Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್...

ಬಿಜೆಪಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಎದೆಗುಂದಬೇಕಿಲ್ಲ: ಮಾಜಿ ಸಂಸದ ಧ್ರುವನಾರಾಯಣ್

ವಾರ್ತಾಭಾರತಿವಾರ್ತಾಭಾರತಿ3 Aug 2019 11:01 PM IST
share
ಬಿಜೆಪಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಎದೆಗುಂದಬೇಕಿಲ್ಲ: ಮಾಜಿ ಸಂಸದ ಧ್ರುವನಾರಾಯಣ್

ಮೈಸೂರು,ಆ.3: ಬಿಜೆಪಿಯವರು ಧರ್ಮ ಮತ್ತು ಜಾತಿ ಹೆಸರಿನಲ್ಲಿ ಮತಗಳನ್ನು ಗಳಿಸಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎದೆಗುಂದಬೇಕಿಲ್ಲ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಹೇಳಿದರು.

ನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಶನಿವಾರ ವರುಣಾ ವಿಧಾನಸಭಾ ಕ್ಷೇತ್ರದ ವರುಣಾ ಮತ್ತು ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಕಳೆದ ಮತದಾರರಿಗೆ ಕೃತಜ್ಞತಾ ಮತ್ತು ಆತ್ಮಾವಲೋಕನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಯವರು ಧರ್ಮ ಮತ್ತು ಜಾತಿ ಹೆಸರನ್ನು ಹೇಳಿಕೊಂಡು ಮತ ಪಡೆದು ಗೆಲವು ಸಾಧಿಸಿದ್ದಾರೆ. ಅದು ಹೆಚ್ಚು ದಿನ ನಡೆಯುವುದಿಲ್ಲ, ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸುಲಭವಾಗಿ ಮತ ಗಳಿಸಬಹುದು. ಆದರೆ ಅಭಿವೃದ್ದಿ ವಿಚಾರದಲ್ಲಿ ಮತ ಪಡೆಯುವುದು ಕಷ್ಟ. ಏನೇ ಆದರೂ ಮುಂದೊಂದು ದಿನ ಅಭಿವೃದ್ದಿಗೆ ಜನ ಮಣೆ ನೀಡುತ್ತಾರೆ ಎಂಬ ವಿಶ್ವಾಸವಿದೆ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಎದೆಗುಂದದೆ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಹೇಳಿದರು.

ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ಸಾಕಷ್ಟು ಅಭಿವೃದ್ಧಿಯನ್ನು ಮಾಡಲಾಯಿತು. ಹಾಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಪ್ರತಿ ಕ್ಷೇತ್ರಗಳು ಮತ್ತು ತಾಲೂಕುಗಳಿಗೆ ಹೆಚ್ಚಿನ ಅನುದಾನ ನೀಡಿ ಸಾಕಷ್ಟು ಅಭಿವೃದ್ದಿಪಡಿಸಿದ್ದರು. ನಾನು ಸಹ ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ಕ್ಷೇತ್ರಗಳಿಗೂ  ಶಕ್ತಿ ಮೀರಿ ಕೆಸಲ ಮಾಡಿದ್ದೆ. ಆದರೂ ಕಾಂಗ್ರೆಸ್ ಪಕ್ಷಕ್ಕೆ ಬಹಳ ಹಿನ್ನಡೆಯಾಯಿತು. ಜಾತಿ ಧರ್ಮ ಮತ್ತು ಭಾವನಾತ್ಮಕ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಮತಗಳಿಸಲು ಮುಂದಾದಾಗ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ತಮ್ಮ ಗ್ರಾಮ ಮತ್ತು ಇರುವ ಸ್ಥಳಗಳಲ್ಲಿ ಅಭಿವೃದ್ದಿ ವಿಚಾರವನ್ನು ಮತದಾರರಿಗೆ ತಿಳಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡಿಸುವಲ್ಲಿ ಯಶಸ್ಸು ಗಳಿಸಬೇಕಿತ್ತು. ಅದರಲ್ಲಿ ನಾವು ವಿಫಲರಾಗಿದ್ದೇವೆ. ಏಕೆ ಹೀಗೆ ಆಯಿತು ಎಂಬುದನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಬಹಳ ಸಂಕಷ್ಟದಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆಯನ್ನು ಹೊತ್ತು ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷವನ್ನು ಕಟ್ಟುವ ಜವಾಬ್ದಾರಿ ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಎಂದು ಹೇಳಿದರು.

ರಾಜ್ಯದ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷ ಈ ರೀತಿಯ ಸೋಲನ್ನು ಕಂಡಿರಲಿಲ್ಲ, ಒಟ್ಟು 28 ಕ್ಷೇತ್ರಗಳಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವುದು ಬೇಸರ ತಂದಿದೆ. ಯಾಕೆ ಸೋಲಾಯಿತು ಎಂಬ ವರದಿಯನ್ನು ನಮ್ಮ ಪಕ್ಷದ ಹೈಕಮಾಂಡ್  ಕೇಳಿದೆ. ಹಾಗಾಗಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಅದರಲ್ಲಿ ನಾನೂ ಒಬ್ಬ ಸದಸ್ಯನಾಗಿದ್ದೇನೆ. ಈಗಾಗಲೇ 18 ಕ್ಷೇತ್ರಗಳಿಗೆ ತೆರಳಿ ಮತದಾರರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ಮಾರುತಿ, ಕಾಂಗ್ರೆಸ್ ಮುಖಂಡರಾದ ಸಿ.ಆರ್.ಮಹದೇವ್, ಗುರುಪಾದಸ್ವಾಮಿ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಬಿಎಸ್ಪಿ ಪಕ್ಷದವರು ಮಾಯಾವತಿ ಪ್ರಧಾನಿ ಯಾಗುತ್ತಾರೆ ಎಂದು ಹೇಳಿಕೊಂಡು ಜನರನ್ನು ದಾರಿ ತಪ್ಪಿಸಿದರು. ನಮ್ಮ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲೂ ಇದೇ ರೀತಿಯ ವಾತಾವರಣ ಸೃಷ್ಟಿಯಾಗಿ ಕಾಂಗ್ರೆಸ್ ಪಕ್ಷದ ಮತಗಳು ವಿಭಜನೆಯಾದವು.
-ಆರ್.ಧ್ರುವನಾರಾಯಣ್, ಮಾಜಿ ಸಂಸದ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X