ಕೆಎಂಸಿಯಲ್ಲಿ ಯುರೋಡೈನಾಮಿಕ್ ಲ್ಯಾಬ್ ಉದ್ಘಾಟನೆ
ಮಣಿಪಾಲ, ಆ.3: ಆಧುನಿಕ ಯುರೋಡೈನಾಮಿಕ್ ಪ್ರಯೋಗಾಲಯವೊಂದು ಆ.4ರ ಬೆಳಗ್ಗೆ 11 ಗಂಟೆಗೆ ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆಯಲ್ಲಿ ಉದ್ಘಾಟನೆಗೊಳ್ಳಲಿದೆ.
ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಮಣಿಪಾಲದ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆ ಸಭಾಂಗಣದಲ್ಲಿ ಈ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್. ಎಸ್.ಬಲ್ಲಾಳ್ ವಹಿಸಲಿದ್ದಾರೆ. ಕುಲಪತಿ ಡಾ.ಎಚ್.ವಿನೋದ್ ಭಟ್, ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆ ಎಂದು ಕೆಎಂಸಿಯ ಪ್ರಕಟಣೆ ತಿಳಿಸಿದೆ.
Next Story





