Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಲ ವಿಕಾಸ ಯೋಜನೆಯಲ್ಲಿ ಅವ್ಯವಹಾರ ಆರೋಪ:...

ಬಾಲ ವಿಕಾಸ ಯೋಜನೆಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Aug 2019 10:13 PM IST
share

ಬೆಂಗಳೂರು, ಆ.2: ಐದು ವರ್ಷದೊಳಗಿನ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಒದಗಿಸುವ ಸಮಗ್ರ ಬಾಲ ವಿಕಾಸ ಯೋಜನೆಯಲ್ಲಿ ನಡೆದಿರುವ ಕೋಟ್ಯಂತರ ರೂ.ಗಳ ಅವ್ಯವಹಾರ ಕುರಿತಂತೆ ಸರಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಮಂಡಳಿ ಅಧ್ಯಕ್ಷ ಜಿ.ಆರ್.ಶಿವಶಂಕರ್, 1970ರಲ್ಲಿ ಪ್ರಾರಂಭಗೊಂಡಿರುವ ಸಮಗ್ರ ಬಾಲ ವಿಕಾಸ ಯೋಜನೆಯಲ್ಲಿ 65 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿದಿನ 50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಪೂರಕ ಪೌಷ್ಠಿಕ ಆಹಾರ ಪಡೆಯುತ್ತಿದ್ದಾರೆ. ಸುಪ್ರೀಂ ಕೋರ್ಟ್ ಈ ಯೋಜನೆಯಲ್ಲಿ ಯಾವುದೇ ಕಾರಣಕ್ಕೂ ಖಾಸಗಿ ಗುತ್ತಿಗೆದಾರರನ್ನು ಬಳಸಬಾರದು ಹಾಗೂ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿಕೇಂದ್ರೀಕರಣದ ಮೂಲಕ ಮಹಿಳಾ ಸಂಘಟನೆಗಳಿಂದ ಪಡೆಯಲು ತೀರ್ಪು ನೀಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ವಾರ್ಷಿಕ ಸಾವಿರ ಕೋಟಿ ಅನುದಾನವನ್ನು ಈ ಯೋಜನೆಯಲ್ಲಿ ವ್ಯಯಿಸಲಾಗುತ್ತಿದೆ. ಆದರೆ, ಸುಪ್ರೀಂ ಕೋರ್ಟಿನ ತೀರ್ಪು ಉಲ್ಲಂಘಿಸಿ ಐಸಿಡಿಎಸ್ ಯೋಜನೆಯ ಆಹಾರ ಸರಬರಾಜು ಯೋಜನೆಯನ್ನು ಜನತಾ ಬಜಾರ್‌ಗೆ ನೀಡಲು ಪ್ರಯತ್ನಿಸಲಾಗುತ್ತಿದೆ. ಪುಟ್ಟ ಮಕ್ಕಳಿಗೆ ಕಳಪೆ ಹಾಗೂ ಗುಣಮಟ್ಟ ರಹಿತ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಇದರ ಬಗ್ಗೆ ಅಧಿಕಾರಿಗಳಲ್ಲಿ ಪ್ರಶ್ನಿಸಿದರೆ ನಿರ್ಲಕ್ಷದ ಉತ್ತರ ದೊರಕುತ್ತದೆ ಎಂದು ದೂರಿದರು.

ಕಳೆದ ಕೆಲ ದಿನಗಳಿಂದ ಮಾಧ್ಯಮಗಳಲ್ಲಿ ಗುತ್ತಿಗೆದಾರ ಶಿವಕುಮಾರ್ ಎಂಬಾತ ಜನತಾ ಬಜಾರ್‌ಗೆ ಆಹಾರ ಸಾಮಗ್ರಿಗಳ ಸರಬರಾಜು ಗುತ್ತಿಗೆಯನ್ನು ಹಸ್ತಾಂತರಗೊಳಿಸಲು ಪ್ರಯತ್ನಿಸಿ ಕೋಟ್ಯಂತರ ರೂ. ಲಂಚವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳು, ಮಾಜಿ ಸಚಿವರಾದ ಉಮಾಶ್ರೀ ಹಾಗೂ ಜಯಮಾಲ ಅವರಿಗೆ ನೀಡಿರುವ ಬಗ್ಗೆ ಹೇಳಿದ್ದಾನೆ. ಸದರಿ ಯೋಜನೆಯಲ್ಲಿ ಖಾಸಗಿ ಗುತ್ತಿಗೆದಾರರು ಸರಕಾರದ ಯೋಜನೆಯ ಅನುಷ್ಠಾನಕ್ಕಾಗಿ ಕೋಟ್ಯಂತರ ರೂ. ಲಂಚವನ್ನು ಏಕೆ ನೀಡಿದ್ದಾರೆ ಎಂಬುದರ ಬಗ್ಗೆ ಸರಕಾರ ಕೂಡಲೇ ಎಫ್‌ಐಆರ್ ದಾಖಲಿಸಿ ಉನ್ನತಮಟ್ಟದಲ್ಲಿ ತನಿಖೆ ನಡೆಸಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X