ಅ.20 ರಂದು ಆಕಾಶ್ ನ್ಯಾಷನಲ್ ಸ್ಕಾಲರ್‌ಶಿಪ್ ಪರೀಕ್ಷೆ
ಬೆಂಗಳೂರು, ಆ.2: ಆಕಾಶ್ ಎಜುಕೇಶನಲ್ ಸರ್ವೀಸಸ್ ಲಿ. ತನ್ನ ವಾರ್ಷಿಕ ಸ್ಕಾಲರ್‌ಶಿಪ್ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದು, ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಪರೀಕ್ಷೆಯು 2019ರ ಅಕ್ಟೋಬರ್ 20ರಂದು ದೇಶದ 24ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ.
ರಾಷ್ಟ್ರೀಯ ಮಟ್ಟದ ಖಾಸಗಿ ಕ್ಷೇತ್ರದ ಪರೀಕ್ಷೆಗಳಲ್ಲಿ ಒಂದಾಗಿರುವ ಎಎನ್‌ಟಿಎಚ್‌ಇ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೇ.100ರಷ್ಟು ವಿದ್ಯಾರ್ಥಿ ವೇತನವನ್ನು ಪಡೆಯಲು ನೆರವಾಗುತ್ತದೆ ಮತ್ತು ವೈದ್ಯರಾಗಬೇಕೆಂಬ ಅಥವಾ ಐಐಟಿಗಳಾಗಬೇಕೆಂಬ ಆಸೆ ಹೊಂದಿರುವ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಮೊದಲ ಮೆಟ್ಟಿಲಾಗಲಿದೆ. 8 ಮತ್ತು 10ನೆ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಹಾಜರಾಗಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





