ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕುಂದಾಪುರ, ಆ.3: ಕಳೆದ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೋಣಿ ಗ್ರಾಮದ ಮೂಡುಹಿತ್ಲು ಕೆರೆಕಟ್ಟೆ ನಿವಾಸಿ ಸಂಜೀವ ಪೂಜಾರಿ(50) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.2ರಂದು ರಾತ್ರಿ ಮನೆಯ ಮಲಗುವ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಕಾಲು ನೋವಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜು.31 ರಂದು ವಿಷ ಸೇವಿಸಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಪೆರ್ಡೂರು ಗ್ರಾಮದ ಹೊಸಂಗಡಿಯ ಅಣ್ಣಯ್ಯ ಕುಲಾಲ್ (68) ಎಂಬವರು ಆ.2ರಂದು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





