Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿ ಪೊಲೀಸ್ ಕೆಡೆಟ್‌ನಿಂದ...

ವಿದ್ಯಾರ್ಥಿ ಪೊಲೀಸ್ ಕೆಡೆಟ್‌ನಿಂದ ಮಕ್ಕಳಲ್ಲಿ ಕಾನೂನು ಜಾಗೃತಿ: ಎಎಸ್ಪಿ ಕುಮಾರಚಂದ್ರ

ವಾರ್ತಾಭಾರತಿವಾರ್ತಾಭಾರತಿ3 Aug 2019 8:26 PM IST
share
ವಿದ್ಯಾರ್ಥಿ ಪೊಲೀಸ್ ಕೆಡೆಟ್‌ನಿಂದ ಮಕ್ಕಳಲ್ಲಿ ಕಾನೂನು ಜಾಗೃತಿ: ಎಎಸ್ಪಿ ಕುಮಾರಚಂದ್ರ

ಮಣಿಪಾಲ, ಆ.3: ಪ್ರೌಢ ಶಾಲಾ ಮಕ್ಕಳಲ್ಲಿ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಜಾಗೃತಿಯನ್ನು ಮೂಡಿಸುವುದೇ ವಿದ್ಯಾರ್ಥಿ ಪೊಲೀಸ್ ಕೆಡೆಟ್ (ಎಸ್‌ಪಿಸಿ) ಕಾರ್ಯಕ್ರಮದ ಮೂಲ ಉದ್ಧೇಶ. ಇದರಿಂದ ಎಳವೆಯಲ್ಲೇ ಮಕ್ಕಳಿಗೆ ಪೊಲೀಸ್ ವೃತ್ತಿಗೆ ಸಂಬಂಧಪಟ್ಟ ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಲು ಸಾಧ್ಯ ವಾಗುತ್ತದೆ ಎಂದು ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್‌ಚಂದ್ರ ಹೇಳಿದ್ದಾರೆ.

ಶನಿವಾರ ಮಣಿಪಾಲದ ಪ್ರಗತಿನಗರದಲ್ಲಿರುವ ಕೇಂದ್ರೀಯ ವಿದ್ಯಾಲಯ ದಲ್ಲಿ ಆಯೋಜಿಸಲಾದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ರಾಜ್ಯದಲ್ಲಿ ಒಟ್ಟು 300 ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸ ಲಾಗಿದೆ. ಉಡುಪಿ ವಲಯದಲ್ಲಿ ಉಡುಪಿ ಕೇಂದ್ರೀಯ ವಿದ್ಯಾಲಯ ಹಾಗೂ ಹಿರಿಯಡ್ಕದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಕಾರ್ಯಕ್ರಮ ಇಂದು ಪ್ರಾರಂಭಗೊಂಡಿದೆ ಎಂದರು.

ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವುದು, ಅಪರಾಧ ಗಳನ್ನು ತಡೆಗಟ್ಟುವುದು, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವುದು, ಸಂವಿಧಾನಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಯ ಕರ್ತವ್ಯ. ಮಕ್ಕಳಿಗೆ ಪೊಲೀಸರ ಕರ್ತವ್ಯಗಳ ಕುರಿತು ಅರಿವು ಮೂಡಿಸುವುದು, ಪ್ರಾಕೃತಿಕ ವಿಕೋಪ ಸಂದರ್ದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತರಬೇತಿ, ಪೊಲೀಸ್ ಠಾಣೆಗಳಿಗೆ ಭೇಟಿ, ಅಲ್ಲಿನ ಕಾರ್ಯ ವೈಖರಿಯ ಪರಿಚಯ, ಪರೇಡ್, ಸೇರಿದಂತೆ ವಿವಿಧ ತರಬೇತಿಗಳನ್ನು ಸ್ಟೂಡೆಂಟ್ ಪೊಲೀಸ್ ಕೆಡೆಟ್‌ಗಳಿಗೆ ನೀಡಲಾಗುತ್ತದೆ ಎಂದು ಕುಮಾರಚಂದ್ರ ಹೇಳಿದರು.

ಪ್ರಸ್ತುತ ಭಾರತದ ಒಟ್ಟು ಜನಸಂಖ್ಯೆಯ ಶೇ.65 ಭಾಗ ಯುವಜನತೆ ಯದ್ದಾಗಿದೆ. 2022ರ ಸುಮಾರಿಗೆ ಭಾರತ, ವಿಶ್ವದಲ್ಲೇ ಅತ್ಯಧಿಕ ಸಂಖ್ಯೆಯ ಯುವಜನರನ್ನು ಹೊಂದಿರುವ ದೇಶವೆನಿಸಿಕೊಳ್ಳಲಿದೆ. ಯುವ ಶಕ್ತಿಯ ಸದ್ಭಳಕೆ ಗಾಗಿ ಇಂಥ ಒಂದು ಕಾರ್ಯಕ್ರಮನ್ನು ಆಯೋಜಿಸಲಾಗುತ್ತಿದೆ ಎಂದರು.

ಪ್ರೌಢ ಶಾಲೆಗಳ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಈ ತರಬೇತಿ ನೀಡಲಾಗುತ್ತದೆ. ಮಕ್ಕಳು ಕಾರ್ಯಕ್ರಮವನ್ನು ಸದುಪಯೋಗಪಡಿಸಿ ಕೊಂಡು, ಕಾನೂನು ಬದ್ಧ ಹಾಗೂ ಶಾಂತಿಯುತ ಸಮಾಜ ನಿರ್ಮಾಣ ಮಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಅವರು ನುಡಿದರು.

ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳ ಮಾತನಾಡಿ, ಸಮಸ್ಯೆಗಳನ್ನು ಎದುರಿಸುವುದು ಮತ್ತು ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳನ್ನು ತಯಾರು ಮಾಡುವುದೇ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ಮೂಲ ಉದ್ದೇಶ. ಮಕ್ಕಳನ್ನು ಮೌಲ್ಯಯುತ ವ್ಯಕ್ತಿಯನ್ನಾಗಿಸಿ ಸದೃಢ ಪ್ರಜೆಯನ್ನಾಗಿಸುವ ಧ್ಯೇಯವನ್ನು ಕಾರ್ಯಕ್ರಮ ಹೊಂದಿದೆ. ಮಕ್ಕಳು ಸ್ಕೌಟ್ಸ್, ಗೈಡ್ಸ್, ಸೇವಾದಳ, ಗಿಡ ನೆಡುವ ಕಾರ್ಯದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉಡುಪಿ ಕೇಂದ್ರಿಯ ವಿದ್ಯಾಲಯದ ಪ್ರಿನ್ಸಿಪಾಲ್ ಎಚ್. ನಾರಾಯಣ ರಾವ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಲ್ಲಿ, 8ನೇ ತರಗತಿಯ ಮಕ್ಕಳು ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದಡಿಯಲ್ಲಿ 2 ವರ್ಷಗಳ ಕಾಲ ತರಬೇತಿ ಪಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯ ಮತ್ತು ಹೊರರಾಜ್ಯ ಗಳಲ್ಲಿ ಪ್ರವಾಸಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಮಕ್ಕಳಿಗೆ ತರಬೇತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿಆರ್‌ಸಿ ಉಮಾ ಪಿ. ಉಪಸ್ಥಿತ ರಿದ್ದರು. ವಿದ್ಯಾರ್ಥಿನಿಯರಾದ ರಿತಿಕ ಮತ್ತು ಮೋಹಕ ನಿರೂಪಿಸಿದರು. ಶಿಕ್ಷಕಿ ಆಶಾರಾಣಿ ವಂದಿಸಿದರು.ಕಾರ್ಯಕ್ರಮದ ಅಂಗವಾಗಿ ಶಾಲಾ ವಠಾರದಲ್ಲಿ ಎಎಸ್‌ಪಿ ನೇತೃತ್ವದಲ್ಲಿ ಗಿಡ ನೆಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X