ಜಮ್ಮು ಕಾಶ್ಮೀರ: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ಆ. 3: ಜಮ್ಮು ಹಾಗೂ ಕಾಶ್ಮೀರದ ಬಾರಾಮುಲ್ಲಾ ಹಾಗೂ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಪ್ರತ್ಯೇಕ ಎನ್ಕೌಂಟರ್ನಲ್ಲಿ ಶನಿವಾರ ಇಬ್ಬರು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆ ಶುಕ್ರವಾರ ಆರಂಭಿಸಿದ ಎನ್ಕೌಂಟರ್ನಲ್ಲಿ ಉತ್ತರಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರೆ ಪಟ್ಟಣದಲ್ಲಿ ಅಪರಿಚಿತ ಉಗ್ರನೋರ್ವ ಹತನಾಗಿದ್ದಾನೆ ಹಾಗೂ ದಕ್ಷಿಣ ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇನ್ನೋರ್ವ ಉಗ್ರ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾರಾಮುಲ್ಲಾದ ಸೋಪೊರೆಯ ವಾರ್ಪೊರೆ ಪ್ರದೇಶದಲ್ಲಿ ಉಗ್ರರ ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭದ್ರತಾ ಪಡೆ ಆ ಪ್ರದೇಶವನ್ನು ಸುತ್ತುವರಿಯಿತು ಹಾಗೂ ಶನಿವಾರ ಬೆಳಗ್ಗಿನ ವರಗೆ ಶೋಧ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಉಗ್ರರು ಗುಂಡು ಹಾರಿಸಿದರು. ಭದ್ರತಾ ಪಡೆ ಪ್ರತಿದಾಳಿ ನಡೆಸಿತು. ಈ ದಾಳಿಯಲ್ಲಿ ಓರ್ವ ಅಪರಿಚಿತ ಉಗ್ರ ಹತನಾದ ಎಂದು ಅವರು ತಿಳಿಸಿದ್ದಾರೆ. ಶೋಪಿಯಾನದ ಪಂಡುಶಾನ್ ಪ್ರದೇಶದಲ್ಲಿ ಭದ್ರತಾ ಪಡೆ ಶುಕ್ರವಾರ ಆರಂಭಿಸಲಾದ ಇನ್ನೊಂದು ಕಾರ್ಯಾಚರಣೆಯಲ್ಲಿ ಜೈಶ್ ಮುಹಮ್ಮದ್ನ ಉಗ್ರ ಮಂಝೂರ್ ಭಟ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.