Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಣಿ ಚನ್ನಮ್ಮ ವಿವಿ ಯು.ಜಿ...

ರಾಣಿ ಚನ್ನಮ್ಮ ವಿವಿ ಯು.ಜಿ ಪಠ್ಯಕ್ರಮದಲ್ಲಿ ಸಿಬಿಸಿಎಸ್ ಪದ್ಧತಿ ಅಳವಡಿಕೆ: ಕುಲಪತಿ ಪ್ರೊ.ರಾಮಚಂದ್ರಗೌಡ

ವಾರ್ತಾಭಾರತಿವಾರ್ತಾಭಾರತಿ3 Aug 2019 10:16 PM IST
share
ರಾಣಿ ಚನ್ನಮ್ಮ ವಿವಿ ಯು.ಜಿ ಪಠ್ಯಕ್ರಮದಲ್ಲಿ ಸಿಬಿಸಿಎಸ್ ಪದ್ಧತಿ ಅಳವಡಿಕೆ: ಕುಲಪತಿ ಪ್ರೊ.ರಾಮಚಂದ್ರಗೌಡ

ಬೆಳಗಾವಿ, ಆ.2: ರಾಷ್ಟ್ರೀಯ ಶಿಕ್ಷಣ ನೀತಿ-2019ರ ಅನುಗುಣವಾಗಿ ಯು.ಜಿ ಪಠ್ಯಕ್ರಮದಲ್ಲಿ ಸಿಬಿಸಿಎಸ್ ಪದ್ಧತಿಯನ್ನು 2020-21ನೇ ಸಾಲಿನಿಂದ ಆರಂಭಿಸಲಾಗುವುದು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ ತಿಳಿಸಿದ್ದಾರೆ.

ನಗರದ ವಾರ್ತಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಎಲ್ಲ ಮೂಲಭೂತ ಸೌಕರ್ಯಗಳು ದೊರಕಿದ್ದೇ ಆದರೆ ದೇಶದ ಉತ್ತಮ ವಿಶ್ವವಿದ್ಯಾಲಯಗಳಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಒಂದಾಗಿ ಮಾಡುತ್ತೇನೆ ಎಂದರು.

ವಿಶ್ವವಿದ್ಯಾಲಯದ ಎಲ್ಲ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಈಗಾಗಲೇ ಸಿಬಿಸಿಎಸ್ ಪಠ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಗಿದೆ. ಸಿಬಿಸಿಎಸ್ ಪಠ್ಯಕ್ರಮದಿಂದ ಜಾಗತಿಕ ಗುಣಮಟ್ಟದ ಉನ್ನತ ಶಿಕ್ಷಣವನ್ನು ಈ ಭಾಗದ ಜನತೆಗೆ ಒದಗಿದಂತಾಗುವುದು. ಅದಕ್ಕಾಗಿ ವಿಶ್ವವಿದ್ಯಾಲಯವು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ಹೇಳಿದರು.

ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯುವಂತೆ ಶಿಕ್ಷಣವನ್ನು ನೀಡುವುದಾಗಿ ಹೇಳಿದ ಅವರು, ವಿವಿಯಲ್ಲಿ 19 ಸ್ನಾತಕೋತ್ತರ ಕೋರ್ಸ್‌ಗಳಿದ್ದು, ಈ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಕೋರ್ಸ್‌ಗಳಿಗಾಗಿ ಬೇರೆ ಬೇರೆ ವಿವಿಗಳಿಗೆ ಹೋಗುತ್ತಿದ್ದಾರೆ. ಹಾಗಾಗಿ ಮುಂಬರುವ 2020-21ನೇ ಸಾಲಿನಿಂದ ಹೆಚ್ಚಿನ ಕೋರ್ಸ್‌ಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.

ರಾಣಿ ಚನ್ನಮ್ಮ ವಿವಿಯು ರಾಷ್ಟ್ರೀಯ ಹೆದ್ದಾರಿ-4ಕ್ಕೆ ಹೊಂದಿಕೊಂಡಂತೆ ಇರುವ 168.76 ಎಕರೆ ಪ್ರದೇಶವು ವಿಶ್ವವಿದ್ಯಾಲಯಕ್ಕೆ ಈವರೆಗೂ ಹಸ್ತಾಂತರವಾಗದೇ ಇರುವುದು ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತೊಡಕನ್ನುಂಟುಮಾಡಿದೆ ಎಂದು ರಾಮಚಂದ್ರಗೌಡ ಹೇಳಿದರು.

ವಿವಿಯು ವಿಜಯಪುರ, ಬಾಗಲಕೋಟೆ ಮತ್ತು ಜಮಖಂಡಿಗಳಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ತೆರೆದಿದ್ದು, ಅವಶ್ಯಕತೆಗಳಿಗನುಗುಣವಾಗಿ ಹೆಚ್ಚಿನ ಅಧ್ಯಯನ ವಿಭಾಗಗಳನ್ನು ಹಾಗೂ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಅವರು ತಿಳಿಸಿದರು.

ವಿಜಯಪುರದಲ್ಲಿ 31 ಎಕರೆ, ಜಮಖಂಡಿಯಲ್ಲಿ 72 ಎಕರೆ ಹಾಗೂ ಬಾಗಲಕೋಟೆಯಲ್ಲಿ ಜಮೀನು ಪಡೆದುಕೊಳ್ಳುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡವು 4.80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಮಗಾರಿಯು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಮೂರನೇ ಹಂತದ ಕಾಮಗಾರಿಗೆ 10 ಕೋಟಿ ರೂ.ಅನುಮೋದನೆ ದೊರಕಿದ್ದು ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸುವುದಾಗಿ ರಾಮಚಂದ್ರಗೌಡ ಹೇಳಿದರು.

ಈ ಸಂದರ್ಭದಲ್ಲಿ ವಿವಿಯ ಮೌಲ್ಯಮಾಪನ ಕುಲಪತಿ ಪ್ರೊ.ರಂಗರಾಜ ವನದುರ್ಗ, ಕುಲಸಚಿವ ಬಸವರಾಜ ಪದ್ಮಶಾಲಿ, ಹಣಕಾಸು ಅಧಿಕಾರಿ ಶಂಕರಾನಂದ ಬನಶಂಕರಿ, ಡಾ.ಚಂದ್ರಶೇಖರ ವಾಗ್ಮರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X