Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಜಲ...

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಜಲ ದಿಗ್ಬಂಧನ ಭೀತಿಯಲ್ಲಿ ರಾಜ್ಯದ ನೂರಾರು ಗ್ರಾಮಸ್ಥರು

► ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ ►ನಿಯಂತ್ರಣ ಕೊಠಡಿ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ3 Aug 2019 8:02 PM IST
share
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಜಲ ದಿಗ್ಬಂಧನ ಭೀತಿಯಲ್ಲಿ ರಾಜ್ಯದ ನೂರಾರು ಗ್ರಾಮಸ್ಥರು

ಬೆಂಗಳೂರು, ಆ. 3: ನೆರೆಯ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೋಯ್ನಿ ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಗೆ ಬಿಡುತ್ತಿರುವ ಪರಿಣಾಮ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಕೃಷ್ಣಾ ನದಿ ಪಾತ್ರದ ನೂರಾರು ಗ್ರಾಮಗಳ ಜನತೆ ಜಲ ದಿಗ್ಬಂಧನ ಭೀತಿಯಲ್ಲಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ, ಅಥಣಿ ತಾಲೂಕಿನ ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಪಂಚಗಂಗಾ ನದಿ ತೀರದ 70ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹದಿಂದ ಪೀಡಿತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ತೀವ್ರ ಹೆಚ್ಚಳವಾಗಿದ್ದು, ಭಾರಿಪ್ರವಾಹ ಸಾಧ್ಯತೆ ಇದೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಂದಲೂ ಅಧಿಕ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದ್ದು, ರಾಯಚೂರು, ಯಾದಗಿರಿ ಜಿಲ್ಲೆಯ ಜಿಲ್ಲಾಡಳಿತ ಈಗಾಗಲೇ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ 3 ಲಕ್ಷ ಕ್ಯೂಸೆಕ್ಸ್, ನಂತರ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಅಷ್ಟೇ ಪ್ರಮಾಣದ ನೀರು ಹೊರಗೆಬಿಡುವ ಸಾಧ್ಯತೆ ಇದ್ದು, ರಾಯಚೂರು ಜಿಲ್ಲೆಯ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ನೀಡಲಾಗಿದೆ.

ಸ್ಥಳಾಂತರಿಸಲು ಸೂಚನೆ: ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಮತ್ತು ನೆರೆಯ ಮಹಾರಾಷ್ಟ್ರದಿಂದ ರಾಜ್ಯದ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನದಿ ಪಾತ್ರದಲ್ಲಿ ಹಾಗೂ ಅಪಾಯ ಅಂಚಿನಲ್ಲಿರುವ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

ಜಿಲ್ಲೆಯ ಎಲ್ಲ ತಾಲೂಕು, ಉಪವಿಭಾಗ ಮಟ್ಟದಲ್ಲಿ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲು ನಿಯಂತ್ರಣ ಕೊಠಡಿ ತೆರೆದು ಅಗತ್ಯ ಸಿಬ್ಬಂದಿ ನಿಯೋಜಿಸತಕ್ಕದ್ದು, ನದಿ ಹತ್ತಿರ ಬರುವಂತಹ ಗ್ರಾಮಗಳ ಜನರಿಗೆ ಬೇರೆ ಕಡೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಪೋಲಿಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿಗಳು ರಾಜ್ಯ ವಿಪತ್ತು ಸ್ಪಂದನಾ ಪಡೆ, ಜಿಲ್ಲಾ ಗೃಹರಕ್ಷಕ ದಳದ ಬೆಳಗಾವಿ, ಪಂಚಾಯತ್ ರಾಜ್ಯ ಎಂಜಿನಿಯರಿಂಗ್ ಹಾಗೂ ಲೋಕೋಪಯೋಗಿ ಇಲಾಖೆಯ ಅಭಿಯಂತರರು ಪ್ರವಾಹದ ಸಂದರ್ಭದಲ್ಲಿ ಜನರ ರಕ್ಷಣೆಗೆ ಬೇಕಾಗುವ ಅಗತ್ಯ ಬೋಟ್‌ಗಳು ಸೇರಿ ಇನ್ನಿತರ ರಕ್ಷಣಾ ಸಾಮಗ್ರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಯಾವುದೇ ಸಮಯದಲ್ಲಿ ಉಪಯೋಗಿಸುವ ಸ್ಥಿತಿಯಲ್ಲಿ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಹೆಸ್ಕಾಂ ಇಲಾಖೆಯವರು ನದಿ ಪಕ್ಕದಲ್ಲಿ ಬರುವ ವಿದ್ಯುತ್ ಕಂಬಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಅಥವಾ ಸುರಕ್ಷತೆ ದೃಷ್ಟಿಯಿಂದ ಬೇಕಾಗುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅದೇ ರೀತಿಯಾಗಿ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಗತ್ಯವಾದ ನುರಿತ ವೈದ್ಯರು, ಸಿಬ್ಬಂದಿ ಹಾಗೂ ಔಷಧಿಗಳೊಂದಿಗೆ ಪ್ರವಾಹ ಪೀಡಿತ ಸ್ಥಳಗಳಲ್ಲಿ ಸನ್ನದ್ಧರಾಗಿರಬೇಕು. ಸಂಬಂಧಿಸಿದ ಉಪವಿಭಾಗ ಅಧಿಕಾರಿಗಳು ತಮ್ಮ ಉಪವಿಭಾಗ ವ್ಯಾಪ್ತಿಯಲ್ಲಿ, ಅತೀವೃಷ್ಟಿ, ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯವಾದ ತಿಳುವಳಿಕೆ ನೀಡಬೇಕು. ಯಾವುದೇ ಇಲಾಖೆಯು ಜಿಲ್ಲಾ, ಉಪವಿಭಾಗ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗದೇ ಜನ-ಜಾನುವಾರಗಳಿಗೆ ಜೀವಹಾನಿ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಸಂಭವಿಸದಂತೆ ನೋಡಿಕೊಳ್ಳಬೇಕು. ಅಲ್ಲದೇ ಯಾವುದೇ ಸ್ಥಳಗಳಲ್ಲಿ ದುರ್ಘಟನೆ ಸಂಭವಿಸಿದ ತಕ್ಷಣ ಸಂಬಂಧಿಸಿದ ತಹಶೀಲ್ದಾರರಿಗೆ ತಿಳಿಸಬೇಕು.

ಒಂದು ವೇಳೆ ಅಧಿಕಾರಿಗಳು ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸಿದಲ್ಲಿ ಅಂತಹವರ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಮತ್ತು ಮಹಾರಾಷ್ಟ್ರದ ಜಲಾಶಯಗಳಿಂದ ದಿಢೀರ್ ನೀರು ಬಿಟ್ಟರೆ ಕೃಷ್ಣಾ ಸೇರಿದಂತೆ ವಿವಿಧ ನದಿ ಪಾತ್ರದ ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳು ಪ್ರವಾಹದಿಂದ ತೀವ್ರವಾಗಿ ಬಾಧಿತಗೊಳ್ಳಲಿವೆ.

ಅದೇ ರೀತಿ 39 ಗ್ರಾಮಗಳು ಪ್ರವಾಹದಿಂದ ಭಾಗಶಃ ಬಾಧಿತಗೊಳ್ಳುವ ಸಾಧ್ಯತೆ ಇದೆ. ಚಿಕ್ಕೋಡಿ, ರಾಯಬಾಗ, ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳು ಪ್ರವಾಹದಿಂದ ತೀವ್ರವಾಗಿ ಬಾಧಿತಗೊಳ್ಳಲಿವೆ. ತುರ್ತು ಸಂದರ್ಭದಲ್ಲಿ ನದಿ ತೀರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು, ಪರಿಹಾರ(ಗಂಜಿ) ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಗುರುತಿಸಲಾಗಿದೆ.

ನದಿ ತೀರದ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮವಾಗಿ ಸಾಧ್ಯವಾದಷ್ಟು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಮುಳುಗಡೆಗೊಂಡಿರುವ ಸೇತುವೆಗಳನ್ನು ದಾಟುವ ಸಾಹಸಕ್ಕೆ ಮುಂದಾಗಬಾರದು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X