Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಮತ್ತೆ ಮುಂಗಾರು ಬಿರುಸು

ಕೊಡಗಿನಲ್ಲಿ ಮತ್ತೆ ಮುಂಗಾರು ಬಿರುಸು

ವಾರ್ತಾಭಾರತಿವಾರ್ತಾಭಾರತಿ4 Aug 2019 10:17 PM IST
share
ಕೊಡಗಿನಲ್ಲಿ ಮತ್ತೆ ಮುಂಗಾರು ಬಿರುಸು

ಮಡಿಕೇರಿ ಆ.4: ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ ಬಿರುಸು ಪಡೆದಿದ್ದು, ಆ.9ರ ವರೆಗೆ ಇದು ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಪ್ರಸ್ತುತ ಜಿಲ್ಲೆಯಲ್ಲಿ ಆಶ್ಲೇಷ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆಯಿಂದ ಹಾನಿಗಳಾಗಿರುವ ಬಗ್ಗೆ ವರದಿಯಾಗಿದೆ. ಮಳೆಯೊಂದಿಗೆ ಗಾಳಿ ಕೂಡ ಕಂಡು ಬಂದಿದ್ದು, ನಾಪೋಕ್ಲು ಭಾಗಮಂಡಲ ರಸ್ತೆಯ ನೆಲಜಿ ಜಂಕ್ಷನ್ ಬಳಿ ರಸ್ತೆಗೆ ಅಡ್ಡಲಾಗಿ ಮರ ಉರುಳಿ ಬಿದ್ದು ಕೆಲಕಾಲ ರಸ್ತೆ ಸಂಚಾರಕ್ಕೆ ತಡೆಯಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಭಾಗಮಂಡಲದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ನೀರಿ ಮಟ್ಟದಲ್ಲೂ ಏರಿಕೆಯಾಗಿದೆ. ಜನವರಿಯಿಂದ ಇಂದಿನವರೆಗೆ ಭಾಗಮಂಡಲಕ್ಕೆ 105 ಇಂಚು ಮಳೆಯಾಗಿದ್ದು, ಭತ್ತದ ಕೃಷಿ ಕಾರ್ಯದಲ್ಲಿ ಪ್ರಗತಿಯೂ ಕಂಡು ಬಂದಿದೆ. ಆದರೆ ಈ ವರ್ಷದ ಮುಂಗಾರು ಮಳೆಯಲ್ಲಿ ಕುಸಿತವೂ ಕಂಡು ಬಂದಿದೆ.

ವಿರಾಜಪೇಟೆ ತಾಲೂಕಿನಲ್ಲೂ ಭಾರಿ ಮಳೆಯಾಗಿದ್ದು, ನಾಂಗಾಲ ಗ್ರಾಮದಲ್ಲಿ ಭೂಕುಸಿದು ಮನೆಗೆ ಬಿದ್ದ ಪರಿಣಾಮ ಅಲ್ಪ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ವಿರಾಜಪೇಟೆ ತಹಶೀಲ್ದಾರ್ ಪುರಂದರ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಗೋಣಿಕೊಪ್ಪದ ವೆಂಕಟಪ್ಪ ಬಡಾವಣೆಯ ಪಕ್ಕದಲ್ಲಿ ಹರಿಯುತ್ತಿರುವ ಕೀರೆ ಹೊಳೆ ಉಕ್ಕಿ ಹರಿದು ಬಡಾವಣೆಯಲ್ಲಿರುವ 12ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೊಳಚೆ ನೀರಿನಿಂದ ಮನೆಯೊಳಗಿದ್ದ ವಸ್ತುಗಳಿಗೂ ಅಪಾರ ಹಾನಿಯಾಗಿದೆ. ಕೀರೆ ಹೊಳೆಯ ಹೂಳು ತೆಗೆಯದಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಭಾನುವಾರ ಬೆಳಗಿನಿಂದಲೇ ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿ ತೊರೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ದಕ್ಷಿಣ ಕೊಡಗಿನ ಪೊನ್ನಂಪೇಟೆ ವ್ಯಾಪ್ತಿಯಲ್ಲಿಯೂ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಿದ್ದು, 5 ಇಂಚು ಮಳೆ ಸುರಿದಿದೆ ಎಂದು ಅಂದಾಜಿಸಲಾಗಿದೆ. ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿಯಲ್ಲಿ ಏಕಾಏಕಿ ನೀರಿನ ಪ್ರಮಾಣ ಏರಿಕೆಯಾಗಿ ನದಿ ಪಾತ್ರದ ಭತ್ತದ ಗದ್ದೆಗಳು ನೀರಿನ ಪ್ರವಾಹಕ್ಕೆ ಸಿಲುಕಿವೆ. ಇದರಿಂದ ಭತ್ತದ ನಾಟಿಗೂ ಹಾನಿಯಾದ ಬಗ್ಗೆಯೂ ವರದಿಯಾಗಿದೆ. ಶೀಮಂಗಲ, ಹುದಿಕೇರಿ, ಪರಕಟಗೇರಿ ಸೇರಿದಂತೆ ಬ್ರಹ್ಮಗಿರಿ ಬೆಟ್ಟ ಶ್ರೇಣಿಯಲ್ಲಿಯೂ 2 ದಿನಗಳಿಂದ ಭಾರಿ ಮಳೆಯಾಗುತ್ತಿದೆ.

ಮಳೆ ವಿವರ: ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 39.53 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಸರಾಸರಿ ಮಳೆ 59.4 ಮಿ.ಮೀ ಮಳೆಯಾಗಿದ್ದು, ವಿರಾಜಪೇಟೆ ತಾಲೂಕಿನಲ್ಲಿ 50.2 ಮಿ.ಮೀ ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆ 9 ಮಿ.ಮೀ. ಮಳೆಯಾಗಿದೆ.   

ಹೋಬಳಿವಾರು ವಿವರ
ಮಡಿಕೇರಿ ಕಸಬಾ 34, ನಾಪೋಕ್ಲು 31.2, ಸಂಪಾಜೆ 22, ಭಾಗಮಂಡಲ 150.4, ವಿರಾಜಪೇಟೆ ಕಸಬಾ 68.8, ಹುದಿಕೇರಿ 48.6, ಶ್ರೀಮಂಗಲ 28.2, ಪೊನ್ನಂಪೇಟೆ 109.6, ಅಮ್ಮತ್ತಿ 22, ಬಾಳೆಲೆ 24.1, ಸೋಮವಾರಪೇಟೆ ಕಸಬಾ 6.2, ಶನಿವಾರಸಂತೆ 8.2, ಶಾಂತಳ್ಳಿ 12.2, ಕೊಡ್ಲಿಪೇಟೆ 11.4, ಕುಶಾಲನಗರ 4.2, ಸುಂಟಿಕೊಪ್ಪ 12.2 ಮಿ.ಮೀ. ಮಳೆಯಾಗಿದೆ.        

ಹಾರಂಗಿ ವಿವರ:
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಪ್ರಸ್ತುತ ಜಲಾಶಯದಲ್ಲಿ 2833.31 ಅಡಿಗಳಷ್ಟು ನೀರಿನ ಸಂಗ್ರಹವಿದೆ. ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನೂ 26 ಅಡಿಗಳಷ್ಟು ನೀರಿನ ಅಗತ್ಯವಿದೆ. ಹಾರಂಗಿ ಜಲಾಶಯಕ್ಕೆ 1190 ಕ್ಯುಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ಜಲಾಶಯದಿಂದ ನದಿಗೆ 30 ಕ್ಯುಸೆಕ್ ಮತ್ತು ನಾಲೆಗೆ 1200 ಕ್ಯುಸೆಕ್ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X