Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸತ್ತಿರುವ ಸಿದ್ಧಾರ್ಥರನ್ನು ಮತ್ತೆ ಮತ್ತೆ...

ಸತ್ತಿರುವ ಸಿದ್ಧಾರ್ಥರನ್ನು ಮತ್ತೆ ಮತ್ತೆ ಚುಚ್ಚಿ ಚುಚ್ಚಿ ಸಾಯಿಸಲಾಗುತ್ತಿದೆ: ಡಿ.ಕೆ.ಶಿವಕುಮಾರ್

"ವ್ಯವಸ್ಥೆಯ ಹತಾಶೆ ಸಿದ್ಧಾರ್ಥರನ್ನು ಸಾವಿನ ಕೂಪಕ್ಕೆ ದೂಡಿದೆ"

ವಾರ್ತಾಭಾರತಿವಾರ್ತಾಭಾರತಿ2 Aug 2019 6:31 PM IST
share
ಸತ್ತಿರುವ ಸಿದ್ಧಾರ್ಥರನ್ನು ಮತ್ತೆ ಮತ್ತೆ ಚುಚ್ಚಿ ಚುಚ್ಚಿ ಸಾಯಿಸಲಾಗುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.2: ಅಸಹಜ ಸಾವನ್ನಪ್ಪಿರುವ ಉದ್ಯಮಿ ಸಿದ್ಧಾರ್ಥ ಹಾಗೂ ತಮ್ಮ ನಡುವಣ ಸಂಬಂಧದ ಬಗ್ಗೆ ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಯಬಿಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಈಗಾಗಲೇ ಸತ್ತಿರುವ ಸಿದ್ಧಾರ್ಥರನ್ನು ಸುಳ್ಳು ಸುದ್ದಿಗಳನ್ನು ಸೃಷ್ಟಿ ಮಾಡುವ ಮೂಲಕ ಮತ್ತೆ ಮತ್ತೆ ಚುಚ್ಚಿ, ಚುಚ್ಚಿ ಸಾಯಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ನನ್ನ ಮತ್ತು ಸಿದ್ಧಾರ್ಥ ನಡುವೆ ಸುಮಾರು 30 ವರ್ಷಗಳಿಂದಲೂ ಸ್ನೇಹವಿದೆ. ಸ್ನೇಹ ಮೀರಿದ ಬಾಂಧವ್ಯ ಇದೆ. ಈ ಬಾಂಧವ್ಯದ ಆಳ-ಅಗಲ ತಮ್ಮಿಬ್ಬರಿಗೆ ಮಾತ್ರ ಗೊತ್ತು. ಅದು ಅವರು ಅಮರರಾದ ನಂತರವೂ ಚಿರವಾಗಿರುತ್ತದೆ. ಇದನ್ನು ಅರಿಯದ ಕೆಲವರು ಇಲ್ಲ-ಸಲ್ಲದ ಸುದ್ದಿಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಬದುಕಿದ್ದಾಗ ಸಿದ್ಧಾರ್ಥ ಹಾಗೂ ಅವರ ಉದ್ಯಮ ವ್ಯವಹಾರ-ವಹಿವಾಟಿನ ಬಗ್ಗೆ ಏನಾದರೂ ಹೇಳಿದ್ದರೆ ಅವರಿಗೆ ಸ್ಪಷ್ಟನೆ ನೀಡಲು ಅವಕಾಶವಿತ್ತು. ಆದರೆ, ಅವರು ಗತಿಸಿದ ನಂತರ ಮನ ಬಂದಂತೆ ಸುದ್ದಿಗಳನ್ನು ಸೃಜಿಸಿದರೆ, ವ್ಯಾಖ್ಯಾನ-ವಿಶ್ಲೇಷಣೆ ಮಾಡಿದರೆ ಅದಕ್ಕೆ ಉತ್ತರ ನೀಡುವವರು ಯಾರು? ಸ್ಪಷ್ಟನೆ ನೀಡುವವರು ಯಾರು? ಉತ್ತರ ನೀಡಲು ಅವಕಾಶ ಇಲ್ಲದವರ ಬಗ್ಗೆ ಸಲ್ಲದ ಸುದ್ದಿಗಳನ್ನು ಹಬ್ಬಿಸುವುದು ಥರವಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನೊಬ್ಬ ರಾಜಕಾರಣಿ ಮತ್ತು ಉದ್ಯಮಿ. ಅದೇ ರೀತಿ ಸಿದ್ಧಾರ್ಥ ಅವರೊಬ್ಬ ಉದ್ಯಮಿ. ರಾಜಕಾರಣ ಮತ್ತು ವ್ಯವಹಾರ ಮಾಡಲು ನನಗೆ ಹಕ್ಕುಗಳಿವೆ. ಅದೇ ರೀತಿ ಸಿದ್ಧಾರ್ಥ ಅವರಿಗೂ ಉದ್ಯಮ ನಡೆಸಲು ಹಕ್ಕುಗಳಿವೆ. ಅವರ ಹಕ್ಕೇ ಬೇರೆ. ನನ್ನ ಹಕ್ಕೇ ಬೇರೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ತಮ್ಮಿಬ್ಬರ ನಡುವೆ ಸಣ್ಣ-ಪುಟ್ಟ ವ್ಯವಹಾರ ಇದ್ದದ್ದು ನಿಜ. ಆದರೆ ಆ ವ್ಯವಹಾರವನ್ನು ಸಿದ್ಧಾರ್ಥ ಅವರ ಸಾವಿನ ಜತೆ ತಳಕು ಹಾಕುವುದು ಸರಿಯಲ್ಲ. ಸಿದ್ಧಾರ್ಥ ಸಾವಿನ ಹಿನ್ನೆಲೆಯಲ್ಲಿ ಉದ್ಯಮಿಗಳಾದ ಮೋಹನ್ ದಾಸ್ ಪೈ ಮತ್ತು ಕಿರಣ್ ಮಜೂಂದಾರ್ ಷಾ ಅವರು ನೀಡಿರುವ ಹೇಳಿಕೆಗಳ ಬಗ್ಗೆ ಸಿದ್ಧಾರ್ಥ ಅವರನ್ನು ಮತ್ತೊಮ್ಮೆ ಕೊಲ್ಲುತ್ತಿರುವವರು ಗಮನ ಹರಿಸಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ವ್ಯವಸ್ಥೆಯ ಹತಾಶೆ ಸಿದ್ಧಾರ್ಥ ಅವರನ್ನು ಸಾವಿನ ಕೂಪಕ್ಕೆ ದೂಡಿದೆ. ಇದರಿಂದ ಅವರ ಕುಟುಂಬ ವರ್ಗವದವರು, ಬಂಧುಗಳು, ಅಭಿಮಾನಿಗಳು, ಅವರ ಉದ್ಯಮ ಅವಲಂಬಿಸಿರುವ ನೌಕರ ವರ್ಗಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಬಹಳ ದುಃಖವಾಗಿದೆ ಎಂದು ಅವರು ಹೇಳಿದ್ದಾರೆ. ಕೆಫೆ ಕಾಫಿ ಡೇ ಮೂಲಕ ಕರ್ನಾಟಕದ ಹೆಸರನ್ನು ವಿಶ್ವ ಭೂಪಟದಲ್ಲಿ ಹಚ್ಚೊತ್ತುವಂತೆ ಮಾಡಿದ ಸಿದ್ಧಾರ್ಥ ಈ ದೇಶದ ಹೆಮ್ಮೆ, ಈ ನಾಡಿನ ಆಸ್ತಿ. ಅವರ ಬಗ್ಗೆ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಅವರ ಸತ್ತ ನಂತರ ಹಬ್ಬಿಸುವುದು ಅವರ ಆತ್ಮಕ್ಕೆ ನೋವು ಹಾಗೂ ಆತ್ಮಗೌರವಕ್ಕೆ ಚ್ಯುತಿ ತರುತ್ತದೆ. ಆ ಕೆಲಸವನ್ನು ಯಾರೂ ಮಾಡುವುದು ಬೇಡ ಎಂದು ಶಿವಕುಮಾರ್ ಮನವಿ ಮಾಡಿದ್ದಾರೆ.

ಸಿದ್ಧಾರ್ಥ ಯಾಕಾಗಿ ಸತ್ತರು, ಅವರನ್ನು ಸಾವಿನ ಕೂಪಕ್ಕೆ ತಳ್ಳಿದವರು ಯಾರು ಎಂಬುದರ ಬಗ್ಗೆ ಮೋಹನ್ ದಾಸ್ ಪೈ, ಕಿರಣ್ ಮಜೂಂದಾರ್ ಷಾ ಬೆಳಕು ಚೆಲ್ಲಿದ್ದಾರೆ. ಆದರೂ ಸಿದ್ಧಾರ್ಥ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಂಚು ವ್ಯವಸ್ಥಿತವಾಗಿ ನಡೆಯುತ್ತಿದೆ. ಆದರೆ ಯಾರು ಯಾರಿಗೆ ಬೇಕಾದರೂ ಸುಳ್ಳು ಹೇಳಬಹುದು, ಮೋಸ ಮಾಡಬಹುದು. ಆದರೆ ಆ ದೇವರಿಗೆ ಸುಳ್ಳು ಹೇಳಲು ಸಾಧ್ಯವಿಲ್ಲ. ಆ ಭಗವಂತನೇ ಎಲ್ಲವನ್ನೂ ನೋಡಿಕೊಳ್ಳುತ್ತಾನೆ ಎಂದು ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X