ಪ್ರತಿಕೂಲ ವಾತಾವರಣ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸುವುದಿಲ್ಲ: ಬಿಎಸ್‌ವೈ

ಬೆಂಗಳೂರು, ಆ.4: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಿರುವುದರಿಂದ ಪ್ರತಿಕೂಲ ವಾತಾವರಣವಿರುವ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಾಧ್ಯವಾಗದೆಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಬೆಳಗಾವಿ ಜಿಲ್ಲೆ ಸಮೀಕ್ಷೆ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
‘ಸಿಎಂ ನಾಳೆ(ಆ.5) ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ವೇಳೆ ಅತಿಹೆಚ್ಚು ತೊಂದರೆಗೆ ಒಳಗಾಗಿರುವ ಬೆಳಗಾವಿಗೆ ಯಾಕೆ ಭೇಟಿ ನೀಡುತ್ತಿಲ್ಲ ಎಂದು ಚರ್ಚೆ ನಡೆಯುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಕೂಲ ವಾತಾವರಣವಿರುವ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
Next Story





