ರೈಲ್ವೆ ಹಳಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ

ಮೈಸೂರು,ಆ.2: ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಇಂದು ಮುಂಜಾನೆ ರೈಲ್ವೆ ಹಳಿಯ ಮೇಲೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಯನಗರ ರೈಲ್ವೆ ಗೇಟ್ ಬಳಿ ನಡೆದಿದೆ.
ಮೃತನನ್ನು ಅಶೋಕಪುರಂ ನಿವಾಸಿ ಅರುಣ(22) ಎಂದು ಗುರುತಿಸಲಾಗಿದ್ದು, ಶುಕ್ರವಾರ ಮುಂಜಾನೆ ಚಾಮರಾಜನಗರಕ್ಕೆ ಹೋಗುವ ರೈಲಿಗೆ ತಲೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಕೆ.ಆರ್.ಆಸ್ಪತ್ರೆಗೆ ಮೃತದೇಹವನ್ನು ಮರೋಣತ್ತರ ಪರೀಕ್ಷೆಗೆ ಕಳುಹಿಸಿದರು. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





