ಬಂಟ್ವಾಳ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಬಂಟ್ವಾಳ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮಂಜು ಯಾನೆ ಮಂಜುನಾಥ (55) ಬಂಧಿತ ಆರೋಪಿ.
ಖಚಿತ ಮಾಹಿತಿ ಮೇರೆಗೆ ಈತನನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಾಯಿಬರಕಟ್ಟೆ ಎಂಬಲ್ಲಿ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ.
Next Story





