ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ
![ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ](https://www.varthabharati.in/sites/default/files/images/articles/2019/08/2/203384-1564684616.jpg)
ಮೈಸೂರು,ಆ.1:ಜಿಲ್ಲೆಯಲ್ಲಿರುವ ಎಲ್ಲಾ ನಾಲೆಗಳಿಗೂ ಮುಂಗಾರು ಫಸಲು ಬೆಳೆಯಲು ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಕಾಡಾ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರತಿಭಟನಾಕಾರರು, ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆ, ಹುಲ್ಲಹಳ್ಳೀ-ರಾಂಪುರ ನಾಲೆ, ವರುಣಾ, ತಾರಕ ಮತ್ತು ಹಾರಂಗಿ ನಾಲೆಗಳಿಗೆ ನೀಡು ಬಿಡಲು ಕೂಡಲೇ ತೀರ್ಮಾನ ಕೈಗೊಳ್ಳಬೇಕು ಮತ್ತು ಈ ನಾಲಾ ವ್ಯಾಪ್ತಿಯ ಎಲ್ಲಾ ಕೆರೆಕಟ್ಟೆಗಳನ್ನು ತುಂಬಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವಾರಜು, ರಾಜ್ಯ ರೈತ ಮುಖಂಡರಾದ ಎಂ.ಎಸ್.ಅಶ್ವತ್ಥನಾರಾಯಣ ರಾಜೇ ಅರಸ್, ಎಚ್.ಸಿ.ಲೋಕೇಶ್ ರಾಜೇ ಅರಸ್,ಬನ್ನೂರು ಕೃಷ್ಣಪ್ಪ, ಸರಗೂರು ನಟರಾಜ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Next Story