ಒಂದೂವರೆ ತಿಂಗಳಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಗಾವಣೆ
ನೂತನ ಆಯುಕ್ತರಾಗಿ ಭಾಸ್ಕರ್ ರಾವ್ ನೇಮಕ
ಅಲೋಕ್ ಕುಮಾರ್
ಬೆಂಗಳೂರು, ಆ.2: ನಗರ ಪೊಲೀಸ್ ಆಯುಕ್ತರಾಗಿ ಜೂ.17ರಂದು ನಿಯುಕ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ರನ್ನು ಕೇವಲ 45 ದಿನಗಳಲ್ಲಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ, ಅಲೋಕ್ ಕುಮಾರ್ ಅವರನ್ನು ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ
Next Story