂಪ್ರದಾಯಿಕ...

ಪರಿಪೂರ್ಣ ವಿವಿಗೆ ಸಾಂಪ್ರದಾಯಿಕ ಕಲಾಪ್ರಕಾರಗಳು ಬೇಕು: ಡಾ.ವಿನೋದ್ ಭಟ್

ವಾರ್ತಾಭಾರತಿವಾರ್ತಾಭಾರತಿ1 Aug 2019 10:41 PM IST
share
ಪರಿಪೂರ್ಣ ವಿವಿಗೆ ಸಾಂಪ್ರದಾಯಿಕ ಕಲಾಪ್ರಕಾರಗಳು ಬೇಕು: ಡಾ.ವಿನೋದ್ ಭಟ್

ಉಡುಪಿ, ಆ.1: ವಿಶ್ವವಿದ್ಯಾಲಯವೊಂದು ಪರಿಪೂರ್ಣ ಎನಿಸಿಕೊಳ್ಳಲು ಕೇವಲ ತಂತ್ರಜ್ಞಾನ ಹಾಗೂ ಆರೋಗ್ಯ ವಿಜ್ಞಾನ ಕೋರ್ಸುಗಳು ಸಾಕಾಗುವುದಿಲ್ಲ. ಇದರೊಂದಿಗೆ ಜ್ಞಾನ ಶಾಖೆಗಳಲ್ಲಿ ಸಾಂಪ್ರದಾಯಿಕ ಕಲಾ ಪ್ರಕಾರಗಳೂ ಇರಬೇಕಾಗುತ್ತದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ಕುಲಪತಿ ಡಾ.ಎಚ್.ವಿನೋದ ಭಟ್ ಅಭಿಪ್ರಾಯಪಟ್ಟಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲೋಸಾಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನಲ್ಲಿ ಪ್ರಾರಂಭಿಸಲಾದ ನೂತನವಾದ ಇಕೋಸೊಫಿಕಲ್ ಆಸ್ತೆಟಿಕ್ಸ್ ಎಂಎ ಕೋರ್ಸ್‌ನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಡಾ.ಭಟ್, ಯುನಿವರ್ಸಿಟಿ (ವಿಶ್ವವಿದ್ಯಾಲಯ) ಶಬ್ದ ಬಂದುದೇ ಯುನವರ್ಸಲಿಸಮ್‌ನಿಂದ. ಹೀಗಾಗಿ ಯಾವುದೇ ವಿ.ವಿ. ಸಾಂಪ್ರದಾಯಿಕ ಕಲಾ ಶಾಖೆಗಳಿಲ್ಲದೇ ಪರಿಪೂರ್ಣಗೊಳ್ಳುವುದಿಲ್ಲ ಎಂದರು.

ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಹೆ ವಿವಿಧ ಕಲಾಪ್ರಕಾರದ ಕಲಿಕೆಗೆ ಉತ್ತೇಜನ ನೀಡುತಿದ್ದು, ಈ ದಿಶೆಯಲ್ಲಿ ಇದೀಗ ಪ್ರಾರಂಭಿಸಿರುವ ಎಕೋಸೋಫಿಕಲ್ ಆಸ್ತೆಟಿಕ್ಸ್ ಒಂದು ಹೆಜ್ಜೆ. ಇದೊಂದು ಭಿನ್ನವಾದ, ವಿಶಿಷ್ಟ ಕೋರ್ಸ್ ಆಗಿದ್ದು, ಇದರಲ್ಲಿ ಕಲಾವಿಭಾಗದ ಪರಿಸರ, ತತ್ತ್ವಶಾಸ್ತ್ರ, ಮಾಧ್ಯಮ ಹೀಗೆ ವಿವಿಧ ಶಿಸ್ತಿನ ವಿಷಯಗಳೂ ಒಳಗೊಂಡಿವೆ. ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೇಂದ್ರದ ನಿರ್ದೇಶಕ ಪ್ರೊ.ವರದೇಶ ಹಿರೆಗಂಗೆ ಹೊಸ ಕೋರ್ಸಿನ ಕುರಿತು ವಿವರವಾಗಿ ತಿಳಿಸಿ ಇದು ದಂತಗೋಪುರ ದೊಳಗಿನ ತತ್ವಶಾಸ್ತ್ರವಲ್ಲ ಎಂದರು. ಭ್ರಾಮರಿ ಶಿವಪ್ರಕಾಶ್ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X