ಕೋಟೇಶ್ವರ: ಲಾರಿ ಢಿಕ್ಕಿ; ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು
ಕುಂದಾಪುರ, ಆ.4: ಲಾರಿಯೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ರಾತ್ರಿ 8.30ರ ಸುಮಾರಿಗೆ ನಡೆದಿದೆ.
ಮೃತರನ್ನು ಸಾಸ್ತಾನದ ವಿವೇಕ್ (35) ಎಂದು ಗುರುತಿಸಲಾಗಿದೆ.
ಅವರು ಪೈ ಇಂಟರ್ನ್ಯಾಷನಲ್ ಮಳಿಗೆಯ ವ್ಯವಸ್ಥಾಪಕರಾಗಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story