Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಜ್ಜರಕಾಡು ಪಾರ್ಕ್‌ನಲ್ಲಿ ಸಿಸಿಟಿವಿ...

ಅಜ್ಜರಕಾಡು ಪಾರ್ಕ್‌ನಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ: ಎಸ್ಪಿ ನಿಶಾ ಜೇಮ್ಸ್

ಅಪರಾಧ ಚಟುವಟಿಕೆ ಕುರಿತು ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು

ವಾರ್ತಾಭಾರತಿವಾರ್ತಾಭಾರತಿ2 Aug 2019 8:14 PM IST
share
ಅಜ್ಜರಕಾಡು ಪಾರ್ಕ್‌ನಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ: ಎಸ್ಪಿ ನಿಶಾ ಜೇಮ್ಸ್

ಉಡುಪಿ, ಆ.2: ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಅಪರಾಧ ಚಟು ವಟಿಕೆ, ಪ್ರೇಮಿಗಳು ಹಾಗೂ ಕುಡುಕರ ಹಾವಳಿ ಸೇರಿದಂತೆ ಹಲವು ಸಮಸ್ಯೆ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ಬೆಳಕಿನ ವ್ಯವಸ್ಥೆ ಮಾಡುವಂತೆ ಉಡುಪಿ ನಗರಸಭೆ ಜೊತೆ ಪತ್ರ ವ್ಯವಹಾರ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿಂದು ನಡೆದ ನೇರ ಫೋನ್ ಇನ್ ಕಾರ್ಯ ಕ್ರಮದಲ್ಲಿ ಅವರು ಸಾರ್ವಜನಿಕರ ಕರೆಗೆ ಸ್ಪಂದಿಸಿ ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದರು.

ಅಜ್ಜರಕಾಡು ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷವಾಗಿ ರಾತ್ರಿ ಹಾಗೂ ಹಗಲು ಗಸ್ತು ತಿರು ಗುವ ಕಾರ್ಯವನ್ನು ಮಾಡಲಾಗುತ್ತದೆ. ಅಲ್ಲದೆ ಅಲ್ಲೇ ಒಂದು ಪಾಯಿಂಟ್ ಪುಸ್ತಕವನ್ನು ಕೂಡ ಇರಿಸಲಾಗುವುದು. ಪಾರ್ಕ್‌ನಲ್ಲಿನ ಸೂಕ್ಷ್ಮ ಸ್ಥಳಗಳನ್ನು ಗುರುತಿಸಿ ಸಿಸಿ ಕ್ಯಾಮೆರಾ ಹಾಗೂ ದೀಪದ ವ್ಯವಸ್ಥೆ ಮಾಡಲು ನಗರಸಭೆಗೆ ಸೂಚಿಸಲಾಗುವುದು ಎಂದರು.

ದಿನಕ್ಕೆ 500 ಜನ ಸೇರುವ ಅಥವಾ ಒಮ್ಮೆಗೆ 100 ಮಂದಿ ಕೂಡುವ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದೆ. ಅದನ್ನು ಸ್ಥಳೀಯಾಡಳಿತ ಅಥವಾ ವ್ಯವಹಾರ ಕೇಂದ್ರಗಳು ಮಾಡುವುದು ಜವಾಬ್ದಾರಿಯಾಗಿದೆ. ಅದೇ ರೀತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಗುರುತಿಸಲಾಗಿರುವ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರಕ್ಕೆ ತಿಳಿಸಲಾಗಿದೆ. ಇದರಿಂದ ಅಪಘಾತ ನಡೆಸಿ ಪರಾರಿಯಾಗುವ ವಾಹನ, ಅಪರಾಧ ಪ್ರಕರಣಗಳ ಆರೋಪಿಗಳ ಪತ್ತೆ ಹಚ್ಚಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ರಿಕ್ಷಾಗಳ ವಿರುದ್ದ ಕಾರ್ಯಾಚರಣೆ: ಆಟೋ ಚಾಲಕರು ನಿಗದಿಪಡಿಸಿ ರುವುದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ದೂರಿಗೆ ಸ್ಪಂದಿಸಿದ ಎಸ್ಪಿ, ಮೀಟರ್ ಆಳವಡಿಸದ ಹಾಗೂ ನಿಗದಿ ಪಡಿಸಿರುವುದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುವ ರಿಕ್ಷಾಗಳ ವಿರುದ್ಧ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ಯನ್ನು ನಡೆಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ರಿಕ್ಷಾ ಚಾಲಕ ಮತ್ತು ಮಾಲಕರೊಂದಿಗೆ ಸಭೆ ನಡೆಸಲಾಗಿದ್ದು, ಇದರಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡದಂತೆ ಸೂಚಿಸ ಲಾಗಿದೆ. ಆದರೂ ದರ ವಸೂಲಿ ಮಾಡುವ ಬಗ್ಗೆ ದೂರುಗಳು ಬರುತ್ತಿವೆ. ಇದರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ತೆಗೆದುಕೊಳ್ಳಲಾಗು ವುದು ಎಂದು ಅವರು ಹೇಳಿದರು.

ಮಂಗಳಮುಖಿಯರು ಬಲಾತ್ಕಾರವಾಗಿ ಹಣ ವಸೂಲಿ ಮಾಡುವ ಕುರಿತ ದೂರಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಜಿಲ್ಲಾಧಿಕಾರಿಗಳು ಮಂಗಳ ಮುಖಿಯರ ಸಭೆ ಕರೆದು ಚರ್ಚಿಸಿದ್ದು, ಅವರಿಗೆ ಗುರುತಿನ ಚೀಟಿ ನೀಡುವ ಕುರಿತು ನಿರ್ಧರಿಸಲಾಗಿದೆ. ಅಲ್ಲದೆ ಅವರಿಗೆ ಉತ್ತಮ ಬದುಕು ನಡೆಸಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಪ್ರೋತ್ಸಾಹ ನೀಡಲು ಭರವಸೆ ನೀಡಲಾಗಿದೆ ಎಂದರು.

ಮಹಿಳೆಯರಿಗೆ ಕೀಟಲೆ: ಕಟಪಾಡಿ ಶಂಕರಪುರ ಬಳಿ ವಲಸೆ ಕಾರ್ಮಿಕರು ದ್ವಿಚಕ್ರ ವಾಹನಗಳಲ್ಲಿ ಮೂರು ಜನ ಕುಳಿತುಕೊಂಡು ಅಪಾಯಕಾರಿಯಾಗಿ ಪ್ರಯಾಣಿಸುವುದು ಮತ್ತು ಸರಕಾರಿ ಗುಡ್ಡೆಯ ಸೆಲೂನ್ ಬಳಿ ಸಂಜೆ ವೇಳೆ ಯುವಕರು ಬೈಕ್ ಮೇಲೆ ಕುಳಿತುಕೊಂಡು ಮಹಿಳೆಯರಿಗೆ ಕೀಟಲೆ ನೀಡು ತ್ತಿರುವ ಬಗ್ಗೆ ಎಸ್ಪಿಗೆ ಕರೆ ಮಾಡಿ ದೂರು ನೀಡಲಾಯಿತು.

ವಾಹನ ಖರೀದಿ ಬಗ್ಗೆ ತೆಗೆದುಕೊಂಡ ಸಾಲ ಮರುಪಾವತಿಸಿದ್ದರೂ ಸಾಲ ತೀರಿಸಿದ ಬಗ್ಗೆ ಪ್ರಮಾಣ ಪತ್ರ ನೀಡಲು ಸತಾಯಿಸುತ್ತಿರುವುದು, ಕೋಟ ವಿವೇಕ ಜೂನಿಯರ್ ಕಾಲೇಜು ಬಳಿ ಸಂಚಾರ ನಿಯಂತ್ರಣಕ್ಕೆ ಪೊಲೀಸ್ ಸಿಬ್ಬಂದಿ ನೇಮಕ, ನಗರದ ಹಂಪ್ಸ್ಗಳಿಗೆ ಬಣ್ಣ, ಪಡುಬಿದ್ರಿ ಮಟ್ಟು ರಸ್ತೆಯ ಇಕ್ಕೆಲಗಳಲ್ಲಿ ರಸ್ತೆಯನ್ನು ಕಬಳಿಸಿ ಕಟ್ಟಡ ನಿರ್ಮಾಣ, ನಗರದಲ್ಲಿ ಎಲ್ಲೆಂದರಲ್ಲಿ ಬಸ್ ನಿಲುಗಡೆ, ಬ್ರಹ್ಮಾವರ ಕೊಳಲಗಿರಿಯ ಹೋಟೆಲ್ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಡಿವೈಎಸ್ಪಿ ಜೈಶಂಕರ್, ಕುಂದಾಪುರ ಡಿವೈಎಸ್ಪಿ ದಿನೇಶ್ ಕುಮಾರ್, ಸೆನ್ ಪೊಲೀಸ್ ನಿರೀಕ್ಷಕ ಸೀತಾರಾಮ್, ನಗರ ಸಂಚಾರ ಠಾಣೆಯ ಉಪನಿರೀಕ್ಷಕ ನಾರಾಯಣ ಗಾಣಿಗ ಹಾಜರಿದ್ದರು.

ಜನಸ್ನೇಹಿಗಾಗಿ ಪೊಲೀಸರಿಗೆ ತರಬೇತಿ

ಠಾಣೆಗಳನ್ನು ಜನಸ್ನೇಹಿ ಪೊಲೀಸ್ ಠಾಣೆಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲೆಯ 120 ಮಂದಿ ಸ್ವಾಗತಕಾರ ಹಾಗೂ ಬೀಟ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಎಸ್ಪಿ ನಿಶಾ ಜೇಮ್ಸ್ ತಿಳಿಸಿದರು.

ನಿರಂತರ ಮೂರು ವಾರಗಳ ಕಾಲ ಪ್ರತಿ ಶನಿವಾರ ತರಬೇತಿಯನ್ನು ನೀಡ ಲಾಗಿದೆ. ಇದರಲ್ಲಿ ಪ್ರತಿ ಠಾಣೆಯಿಂದ 3-4 ಸಿಬ್ಬಂದಿಗಳು ಭಾಗವಹಿಸಿದ್ದರು. ಠಾಣೆಗೆ ಆಗಮಿಸುವ ಸಾರ್ವಜನಿಕರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬು ದರ ಕುರಿತು ಇವರಿಗೆ ತರಬೇತಿ ನೀಡಲಾಗಿದೆ ಎಂದರು.

ಮೂರು ವಾರಗಳ ಪ್ರಕರಣಗಳು

ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ವಾರಗಳಲ್ಲಿ ಮಟ್ಕಾದ 7 ಪ್ರಕರಣ ಗಳಲ್ಲಿ ಎಂಟು ಮಂದಿ, ಜುಗಾರಿ 4 ಪ್ರಕರಣಗಳಲ್ಲಿ 27, ಗಾಂಜಾ 33 ಪ್ರಕರಣಗಳಲ್ಲಿ 33, ಅಕ್ರಮ ಮದ್ಯ ಮಾರಾಟ ಒಂದು ಪ್ರಕರಣಲ್ಲಿ ಓರ್ವನನ್ನು ಬಂಧಿಸಲಾಗಿದೆ.

ಕೋಟ್ಪಾ- 316, ಕುಡಿದು ವಾಹನ ಚಾಲನೆ- 45, ಕರ್ಕಶ ಹಾರ್ನ್- 517, ಚಾಲನೆಯಲ್ಲಿ ಮೊಬೈಲ್ ಬಳಕೆ-20, ಹೆಲ್ಮಟ್ ರಹಿತ ಚಾಲನೆ- 2445, ಅತಿವೇಗದ ಚಾಲನೆ- 40 ಮತ್ತು ಇತರ ಮೋಟಾರ್ ಕಾಯಿದೆ ಉಲ್ಲಂಘನೆ 7188 ಪ್ರಕರಣಗಳು ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X